Thursday, October 26, 2023

ಸೌಜನ್ಯ ಕೊಲೆ ಪ್ರಕರಣ : ಪ್ರಜಾಪ್ರಭುತ್ವ ವೇದಿಕೆ, ಹಿಂಜಾವೇ ವತಿಯಿಂದ ಪ್ರತಿಭಟನೆ

Must read

ಬೆಳ್ತಂಗಡಿ: ಪ್ರಜಾಪ್ರಭುತ್ವ ವೇದಿಕೆ ಬೆಳ್ತಂಗಡಿ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ವತಿಯಿಂದ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಮರು ತನಿಖೆ ಹಾಗೂ ಪ್ರಕರಣದ ನೈಜ ಆರೋಪಿಗಳನ್ನು ರಕ್ಷಿಸಿದವರನ್ನು ಕಾನೂನಿನ ಮುಂದೆ ತರಬೇಕು ಎಂದು ಆಗ್ರಹಿಸಿ ಬೆಳ್ತಂಗಡಿ ಮಿನಿ ವಿಧಾನ ಸೌಧದ ಎದುರು ಬೃಹತ್‌ ಪ್ರತಿಭಟನೆ ನಡೆಯುತ್ತಿದೆ.

ಮಹೇಶ್‌ ಶೆಟ್ಟಿ ತಿಮರೋಡಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಹಾ ಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀಧರ್ಮಪಾಲನಾಥ ಸ್ವಾಮೀಜಿಯವರು ದೀಪ ಬೆಳಗಿಸುವ ಮೂಲಕ ಪ್ರತಿಭಟನೆಗೆ ಚಾಲನೆ ನೀಡಿದರು.

ಪ್ರತಿಭಟನೆಯಲ್ಲಿ ಶ್ರೀ ರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್, ಹೋರಾಟಗಾರ ಗಿರೀಶ್ ಮಟ್ಟಣ್ಣನವರ್, ಮಾನವ ಹಕ್ಕುಗಳ ಹೋರಾಟಗಾರ್ತಿ ಗೀತಾ, ಒಡನಾಡಿ ಸಂಸ್ಥೆಯ ಮುಖಂಡ ಪರಶುರಾಂ, ಹೋರಾಟಗಾರ್ತಿ ಪ್ರಸನ್ನ ರವಿ, ತಮ್ಮಣ್ಣ ಶೆಟ್ಟಿ, ಸೌಜನ್ಯ ತಾಯಿ ಕುಸುಮಾವತಿ ಹಾಗೂ ಇತರರು ಭಾಗವಹಿಸಿದ್ದಾರೆ.

ಜಿಲ್ಲೆಯ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದು, ಬೆಳ್ತಂಗಡಿ ಧರ್ಮಸ್ಥಳ ಸೇರಿದಂತೆ ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ನೂರಾರು ಸಂಖ್ಯೆಯಲ್ಲಿ ಪೊಲೀಸರನ್ನು ಪ್ರತಿಭಟನಾ ಸ್ಥಳದಲ್ಲಿನಿಯೋಜಿಸಲಾಗಿದೆ.

More articles

Latest article