Wednesday, April 17, 2024

ಬಾಲಗೋಕುಲ ಸಮಿತಿ ವಿಟ್ಲ ಕ್ಷೇತ್ರದ ೧೬ ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

ವಿಟ್ಲ: ಸಮಾಜದಲ್ಲಿ ದುರಂತ ನಡೆಯುವುದನ್ನು ತಪ್ಪಿಸಲು ಸಂಸ್ಕಾರಯುತ ಶಿಕ್ಷಣದಿಂದ ಸಾಧ್ಯ ಎಂದು ಸಂಸ್ಕಾರ ಸಂಸ್ಕೃತಿಯನ್ನು ಕಲಿಸುವುದರಲ್ಲಿ ಬಾಲಗೋಕುಲ ಶಿಕ್ಷಣ ಸಂಚಲನವನ್ನು ಮೂಡಿಸಿದೆ ಎಂದು ಸಾಮಾಜಿಕ ಕಾರ್ಯಕರ್ತ ಲೋಕೇಶ್ ಜೋಡುಕಲ್ಲು ಹೇಳಿದರು.

ಅವರು ಬುಧವಾರ ವಿಟ್ಲ ವಿಠಲ ಸುವರ್ಣ ರಂಗಮಂದಿರದಲ್ಲಿ ಬಾಲಗೋಕುಲ ಸಮಿತಿ ವಿಟ್ಲ ಕ್ಷೇತ್ರದ ೧೬ ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯ ಧಾರ್ಮಿಕ ಕಾರ್ಯಕ್ರಮದಲ್ಲಿ ಮಾತನಾಡಿದರು.

ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಶೋಭಾಯಾತ್ರೆಗೆ ಸಿವಿಲ್ ಇಂಜಿನಿಯರ್ ದಿನೇಶ್ ಮಾಡ್ತೇಲ್ ಚಾಲನೆ ನೀಡಿದರು. ಹಿರಿಯ ಸ್ವಯಂ ಸೇವಕ ರಾಮಪ್ಪ ಭಂಡಾರಿ ಚಂದಳಿಕೆ ಕಾರ್ಯಕ್ರಮದಲ್ಲಿ ದೀಪಪ್ರಜ್ವಲನೆ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಇಡ್ಕಿದು ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ ಶೆಟ್ಟಿ ಬೀಡಿನಮಜಲು ವಹಿಸಿದ್ದರು.

ದೇವಸ್ಥಾನದ ಮುಂಭಾಗದಿಂದ ವಿಟ್ಲ ಮುಖ್ಯ ರಸ್ತೆಗಳ ಮೂಲಕ ವಿಠಲ ಪದವಿ ಪೂರ್ವ ಕಾಲೇಜಿನ ತನಕ ಶ್ರೀಕೃಷ್ಣ ವೇಷಧಾರಿ ಮಕ್ಕಳ ಶೋಭಾಯಾತ್ರೆ ನಡೆಯಿತು. ಚೆಂಡೆ, ಭಜನಾ ತಂಡಗಳು, ಬಣ್ಣದ ಕೊಡೆಗಳು, ವಿಶೇಷ ರಥದಲ್ಲಿ ಶ್ರೀಕೃಷ್ಣನ ವಿಗ್ರಹ ಮೆರವಣಿಗೆಯ ಮೆರುಗು ಹೆಚ್ಚಿಸಿತು. ಆರ್ ಕೆ. ಯಕ್ಷಗಾನ ಕಲಾ ಕೇಂದ್ರದ ವಿದ್ಯಾರ್ಥಿಗಳಿಂದ ಶ್ರೀಕೃಷ್ಣ ಲೀಲಾಮೃತ ಯಕ್ಷಗಾನ ನಡೆಯಿತು.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಹಕಾರ್ಯವಾಹ ರಾಜೇಶ್ ಶಾಂತಿನಗರ, ಗೌರವಾಧ್ಯಕ್ಷ ಜಯರಾಮ ಬಳ್ಳಾಲ್, ಲಯನ್ಸ್ ಕ್ಲಬ್ ಅಧ್ಯಕ್ಷೆ ಪೊನ್ನೆತ್ತಾಡಿ ಜಲಜಾಕ್ಷಿ ಬಾಲಕೃಷ್ಣ ಗೌಡ ಮತ್ತಿತರರು ಉಪಸ್ಥಿತರಿದ್ದರು.

ಸಮಿತಿ ಅಧ್ಯಕ್ಷ ವೀರಪ್ಪ ಗೌಡ ರಾಯರಬೆಟ್ಟು ಸ್ವಾಗತಿಸಿದರು. ಸಂಚಾಲಕ ಪರಮೇಶ್ವರ ಆಚಾರ್ಯ ಪ್ರಸ್ತಾವನೆಗೈದರು. ಪ್ರಧಾನ ಕಾರ್ಯದರ್ಶಿ ರವಿಶಂಕರ ವಂದಿಸಿದರು. ರಾಧಾಕೃಷ್ಣ ಎರುಂಬು ಕಾರ್ಯಕ್ರಮ ನಿರೂಪಿಸಿದರು.

More from the blog

ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ: ಸುಡುಬಿಸಿಲಿಗೂ ಜಗ್ಗದ ಉತ್ಸಾಹ

ವಿಟ್ಲ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳವಾರ ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಪ್ರಚಾರ ಕಾರ್ಯ ನಡೆಸಿದರು. ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಬಳಿಕ...

ಮಾಜಿ ಸಚಿವ ಜನಾರ್ಧನ ಪೂಜಾರಿ ಅವರ ನಿವಾಸಕ್ಕೆ ತೆರಳಿ ಮತದಾನ ಪ್ರಕ್ರಿಯೆ

ಚುನಾವಣಾ ಆಯೋಗದ ನಿರ್ದೇಶನದಂತೆ ಕಳೆದ ಬಾರಿಯಂತೆ ಸೆಕ್ಟರ್‌ ಅಧಿಕಾರಿಗಳ ನೇತೃತ್ವದಲ್ಲಿ ಮತಗಟ್ಟೆ ಅಧಿಕಾರಿಗಳ ತಂಡ ಮನೆ-ಮನೆಗೆ ತೆರಳಿ ಮತದಾನ ಮಾಡಿಸುತ್ತಿದೆ. ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 205-ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 85...

ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ : ಬಜರಂಗದಳ, ವಿ.ಹಿಂ.ಪರಿಷತ್ ಕಲ್ಲಡ್ಕ ಪ್ರಖಂಡದಿಂದ ಖಂಡನೆ

ಬಂಟ್ವಾಳ: ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ ನಡೆಸಿದ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ಸಂಜೆ ವೇಳೆ ನಡೆದಿದೆ. ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ...

ಲೋಕಸಭಾ ಚುನಾವಣೆ : ಮತಯಂತ್ರಗಳ ಕಮಿಷನಿಂಗ್‌ ಕಾರ್ಯ…. ಸ್ಥಳಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ಭೇಟಿ

ಬಂಟ್ವಾಳ :ಮೊಡಂಕಾಪಿನಲ್ಲಿರುವ ಇನ್ಫೆಂಟ್‌ ಜೀಸಸ್‌ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಈ ದಿನ ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 205 ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಬಳಸಲಾಗುವ ಮತಯಂತ್ರಗಳ ಕಮಿಷನಿಂಗ್‌ ಕಾರ್ಯವು ನಡೆಯಿತು. ಈ ಸಂದರ್ಭದಲ್ಲಿ...