Sunday, April 7, 2024

ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಗೆ ಪೊಲೀಸರಿಂದ ಮಾರ್ಗಸೂಚಿ ಪ್ರಕಟ

ಮಂಗಳೂರು: ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಕಾರ್ಯಕ್ರಮ ಆಯೋಜನೆಗೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಮಾರ್ಗಸೂಚಿ ಪ್ರಕಟಿಸಿದ್ದಾರೆ.

ಮಾರ್ಗಸೂಚಿಯಲ್ಲಿ ಏನಿದೆ…?

 1. ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಕಾರ್ಯಕ್ರಮ ಆಯೋಜಿಸುವವರು ಕಡ್ಡಾಯವಾಗಿ ಪೊಲೀಸ್‌ ಇಲಾಖೆಯಿಂದ ಮುಂಚಿತವಾಗಿ ಅನುಮತಿ ಪಡೆದುಕೊಳ್ಳಬೇಕು.
 2. ಮಡಿಕೆಗಳನ್ನು 14 ಅಡಿ ಎತ್ತರದವರೆಗೆ ಮಾತ್ರ ಕಟ್ಟಬೇಕು. ಮಡಿಕೆಗಳನ್ನು ಹೊರತುಪಡಿಸಿ ಬೇರೆ ಯಾವುದೇ ವಸ್ತುಗಳನ್ನು ಕಟ್ಟಬಾರದು.
 3. ಮಡಿಕೆಗಳನ್ನು ಕಟ್ಟುವಾಗ ಸಾರ್ವಜನಿಕ ವಾಹನ ಸಂಚಾರಕ್ಕೆ ಅಡ್ಡಿಯಾಗದಂತೆ ಸೂಕ್ತ ನಿಗಾ ವಹಿಸಬೇಕು
 4. ಮಡಿಕೆ ಒಡೆಯುವ ಸ್ವಯಂಸೇವಕರ ಮೇಲೆ ತಂಪು ನೀರನ್ನು ಚೆಲ್ಲಬಾರದು.
 5. ಪೊಲೀಸ್‌ ಇಲಾಖೆಯಿಂದ ಅಂತಿಮಗೊಳಿಸಲಾದ ರೂಟ್‌ನಲ್ಲಿ ಮಾತ್ರ ಮೆರವಣಿಗೆ ಸಾಗಬೇಕು.
 6. ಮಡಿಕೆ ಕಟ್ಟುವಾಗ, ಸ್ತಬ್ಧಚಿತ್ರ ತಯಾರಿಸುವಾಗ ಸ್ಥಳದಲ್ಲಿ ಹಾದುಹೋಗಿರುವ ವಿದ್ಯುತ್‌ ತಂತಿ ಬಗ್ಗೆ ಎಚ್ಚರಿಕೆ ವಹಿಸಬೇಕು.
 7. ಮೊಸರು ಕುಡಿಕೆ ಮೆರವಣಿಗೆ ಸಾಗುವ ರಸ್ತೆಗಳಲ್ಲಿ ಸಾಕಷ್ಟು ಬೆಳಕಿನ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು.
 8. ಮೆರವಣಿಗೆಯಲ್ಲಿ ಒಂದು ಸುಸಜ್ಜಿತ ಆ್ಯಂಬುಲೆನ್ಸ್‌ ವ್ಯವಸ್ಥೆಗೊಳಿಸಬೇಕು.
 9. ಸುಪ್ರೀಂಕೋರ್ಟ್‌ ಆದೇಶದಂತೆ ರಾತ್ರಿ 10 ಗಂಟೆಯವರೆಗೆ ಮಾತ್ರ ಧ್ವನಿವರ್ಧಕ ಬಳಸಬೇಕು.
 10. ಯಾವುದೇ ಕಾರಣಕ್ಕೂ ಮೆರವಣಿಗೆಯಲ್ಲಿ ಡಿ.ಜೆ ಬಳಸಬಾರದು.
 11. ಫಿಟ್‌ನೆಸ್‌ ಸರ್ಟಿಫಿಕೇಟ್‌, ಇನ್ಶೂರೆನ್ಸ್‌ ಸರ್ಟಿಫಿಕೇಟ್‌ ಇರುವ ವಾಹನಗಳಲ್ಲಿ ಮಾತ್ರ ಸ್ತಬ್ಧಚಿತ್ರವನ್ನು ಅಳವಡಿಸಬೇಕು.
 12. ಸ್ವಯಂಸೇವಕರನ್ನು ಗುಂಪುಗಳಾಗಿ ವಿಂಗಡಿಸಿ ಮೆರವಣಿಗೆ ಸಾಗುವ ಮಾರ್ಗದಲ್ಲಿ ನಿಯೋಜಿಸಿ ಮೆರವಣಿಗೆಯು ಸುಲಲಿತವಾಗಿ ಸಾಗುವಂತೆ ಮಾಡಬೇಕು.
 13. ಯಾವುದೇ ಧರ್ಮ, ಸಮುದಾಯದ ಭಾವನೆಗಳಿಗೆ ಧಕ್ಕೆಯನ್ನುಂಟು ಮಾಡುವಂತಹ ಟ್ಯಾಬ್ಲೋ, ನೃತ್ಯರೂಪಕ ಇರಬಾರದು.
 14. ಆಸ್ಪತ್ರೆಗಳ ಬಳಿ, ಜನಸಂದಣಿಯ ಮಧ್ಯೆ ಸುಡುಮದ್ದು ಬಳಸಬಾರದು. ರಾತ್ರಿ 10 ಗಂಟೆಯ ಅನಂತರ ಸುಡುಮದ್ದು/ಪಟಾಕಿಗಳನ್ನು ಬಳಸಬಾರದು.
 15. ಕಾರ್ಯಕ್ರಮಕ್ಕೆ ಸಂಬಂಧಿಸಿ ಸಾರ್ವಜನಿಕ ಸ್ಥಳಗಳಲ್ಲಿ ಫ್ಲೆಕ್ಸ್‌ ಮತ್ತು ಬ್ಯಾನರ್‌ಗಳನ್ನು ಅಳವಡಿಸುವ ಪೂರ್ವದಲ್ಲಿ ಸಂಬಂಧಪಟ್ಟ ಸ್ಥಳೀಯ ಪ್ರಾಧಿಕಾರದಿಂದ ಕಡ್ಡಾಯವಾಗಿ ಅನುಮತಿ ಪಡೆದುಕೊಳ್ಳಬೇಕು.
 16. ಕಾರ್ಯಕ್ರಮಕ್ಕೆ ಸಂಬಂಧಿಸಿ ಅಳವಡಿಸುವ ಫ್ಲೆಕ್ಸ್‌, ಬ್ಯಾನರ್‌ಗಳಲ್ಲಿ ಯಾವುದೇ ಪ್ರಚೋದನಾತ್ಮಕ ಬರಹಗಳು, ಚಿತ್ರಗಳನ್ನು ಬಳಸಬಾರದು.
 17. ಕಾರ್ಯಕ್ರಮಕ್ಕೆ ಸಂಬಂಧಿಸಿ ಅಳವಡಿಸಿದ ಎಲ್ಲ ಫ್ಲೆಕ್ಸ್‌, ಬ್ಯಾನರ್‌ ಮತ್ತು ಬಂಟಿಂಗ್ಸ್‌ಗಳನ್ನು ಕಾರ್ಯಕ್ರಮ ಮುಗಿದ ಕೂಡಲೇ ಸಂಘಟಕರೇ ಕಡ್ಡಾಯವಾಗಿ ತೆರವುಗೊಳಿಸಬೇಕು.
 18. ಕಾರ್ಯಕ್ರಮಕ್ಕೆ ಬರುವವರ ವಾಹನ ಪಾರ್ಕಿಂಗ್‌ಗೆ ಸ್ಥಳ ಗುರುತಿಸಬೇಕು. ಮೆರವಣಿಗೆ ಹಾದುಹೋಗುವ ರಸ್ತೆಯಲ್ಲಿ ವಾಹನಗಳ ನಿಲುಗಡೆಯಾಗದಂತೆ ಸ್ವಯಂಸೇವಕರನ್ನು ನಿಯೋಜಿಸಬೇಕು.
 19. ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ಬಂದೋಬಸ್ತ್ ಕರ್ತವ್ಯದಲ್ಲಿರುವ ಪೊಲೀಸ್‌ ಅಧಿಕಾರಿಗಳ ಸೂಚನೆಗಳನ್ನು ಪಾಲಿಸಬೇಕು. ಪೊಲೀಸರೊಂದಿಗೆ ಸಂಘಟಕರು ಸಹಕರಿಸಬೇಕು.

ಧ್ವನಿವರ್ಧಕ ಅಳವಡಿಕೆ ಸೂಚನೆಗಳು

 1. ಸ್ತಬ್ಧಚಿತ್ರಗಳಲ್ಲಿ, ಕಾರ್ಯಕ್ರಮ ಸ್ಥಳಗಳಲ್ಲಿ ಧ್ವನಿವರ್ಧಕವನ್ನು ಅಳವಡಿಸುವ ಮೊದಲು ಪೊಲೀಸ್‌ ಇಲಾಖೆಯಿಂದ ಪಡೆಯಲಾದ ಪರವಾನಿಗೆಯನ್ನು ಪರಿಶೀಲಿಸಿ ಅನುಮತಿ ಇದ್ದಲ್ಲಿ ಮಾತ್ರ ಧ್ವನಿವರ್ಧಕವನ್ನು ಅಳವಡಿಸಬೇಕು.
 2. ಪೊಲೀಸ್‌ ಇಲಾಖೆಯಿಂದ ನೀಡಲಾದ ಪರವಾನಿಗೆಯಲ್ಲಿ ನಿಗದಿಪಡಿಸಿದ ಸಮಯದವರೆಗೆ ಮಾತ್ರ ಧ್ವನಿವರ್ಧಕ ಬಳಸಬೇಕು.
 3. ಡಿ.ಜೆ. ಬಳಸಲು ಅವಕಾಶವಿಲ್ಲ.
 4. ಆಸ್ಪತ್ರೆ, ಶಿಕ್ಷಣ ಸಂಸ್ಥೆಗಳ ಬಳಿ ಧ್ವನಿವರ್ಧಕ ಅಳವಡಿಸಬಾರದು ಎಂದು ಪೊಲೀಸ್‌ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

 

More from the blog

ರಾಜ್ಯದಲ್ಲಿ 60 ಮಂದಿಯ ನಾಮಪತ್ರ ತಿರಸ್ಕೃತ

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳು 492 ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 13 ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯ ಮುಗಿದಿದೆ. 276 ನಾಮಪತ್ರಗಳು ಕ್ರಮಬದ್ಧವಾಗಿದ್ದು, 60 ನಾಮಪತ್ರಗಳು...

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...