Saturday, April 6, 2024

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹಣ್ಣುಕಾಯಿ ಅಂಗಡಿ ತೆರವು, ಮರು ಏಲಂ ನಡೆಸಲು ಹೈಕೋರ್ಟ್ ಆದೇಶ.

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ರಥಬೀದಿಯಲ್ಲಿರುವ ಹಣ್ಣುಕಾಯಿ,ಚಿನ್ನ ಬೆಳ್ಳಿ ಹರಕೆ ವಸ್ತುಗಳ ಮಾರಾಟದ ಅಂಗಡಿ ,ಆದಿಸುಬ್ರಹ್ಮಣ್ಯದ ಹಣ್ಣುಕಾಯಿ ಅಂಗಡಿಗಳನ್ನು ಕ್ರಮವಾಗಿ ಗುರುಪಾದ, ವಿಜಯಕುಮಾರ್ ಮತ್ತು ಕಾರ್ತಿಕ್ ಎಂಬವರು ಒಂದು ವರ್ಷದ ಅವಧಿಗೆ ಹರಾಜಿನಲ್ಲಿ ಪಡಕೊಂಡಿದ್ದರು .ಕರಾರುಪತ್ರದ ಅವಧಿ ಕಳೆದ ಏಪ್ರಿಲ್ ತಿಂಗಳಿನಲ್ಲಿ ಕೊನೆಗೊಂಡಿದ್ದರೂ ಚುನಾವಣೆಯ ನೀತಿಸಂಹಿತೆ ಕಾರಣದಿಂದ ಮರು ಹರಾಜು ನಡೆಸಲು ಸಾಧ್ಯವಾಗಿರಲಿಲ್ಲ. ಸದ್ರಿ ಗುತ್ತಿಗೆದಾರರು ಅಂಗಡಿಗಳನ್ನು ತೆರವುಗೊಳಿಸದೇ ಕಾನೂನುಬಾಹಿರವಾಗಿ

ವ್ಯಾಪಾರ ನಡೆಸುತ್ತಿದ್ದರು. ಈ ಮಧ್ಯೆ ಅಂಗಡಿಗಳನ್ನು ಮುಂದಿನ 4 ವರ್ಷದ ಅವಧಿಗೆ ಮುಂದುವರಿಸಿ ನೀಡಬೇಕೆಂದು ಗುತ್ತಿಗೆದಾರರು ಸರಕಾರಕ್ಕೆ ಮನವಿ ಸಲ್ಲಿಸಿದ್ದರು.ಮಾಸ್ಟರ್ ಪ್ಲಾನ್ ಕಾಮಗಾರಿಗಳು ನಡೆಯಲಿರುವ ಕಾರಣ ಗುತ್ತಿಗೆ ಅವಧಿ ಮುಂದುವರೆಸಲು ಸಾಧ್ಯವಿಲ್ಲವೆಂದು ಹಿಂಬರಹ ನೀಡಿದ ಸರ್ಕಾರದ ಕಾರ್ಯದರ್ಶಿ ಯವರು ಗುತ್ತಿಗೆದಾರರ ಅರ್ಜಿಗಳನ್ನು ತಿರಸ್ಕರಿಸಿ ಆದೇಶ ನೀಡಿದ್ದರು. ಗುತ್ತಿಗೆದಾರರು ಸದ್ರಿ ಆದೇಶವನ್ನು ಪ್ರಶ್ನಿಸಿ ದೇವಸ್ಥಾನದ ವಿರುದ್ಧ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ದಾವೆ ಹೂಡಿ ತಡೆಯಾಜ್ಞೆ ಕೋರಿದ್ದರು. ಇದೇ ವೇಳೆ ಸುಬ್ರಹ್ಮಣ್ಯದ ಗ್ರಾಮ ಪಂಚಾಯಿತಿಯ ಸದಸ್ಯ ಹಾಗೂ ಕಾಂಗ್ರೆಸ್ಸಿನ ಗ್ರಾಮ ಸಮಿತಿಯ ಅಧ್ಯಕ್ಷರಾದ ಹರೀಶ ಇಂಜಾಡಿಯವರು ಸದ್ರಿ ಅಂಗಡಿಗಳನ್ನು ನಿಯಮ ಪ್ರಕಾರ ಏಲಂ ನಡೆಸಬೇಕೆಂದು ಕೋರಿ ಸರಕಾರಕ್ಕೆ ನಿರ್ದೇಶನ ನೀಡುವಂತೆ ಸಾರ್ವಜನಿಕ ಹಿತಾಸಕ್ತಿ ದಾವೆ ಹೂಡಿದ್ದರು. ಕೇವಲ ಹದಿನೈದು ದಿನಗಳಲ್ಲಿ ಸದ್ರಿ ಪ್ರಕರಣವನ್ನು ಇತ್ಯರ್ಥಪಡಿಸಿದ ಮಾನ್ಯ ನ್ಯಾಯಾಲಯ ಗುತ್ತಿಗೆದಾರರ ಅರ್ಜಿಗೆ ತಡೆಯಾಜ್ಞೆ ನೀಡಲು ನಿರಾಕರಿಸಿ ತಕ್ಷಣ ಅಂಗಡಿಗಳನ್ನು ತೆರವುಗೊಳಿಸಿ ಹರಾಜು ನಡೆಸುವಂತೆ ಸರಕಾರಕ್ಕೆ ನಿರ್ದೇಶನ ನೀಡಿದ್ದು ಅನಧಿಕೃತವಾಗಿ ವ್ಯಾಪಾರ ನಡೆಸಿದ ಮೂರೂವರೆ ತಿಂಗಳ ಬಾಡಿಗೆಗೆ ಶೇ. 10. ದಂಡನೆ ವಿಧಿಸಿ ಆದೇಶ ನೀಡಿದೆ. ದೇವಸ್ಥಾನದ ಪರವಾಗಿ ಶ್ರೀಮತಿ ವೈಶಾಲಿ ಹೆಗ್ಡೆ ಹಾಗೂ ಹರೀಶ ಇಂಜಾಡಿಯವರ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯ ಪರವಾಗಿ ಹೈಕೋರ್ಟಿನ ನ್ಯಾಯವಾದಿ ಪುತ್ತೂರಿನ ಸೂರ್ಯಂಬೈಲು ರಾಜಾರಾಮ್ ರವರು ವಾದಿಸಿದ್ದರು. ಹೈಕೋರ್ಟಿನ ಆದೇದಂತೆ ಇದೀಗ ಅಂಗಡಿಗಳನ್ನು ತೆರವುಗೊಳಿಸಲಾಗಿದೆ ಎಂದು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯ ಹರೀಶ್ ಇಂಜಾಡಿ ಅವರು ಮಾಧ್ಯಮಕ್ಕೆ ಮಾಹಿತಿ ನೀಡಿದ್ದರು.

More from the blog

ಕಡಬ: ಚೇರು ಪ್ರದೇಶದ ಮನೆಗೆ ಶಂಕಿತರ ಭೇಟಿ : ಊಟ ಮಾಡಿ, ಸಾಮಗ್ರಿ ಪಡೆದು ತೆರಳಿದ ಶಂಕಿತರು

ಸುಬ್ರಹ್ಮಣ್ಯ: ಕಡಬ ಪೊಲೀಸ್‌ ಠಾಣಾ ವ್ಯಾಪ್ತಿಯ ಮನೆಯೊಂದಕ್ಕೆ ಗುರುವಾರ ರಾತ್ರಿ ವೇಳೆ ಶಂಕಿತರ ತಂಡ ಆಗಮಿಸಿ ಊಟ, ಮಾಡಿ ದಿನಸಿ ಸಾಮಾಗ್ರಿಗಳನ್ನು ಪಡೆದು ತೆರಳಿರುವ ವಿಷಯ ಶುಕ್ರವಾರ ಸಂಜೆ ವೇಳೆಗೆ ಬೆಳಕಿಗೆ ಬಂದಿದೆ. ತಾಲೂಕಿನ...

ಬಜರಂಗದಳ ಪುತ್ತೂರು ಜಿಲ್ಲಾ ಸಂಯೋಜಕ ಭರತ್ ಕುಮ್ಡೇಲು ಗಡಿಪಾರು – ಸರಕಾರದ ಹಿಂದೂ ವಿರೋಧಿ ಧೋರಣೆ ನೀತಿಗೆ ಪ್ರಸಾದ್ ಕುಮಾರ್ ರೈ ಖಂಡನೆ

ಬಂಟ್ವಾಳ: ಬಜರಂಗದಳ ಪುತ್ತೂರು ಜಿಲ್ಲಾ ಸಂಯೋಜಕರಾದ ಭರತ್ ಕುಮ್ಡೇಲು ಅವರ ಗಡಿಪಾರು ಅದೇಶ ರಾಜಕೀಯ ಪ್ರೇರಿತ ಷಡ್ಯಂತ್ರವಾಗಿದ್ದು,ಸರಕಾರದ ಹಿಂದೂ ವಿರೋಧಿ ಧೋರಣೆ ನೀತಿಯನ್ನು ವಿಶ್ವಹಿಂದೂ ಪರಿಷತ್ ಬಂಟ್ವಾಳ ‌ಪ್ರಖಂಡದ ಅಧ್ಯಕ್ಷ ನ್ಯಾಯವಾದಿ ಪ್ರಸಾದ್...

ಮದುವೆಗೆ ತೆರಳುತ್ತಿದ್ದ ಬಸ್ ಹಾಗೂ ಕಂಟೈನರ್ ವಾಹನದ ಮಧ್ಯೆ ಭೀಕರ ಅಪಘಾತ : ಹಲವರಿಗೆ ಗಾಯ

ನೆಲ್ಯಾಡಿ: ಖಾಸಗಿ ಬಸ್ ಹಾಗೂ ಕಂಟೈನರ್ ವಾಹನದ ನಡುವೆ ಅಪಘಾತ ಸಂಭವಿಸಿ ಹಲವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಉದನೆ ಎಂಬಲ್ಲಿ ನಡೆದಿದೆ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಲು ಹೊರಟ...

ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ ; ಪ್ರಕರಣ ದಾಖಲು

ಸುಳ್ಯ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಸುಳ್ಯದ ಗಾಂಧಿನಗರದಲ್ಲಿ ನಡೆದಿದೆ. ಇಲ್ಲಿನ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದ ಉತ್ತರ ಕರ್ನಾಟಕ ಮೂಲದ ಕಾರ್ಮಿಕ ಕುಟುಂಬದ ಬಾಲಕಿಗೆ ಅದೇ ಭಾಗದ ಯುವಕನೊಬ್ಬ ಲೈಂಗಿಕ ಕಿರುಕುಳ ನೀಡಿದ್ದು,...