Thursday, April 18, 2024

ವಿಟ್ಲ: ಎಂಡೋಸಲ್ಪಾನ್ ಸಂತ್ರಸ್ತೆಯ ಅತ್ಯಾಚಾರ ಪ್ರಕರಣ – ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ

ವಿಟ್ಲ: ಎಂಡೋಸಲ್ಫಾನ್ ಪೀಡಿತೆಯ ಮೇಲೆ ಅತ್ಯಾಚಾರ ವೆಸಗಿದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಹಾಗೂ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಪ್ರೀತಿ ಕೆ.ಪಿ. ರವರು 10 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ರಾಜೇಶ್ ರೈ (33 ವ.) ಶಿಕ್ಷೆಗೊಳಗಾದ ಆರೋಪಿಯಾಗಿದ್ದಾರೆ.
ಆರೋಪಿ ರಾಜೇಶ್ 2015ರ ಅ.1ರಂದು ತನ್ನದೇ ಊರಿನ 19 ವರ್ಷ ಪ್ರಾಯದ ಎಂಡೋಸಲ್ಫಾನ್ ಪೀಡಿತೆಯನ್ನು ಅತ್ಯಾಚಾರವೆಸಗಿದ್ದರೆಂದು ಆರೋಪಿಸಿ ಪ್ರಕರಣ ದಾಖಲಾಗಿತ್ತು.

ಯುವತಿಯು ಮನೆಯಲ್ಲಿ ಒಬ್ಬಳೇ ಇರುವುದನ್ನು ಅರಿತ ಆರೋಪಿಯು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದರೆಂದು ಆರೋಪಿಸಲಾಗಿದೆ.

ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಂದಿನ ಎಸ್.ಐ. ಪ್ರಕಾಶ್ ದೇವಾಡಿಗರವರು ಪ್ರಕರಣ ದಾಖಲಿಸಿಕೊಂಡಿದ್ದರು.
ಅಂದಿನ ಎಎಸ್ಪಿ ರಾಹುಲ್ ಕುಮಾರ್ ತನಿಖೆ ನಡೆಸಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಾಯ್ದೆಯಡಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದು, ಅದರಲ್ಲಿ ಆರೋಪಿಯ ವಿರುದ್ಧ 27 ಸಾಕ್ಷಿದಾರರನ್ನು ಉಲ್ಲೇಖಿಸಿದ್ದು, ಅದರಲ್ಲಿ 14 ಸಾಕ್ಷಿದಾರರ ವಿಚಾರಣೆ ನಡೆದಿತ್ತು.

ಸೆ.7ರಂದು ನ್ಯಾಯಾಧೀಶರು ಆರೋಪಿಯನ್ನು ದೋಷಿ ಎಂದು ತೀರ್ಮಾನಿಸಿ ಭಾರತೀಯ ದಂಡ ಸಂಹಿತೆ ಕಲಂ 376(2)(ಎಲ್) ಅಡಿಯಲ್ಲಿ 10 ವರ್ಷದ ಕಠಿಣ ಸಜೆ ಹಾಗೂ 10,000 ರೂ. ದಂಡ, ಕಲಂ 448ರಡಿ 3 ತಿಂಗಳ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಅಲ್ಲದೆ ಸಂತ್ರಸ್ತೆಗೆ ಪರಿಹಾರ ನೀಡುವಂತೆ ಕಾನೂನು ಸೇವಾ ಪ್ರಾಧಿಕಾರಕ್ಕೆ ಆದೇಶ ನೀಡಿದೆ. ಸರಕಾರದ ಪರವಾಗಿ ಸರಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ ನಾಯಕ ವಾದಿಸಿದ್ದರು.

More from the blog

ಅಯೋಧ್ಯೆಯಲ್ಲಿ ಅದ್ಧೂರಿ ರಾಮನವಮಿ ; ರಾಮಲಲ್ಲಾ ಹಣೆ ಮೇಲೆ ಸೂರ್ಯ ತಿಲಕ

ಅಯೋಧ್ಯೆ: ಬರೋಬ್ಬರಿ 500 ವರ್ಷಗಳ ಬಳಿಕ ಅಯೋಧ್ಯೆಯಲ್ಲಿ ಮೊದಲ ಶ್ರೀರಾಮನವಮಿಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತಿದೆ. ಮೊದಲ ರಾಮನವಮಿಯಂದು ರಾಮಲಲ್ಲಾನಿಗೆ ಸೂರ್ಯನ ತಿಲಕ ಸ್ಪರ್ಶಿಸಿದ್ದು, ಸೂರ್ಯವಂಶಸ್ಥನಿಗೆ ಸೂರ್ಯನ ಅಭಿಷೇಕ ನೆರವೇರಿಸಲಾಗಿದೆ. ರಾಮನವಮಿ ಅಂಗವಾಗಿ ಮಧ್ಯಾಹ್ನ 12 ಗಂಟೆಗೆ...

ಪುಣಚ: ಸೇತುವೆ ಕುಸಿತ ಪ್ರಕರಣ : ಗುತ್ತಿಗೆದಾರರ ವಿರುದ್ದ ಪ್ರಕರಣ

ವಿಟ್ಲ: ವಿಟ್ಲದ ಪುಣಚ ಗ್ರಾಮದ ಬರೆಂಜಾ - ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯಲ್ಲಿ ನಿರ್ಮಾಣ ಹಂತದಲ್ಲಿ ಸೇತುವೆ ಕುಸಿದುಬಿದ್ದ ಅವಘಡದಲ್ಲಿ ಗಾಯಗೊಂಡ ಏಳು ಮಂದಿ ಕಾರ್ಮಿಕರು ಆಸ್ಪತ್ರೆಗಳಲ್ಲಿ ಚೇತರಿಸುತ್ತಿದ್ದಾರೆ. ಇನ್ನೊಂದೆಡೆ ಈ ಪ್ರಕರಣಕ್ಕೆ...

ಏ.19 -28: ಇತಿಹಾಸ ಪ್ರಸಿದ್ಧ ಕಟ್ಟತ್ತಿಲ ಉರೂಸ್

ವಿಟ್ಲ: ಸಾಲೆತ್ತೂರು ಗ್ರಾಮದ ಕಟ್ಟತ್ತಿಲದಲ್ಲಿ ಅಂತ್ಯ ವಿಶ್ರಾಂತಿ ಹೊಂದುತ್ತಿರುವ ಇತಿಹಾಸ ಪ್ರಸಿದ್ಧ ಅಸ್ಸಯ್ಯಿದ್ ವಲಿಯುಲ್ಲಾಹಿ (ಖ.ಸಿ) ಅವರ ಹೆಸರಿನಲ್ಲಿ 2 ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಮತ್ತು ವಿವಿಧ ಆಧ್ಯಾತ್ಮಿಕ ಕಾರ್ಯಕ್ರಮ...

ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ

ಕನ್ನಡದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ನಿಧನರಾಗಿದ್ದಾರೆ. 81 ವರ್ಷದ ದ್ವಾರಕೀಶ್ ಅವರು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ದ್ವಾರಕೀಶ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ಇವರು1942 ಆಗಸ್ಟ್ 19ರಂದು ಮೈಸೂರು...