Thursday, April 11, 2024

ಸೆಪ್ಟೆಂಬರ್ 24 ರಂದು ಸೌಜನ್ಯ ನ್ಯಾಯಪರ ಹೋರಾಟ ಸಮಿತಿಯಿಂದ ಪ್ರತಿಭಟನೆ

ವಿಟ್ಲ: ಸೌಜನ್ಯ ನ್ಯಾಯಪರ ಹೋರಾಟ ಸಮಿತಿ ವಿಟ್ಲ ಇದರ ವತಿಯಿಂದ ಸೆಪ್ಟೆಂಬರ್ 24 ರಂದು ವಿಟ್ಲ ಬಸ್ಸು ನಿಲ್ದಾಣದಲ್ಲಿ ಪ್ರತಿಭಟನಾ ಸಭೆ ನಡೆಯಲಿದೆ ಎಂದು ಸಮಿತಿ ಸಂಚಾಲಕ ದೇವಿಪ್ರಸಾದ್ ಶೆಟ್ಟಿ ಬೆಂಞನ್ತಿಮಾರು ವಿಟ್ಲದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವನ್ನು ಎಸ್ಐಟಿ ತನಿಖೆಗೆ ಆಗ್ರಹಿಸಿ, ತನಿಖೆಯನ್ನು ನಿಷ್ಕ್ರಿಯಗೊಳಿಸಿದ ತನಿಖಾಧಿಕಾರಿಗಳನ್ನು, ಪೋಸ್ಟ್ ಮಾರ್ಟಮ್ ಮಾಡಿದ ವೈದ್ಯರನ್ನು ತನಿಖೆಗೆ ಒಳಪಡಿಸಬೇಕು, ಅಮಾಯಕ ಹೆಣ್ಣೊಬ್ಬಳನ್ನು ಕೊಂದು ಮುಗಿಸಿದ, ನಿಜವಾದ ರಕ್ತಪಿಪಾಸುಗಳನ್ನು ಶಿಕ್ಷಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗುವುದು.

ಪ್ರತಿಭಟನಾ ಸಭೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟನವರ್, ತಮ್ಮಣ್ಣ ಶೆಟ್ಟಿ, ಸೌಜನ್ಯ ತಾಯಿ ಭಾಗವಹಿಸಲಿದ್ದಾರೆ.

ವಿವಿಧ ಸಂಘಟನೆಗಳ ಸಹಕಾರದಿಂದ ನಡೆಯುವ ಪ್ರತಿಭಟನಾ ಮೆರವಣಿಗೆ ವಿಟ್ಲದ ರಥದ ಗದ್ದೆಯ ಬಳಿಯಿಂದ ಮಧ್ಯಾಹ್ನ 3.30 ಕ್ಕೆ ಹೊರಡಲಿದೆ, ಬಳಿಕ ಪ್ರತಿಭಟನಾ ಸಭೆ ನಡೆಯಲಿದೆ.

ಪತ್ರಿಕಾಗೋಷ್ಠಿಯಲ್ಲಿ ದ.ಕ ಜಿಲ್ಲಾ ದಲಿತ್ ಸೇವಾ ಸಮಿತಿ ಸ್ಥಾಪಕಾಧ್ಯಕ್ಷ ಬಿ.ಕೆ.ಸೇಸಪ್ಪ ಬೆದ್ರಕಾಡು, ಕಾರ್ಯಾಧ್ಯಕ್ಷ ಚಂದ್ರಶೇಖರ ಯು., ಸಂಘಟನಾ ಕಾರ್ಯದರ್ಶಿ ಗಣೇಶ್ ಸೀಗೆಬಲ್ಲೆ, ಸಮಿತಿಯ ಪದಾಧಿಕಾರಿಗಳಾದ ಅಜಯ್ ಕೇಪು, ಚೇತನ್ ಕಡಂಬು ಉಪಸ್ಥಿತರಿದ್ದರು.

More from the blog

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...

300 ರೂ. ಗಡಿಯತ್ತ ಹಸಿ ಕೊಕ್ಕೊ… 900 ರೂ. ಗಡಿಯತ್ತ ಒಣ ಕೊಕ್ಕೊ

ಪುತ್ತೂರು: ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಹಸಿ ಕೊಕ್ಕೊ, ಒಣ ಕೊಕ್ಕೊ ಧಾರಣೆ ಮತ್ತಷ್ಟು ಜಿಗಿದಿದ್ದು, ಹೊರ ಮಾರುಕಟ್ಟೆಯಲ್ಲಿಯೂ ಅತ್ಯಧಿಕ ದರ ದಾಖಲಾಗಿದೆ. ಒಣ ಕೊಕ್ಕೊ 900 ರೂ. ಗಡಿಯತ್ತ, ಹಸಿ ಕೊಕ್ಕೊ 300 ರೂ....