Tuesday, April 9, 2024

ನಾಳೆ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ ರೂಪೇಶ್‌ ಶೆಟ್ಟಿ ಅಭಿನಯದ ‘ಸರ್ಕಸ್‌’ ತುಳು ಸಿನಿಮಾ

ಸೂಪರ್ ಹಿಟ್ ತುಳು ಸಿನಿಮಾ ‘ಸರ್ಕಸ್’ ಅನ್ನು ಪ್ರಸಾರ ಮಾಡಲು ಸ್ಟಾರ್ ಸುವರ್ಣ ಸಜ್ಜಾಗಿದೆ.

ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ನಾಯಕರಾಗಿ ನಟಿಸಿರುವ ಹಾಸ್ಯಮಯ ತುಳು ಸಿನಿಮಾ ‘ಸರ್ಕಸ್’ ಕೋಸ್ಟಲ್‌ವುಡ್‌ನಲ್ಲಿ ಹೊಸ ದಾಖಲೆಯನ್ನೇ ಸೃಷ್ಟಿಸಿರುವುದು ಸಿನಿ ಪ್ರಿಯರಿಗೆ ತಿಳಿದೇ ಇದೆ. ಬರೋಬ್ಬರಿ 13 ದೇಶಗಳಲ್ಲಿ ಬಿಡುಗಡೆಗೊಂಡಿರುವ ಮೊದಲ ತುಳು ಸಿನಿಮಾ ಎಂಬ ಹೆಗ್ಗಳಿಕೆಗೆ ‘ಸರ್ಕಸ್’ ಸಿನಿಮಾ ಪಾತ್ರವಾಗಿದ್ದು ಇದೀಗ ಈ ಸಿನಿಮಾ ಕಿರುತೆರೆಯಲ್ಲಿ ಮೋಡಿ ಮಾಡಲಿದೆ.

ಸರ್ಕಸ್’ ಸಿನಿಮಾದ ಟೈಟಲ್ ಸಾಂಗ್ ಅಂತೂ ಯುವ ಜನತೆಯ ಮನಗೆದ್ದಿದ್ದು ಮಾತ್ರವಲ್ಲದೇ ಸೋಶಿಯಲ್ ಮೀಡಿಯಾದಲ್ಲಿಯೂ ಕೂಡಾ ಅತೀ ಹೆಚ್ಚು ವೈರಲ್ ಆಗಿತ್ತು. ಇದೀಗ ಮೊಟ್ಟ ಮೊದಲ ಬಾರಿಗೆ ಪ್ರೈಮ್ ಟೈಮ್‌ನಲ್ಲಿ ಪ್ರಸಾರವಾಗುತ್ತಿರುವ ‘ಸರ್ಕಸ್’ ಸಿನಿಮಾವು ಇದೇ ಸೆಪ್ಟೆಂಬರ್ 10 ರಂದು ಸಂಜೆ 6 ಗಂಟೆಗೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ

More from the blog

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…. ರಿಸಲ್ಟ್​ ಚೆಕ್ ಮಾಡೋದು ಹೇಗೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ನಾಳೆ...

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...

300 ರೂ. ಗಡಿಯತ್ತ ಹಸಿ ಕೊಕ್ಕೊ… 900 ರೂ. ಗಡಿಯತ್ತ ಒಣ ಕೊಕ್ಕೊ

ಪುತ್ತೂರು: ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಹಸಿ ಕೊಕ್ಕೊ, ಒಣ ಕೊಕ್ಕೊ ಧಾರಣೆ ಮತ್ತಷ್ಟು ಜಿಗಿದಿದ್ದು, ಹೊರ ಮಾರುಕಟ್ಟೆಯಲ್ಲಿಯೂ ಅತ್ಯಧಿಕ ದರ ದಾಖಲಾಗಿದೆ. ಒಣ ಕೊಕ್ಕೊ 900 ರೂ. ಗಡಿಯತ್ತ, ಹಸಿ ಕೊಕ್ಕೊ 300 ರೂ....

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...