Sunday, April 7, 2024

ವಿಟ್ಲ: ವಿಠಲ್ ಜೇಸೀಸ್ ಶಾಲೆಯಲ್ಲಿ ಸಂಸ್ಕೃತೋತ್ಸವ ಆಚರಣೆ

ವಿಟ್ಲ: ದೇಶದ ಪುನರುತ್ಥಾನಕ್ಕೆ ಸಂಸ್ಕೃತ ಭಾಷೆ ಅಗತ್ಯ, ವಿಜ್ಞಾನವು ವೇದಶಾಸ್ತ್ರದಲ್ಲಿ ಅಡಗಿದೆ ಎಂದು ಸಂಸ್ಕೃತದ ಮಹತ್ವವನ್ನು ಸಂಸ್ಕೃತ ಭಾರತೀಯ ಕಾರ್ಯಕರ್ತೆ ಮಮತೇಶ್ವರಿ ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು . ಸಂಸ್ಕೃತ ಭಾಷಾ ಸರಳತೆ, ಸುಭಾಷಿತಗಳ ಬಗ್ಗೆ ಹಿರಿಯ ಸಂಸ್ಕೃತ ಅಧ್ಯಾಪಕ ಕೃಷ್ಣ ಭಟ್ ಅವರು ಹಿತವಚನಗಳನ್ನಾಡಿದರು. ಭಾಷೆಗಳ ಸುಸ್ಪಷ್ಟತೆಗೆ ಸಂಸ್ಕೃತದ ಕೊಡುಗೆ ಅಪಾರ, ಸಂಸ್ಕೃತ ಭಾಷಾ ಪ್ರಬುದ್ಧತೆ ರಾಷ್ಟ್ರದಲ್ಲಿ ಮತ್ತೂಮ್ಮೆ ವೈಭವನ್ನು ಸಾರಲಿ ಎಂದು ಶಾಲಾ ಪ್ರಾಂಶುಪಾಲ ಜಯರಾಮ ರೈ ರವರು ತಿಳಿಸಿದರು. ಸಂಸ್ಕೃತ ಸಕ್ಕರೆಯಷ್ಟು ಸಿಹಿ, ಅಗೆದಷ್ಟು ಮುಗಿಯದ ಭಂಡಾರ ಎಂದು ನಿರ್ದೇಶಕ ಹಸನ್ ವಿಟ್ಲ ವಿದ್ಯಾರ್ಥಿಗಳಿಗೆ ಸಲಹೆಯನಿತ್ತರು. ಅಧ್ಯಕ್ಷತೆಯನ್ನು ವಹಿಸಿದ ಶ್ರೀ ಪ್ರಕಾಶ್ ಕುಕ್ಕಿಲ ಅವರು ಸಂಸ್ಕೃತ ಸಂಸ್ಕಾರಕ್ಕೆ ದಾರಿ ತೋರುತ್ತದೆ ಎಂದರು.

ಕಾರ್ಯಕ್ರಮದಲ್ಲಿ 2022-23 ನೇ ಸಾಲಿನ ಹತ್ತನೇ ತರಗತಿಯ ಸಂಸ್ಕೃತ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳಿಸಿದ

ವಿದ್ಯಾರ್ಥಿಗಳಾದ ಶ್ರೀವರ್ಣ, ಆದರ್ಶ್ ಮರಡಿತ್ತಾಯ. ತೇಜಸ್ವಿ ತೆಂಕಬೈಲು ಹಾಗೂ ಅಖಿಲೇಶ್ ಎಂ ರನ್ನು ಗೌರವಿಸಲಾಯಿತು. ಸಂಸ್ಕೃತೋತ್ಸವದ ಅಂಗವಾಗಿ ನಡೆಸಿದ ‘ಸ್ಮರಣ ಶಕ್ತಿ ಸ್ಪರ್ಧೆಯ’ ವಿಜೇತರಿಗೆ ಬಹುಮಾನವನ್ನು ನೀಡಲಾಯಿತು.

ಅತಿಥಿಗಳಾಗಿ ನಿರ್ದೇಶಕ ಮೋನಪ್ಪ ಶೆಟ್ಟಿ, ಆಡಳಿತ ಅಧಿಕಾರಿ ರಾಧಾಕೃಷ್ಣ ಎರುಂಬು, ಉಪ ಪ್ರಾಂಶುಪಾಲೆ ಜ್ಯೋತಿ ಶೆಣೈ ಉಪಸ್ಥಿತರಿದ್ದರು. ಬಳಿಕ ವಿದ್ಯಾರ್ಥಿಗಳಿಂದ ಸಂಸ್ಕೃತ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿನಿಯರು ಪ್ರಾರ್ಥಿಸಿ, ಶ್ರೀವಿದ್ಯಾ ಸ್ವಾಗತಿಸಿದರು. ಕೇಶವ ಶ್ರವಣ ಅವರು ವಂದಿಸಿದರು. ಒಟ್ಟು ಕಾರ್ಯಕ್ರಮವು ಸಂಸ್ಕೃತ ವಾತಾವರಣವನ್ನು ರೂಪಿಸಿದ್ದು, ಪೂರ್ಣ ಸಂಸ್ಕೃತ ನಿರೂಪಣೆಯನ್ನು ವಿದ್ಯಾರ್ಥಿಗಳಾದ ಮೊಹಮ್ಮದ್ ರಾಝೀ ಹಾಗೂ ನರೇಶ ನಡೆಸಿಕೊಟ್ಟರು. ಸಂಸ್ಕೃತ ಶಿಕ್ಷಕಿ ಸಂಧ್ಯಾ ಕಾರ್ಯಕ್ರಮ ಸಂಯೋಜಿಸಿದ್ದರು. ಶಿಕ್ಷಕ – ಶಿಕ್ಷಕರೇತರ ವೃಂದದವರು ಸಹಕರಿಸಿದರು.

More from the blog

ರಾಜ್ಯದಲ್ಲಿ 60 ಮಂದಿಯ ನಾಮಪತ್ರ ತಿರಸ್ಕೃತ

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳು 492 ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 13 ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯ ಮುಗಿದಿದೆ. 276 ನಾಮಪತ್ರಗಳು ಕ್ರಮಬದ್ಧವಾಗಿದ್ದು, 60 ನಾಮಪತ್ರಗಳು...

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...