Sunday, April 7, 2024

ಯುವಕನಿಗೆ ಚೂರಿ ಇರಿತ ಪ್ರಕರಣ; ಮೂವರು ಆರೋಪಿಗಳು ಆರೆಸ್ಟ್

ಮಂಗಳೂರು: ಕಳವಾರು ಎಂಬಲ್ಲಿ ಯುವಕನೋರ್ವನ ಮೇಲೆ ಚೂರಿ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಸುರತ್ಕಲ್‌ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಧಿತರನ್ನು ಕಳವಾರು ಬೆಂಕಿನಾಥೇಶ್ವರ ದೇವಸ್ಥಾನ ಬಳಿಯ ನಿವಾಸಿ ಪ್ರಶಾಂತ್‌ ಯಾನೆ ಪಚ್ಚು, ಕಳವಾರು ಆಶ್ರಯಕಾಲನಿ ನಿವಾಸಿ ಧನರಾಜ್ ಮತ್ತು ಕಳವಾರು ಚರ್ಚ್‌ ಗುಡ್ಡೆ ಸೈಟ್‌ ನಿವಾಸಿ ಯಜ್ಞೇಶ್‌ ಎಂದು ಗುರುತಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಕೆಲವು ಆರೋಪಿಗಳಿದ್ದು, ಉಳಿದವರಿಗಾಗಿ ಸುರತ್ಕಲ್‌ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ ಎಂದು ತಿಳಿದು ಬಂದಿದೆ.

ಆಗಸ್ಟ್‌ 31ರಂದು ಕಳವಾರಿನಲ್ಲಿ ಗಲಾಟೆಯಲ್ಲಿ ಗಂಟೆ ರಿಯಾಝ್ ಎಂಬಾತನ ಮೇಲೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಸುರತ್ಕಲ್ ಪೊಲೀಸರು ಕಳವಾರಿನಲ್ಲಿ ಸೆ.3ರಂದು ಶಾಂತಿ ಸಭೆಯನ್ನು ನಡೆಸಿದ್ದರು. ಘಟನೆಗೆ ಸಂಬಂಧಿಸಿದಂತೆ ಮಾತನಾಡಲಿದೆ ಎಂದು ಅಬ್ದುಲ್ ಸಫ್ಘಾನ್ ಎಂಬಾತನನ್ನು ಆರೋಪಿಗಳು ಕರೆದಿದ್ದರು. ಹೀಗಾಗಿ ಅಬ್ದುಲ್‌ ಸಫ್ವಾನ್‌ ತನ್ನ ಸ್ನೇಹಿತ ಮುಹಮ್ಮದ್‌ ಸಫ್ವಾನ್‌ ಎಂಬಾತನೊಂದಿಗೆ ಸಂಜೆ 7:30ರ ಸುಮಾರಿಗೆ ಕಳವಾರು ಗೆಳೆಯರ ಬಳಗ ಬಸ್ಸು ನಿಲ್ದಾಣದ ಬಳಿ ಬೈಕಿನಲ್ಲಿ ತೆರಳುತ್ತಿದ್ದಾಗ ಎದರುಗಡೆಯಿಂದ ಆರೋಪಿಗಳಾದ ಪ್ರಶಾಂತ್ ಮತ್ತು ಧನರಾಜ್ ಎಂಬವರು ತಮ್ಮ ಬೈಕ್ ನಿಂದ ಅಡ್ಡಗಟ್ಟಿ ನಿಲ್ಲಿಸಿ ಅವಾಚ್ಯ ಶಬ್ದಗಳಿಂದ ಬೈದಿದ್ದಲ್ಲದೆ, ಆರೋಪಿ ಧನರಾಜ್‌ ಮಾರಕಾಸ್ತ್ರದಿಂದ ಅಬ್ದುಲ್‌ ಸಫ್ವಾನ್‌ ನ ಕಣ್ಣಿಗೆ ಬಲವಾಗಿ ಗುದ್ದಿದ್ದಾನೆ. ಆರೋಪಿ ಪ್ರಶಾಂತ ಡ್ರಾಗರ್ ಚೂರಿಯಿಂದ ಸಂತ್ರಸ್ತನ ಬಲ ಕಂಕುಳಕ್ಕೆ ತಿವಿದಿದ್ದಾನೆ.

ತಕ್ಷಣ ಸ್ಥಳಕ್ಕೆ ಬಂದ ಇತರ ಆರೋಪಿಗಳ ಪೈಕಿ ಕಳವಾರು ಗಣೇಶ ಎಂಬಾತ ಸಫ್ವಾನ್‌ ನ ಬಲಕೈ ತೋಳಿಗೆ ಚೂರಿಯಿಂದ ಇರಿದಿದ್ದು, ಯಜ್ಞೇಶ ಎಂಬಾತ ಬೆನ್ನಿಗೆ ಚೂರಿಯಿಂದ ಚುಚ್ಚಿದ್ದಾನೆ. ರಕ್ಷಣೆಗೆ ಬಂದ ಸ್ನೇಹಿತ ಮುಹಮ್ಮದ್‌ ಸಫ್ವಾನ್‌ ನನ್ನು ಆರೋಪಿಗಳಾದ ಪುನೀತ್, ಬಬ್ಬು ಗಣೇಶ್, ಪ್ರದೀಪ್ ಮತ್ತು ಇತರರು ರಕ್ಷಣೆಗೆ ಬಾರದಂತೆ ಕೈಯಿಂದ ಹೊಡೆದು ಬಿಗಿಯಾಗಿ ಹಿಡಿದುಕೊಂಡಿದ್ದರು. ಆಗ ಸಾರ್ವಜನಿಕರು ಸೇರಲು ಆರಂಭಿಸಿದಾಗ ಆರೋಪಿಗಳು ಮುಂದಕ್ಕೆ ಕೊಲ್ಲುವುದಾಗಿ ಬೆದರಿಕೆ ಹಾಕಿ ಪರಾರಿಯಾಗಿದ್ದಾರೆ ಎಂದು ಸಂತ್ರಸ್ತ ಅಬ್ದುಲ್‌ ಸಫ್ವಾನ್‌ ದೂರಿನಲ್ಲಿ ತಿಳಿಸಿದ್ದಾರೆ.

ಘಟನೆಯಿಂದ ಅಬ್ದುಲ್‌ ಸಫ್ವಾನ್‌ ಅವರ ಬಲ ಕಂಕುಳ, ಕಣ್ಣು, ಬೆನ್ನು ಮತ್ತು ಬಲಗೈ ತೋಳಿಗೆ ಗಾಯಗಳಾಗಿವೆ.

More from the blog

ರಾಜ್ಯದಲ್ಲಿ 60 ಮಂದಿಯ ನಾಮಪತ್ರ ತಿರಸ್ಕೃತ

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳು 492 ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 13 ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯ ಮುಗಿದಿದೆ. 276 ನಾಮಪತ್ರಗಳು ಕ್ರಮಬದ್ಧವಾಗಿದ್ದು, 60 ನಾಮಪತ್ರಗಳು...

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...