Sunday, April 14, 2024

ಚಂದಳಿಕೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದು ದಿನದ ಸಾಹಿತ್ಯ ಸ್ವರಚನೆ ಪ್ರೇರಣಾ ಕಮ್ಮಟ

ವಿಟ್ಲ: ಮಕ್ಕಳ ಮನಸ್ಸಿನಲ್ಲಿ ಮೂಡಿ ಬರುವ ಕಥೆ, ಕವನಗಳಿಗೆ ಉತ್ತಮ ವೇದಿಕೆಯನ್ನು ಮಕ್ಕಳ ಕಲಾ ಲೋಕ ಕನ್ನಡ ಸಾಹಿತ್ಯ ಪರಿಷತ್ತು ನೀಡುತ್ತಿದೆ. ಮಕ್ಕಳ ಮನ ಸೆಳೆಯುವ ಸಾಹಿತ್ಯ ಬೆಳೆಯ ಬೇಕು ಎಂದು ಚಂದಳಿಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿ ನಾಯಕಿ ಕುಮಾರಿ ಶ್ರೇಯಾ ಹೇಳಿದರು.

ಅವರು ಮಕ್ಕಳ ಕಲಾ ಲೋಕ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಇವರ ವತಿಯಿಂದ ಬಂಟ್ವಾಳ ತಾಲೂಕಿನ ಚಂದಳಿಕೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಜರಗಿದ ಒಂದು ದಿನದ ಸಾಹಿತ್ಯ ಸ್ವರಚನೆ ಪ್ರೇರಣಾ ಕಮ್ಮಟವನ್ನು ಉದ್ಘಾಟಿಸಿ ಮಾತನಾಡಿದರು.

ಕಂಬಳಬೆಟ್ಟು ಮತ್ತು ವಿಟ್ಲ ಸಮೂಹ ಸಂಪನ್ಮೂಲ ಕೇಂದ್ರಗಳ ಸಾಹಿತ್ಯಾಸಕ್ತ ಆಯ್ದ ಶಿಕ್ಷಕರು ಮತ್ತು ಚಂದಳಿಕೆ ಶಾಲಾ ಆಯ್ದ ವಿದ್ಯಾರ್ಥಿಗಳು ಪ್ರೇರಣಾ ಕಾರ್ಯಾಗಾರದಲ್ಲಿ ಭಾಗವಹಿಸಿದರು. ವಿಟ್ಲ ಕ್ಲಸ್ಟರ್ ಸಿ.ಆರ್.ಪಿ. ಬಿಂದು ಶುಭ ಕೋರಿದರು.

ಅಪರಾಹ್ನ ಸಮಾರೋಪದಲ್ಲಿ ಚಂದಳಿಕೆ ಶಾಲಾ ಮುಖ್ಯೋಪಾಧ್ಯಾಯ ವಿಶ್ವನಾಥ ಗೌಡ ಬಿ. ಕುಳಾಲು, ಕಮ್ಮಟದಲ್ಲಿ ಭಾಗವಹಿಸಿದವರಿಂದ ರಚಿತವಾದ ಹಸ್ತ ಪತ್ರಿಕೆ “ಚಂದಳಿಕೆ ಚುಕ್ಕಿ”ಯನ್ನು ಬಿಡುಗಡೆಗೊಳಿಸಿ ಸಂದರ್ಭೋಚಿತವಾಗಿ ಮಾತನಾಡಿದರು.

ರೇಣುಕಾ, ನಿರಂಜನ್, ಶಿವ ಪ್ರಸಾದ್ ಮತ್ತು ರಾಮಚಂದ್ರ ನಾಯ್ಕ್ ಅನಿಸಿಕೆ ಹೇಳಿದರು.

ಮಕ್ಕಳ ಕಲಾ ಲೋಕದ ಗೌರವ ಸಲಹೆಗಾರ ಭಾಸ್ಕರ ಅಡ್ವಳ ಮತ್ತು ಅಧ್ಯಕ್ಷ ರಮೇಶ ಎಂ. ಬಾಯಾರು ಸಂಪನ್ಮೂಲ ವ್ಯಕ್ತಿಗಳಾಗಿ ಸಹಕರಿಸಿದರು.

ವಿಶ್ವನಾಥ ಗೌಡ ಸ್ವಾಗತಿಸಿದರು, ಮಕ್ಕಳ ಕಲಾ ಲೋಕದ ಕಾರ್ಯದರ್ಶಿ ಪುಷ್ಪಾ ಎಚ್ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಸುರೇಶ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

More from the blog

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...

ಕಲ್ಲಡ್ಕ: ಖಾಸಗಿ ಬಸ್ಸಿಗೆ ಪಿಕಪ್ ಢಿಕ್ಕಿ: ಹಲವರಿಗೆ ಗಾಯ

ವಿಟ್ಲ: ವಿಟ್ಲ ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ಬಸ್ಸಿಗೆ ಪಿಕಪ್ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡಿದ್ದಾರೆ. ವಿಟ್ಲ ಕಡೆಗೆ ಕಾಂಕ್ರೀಟ್ ಮಿಕ್ಸರ್ ಯಂತ್ರವನ್ನು ಒಯ್ಯುತ್ತಿದ್ದ ಪಿಕಪ್ ಆಕಸ್ಮಿಕವಾಗಿ ವಿಟ್ಲದಿಂದ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ಸಿಗೆ...

ವಿಟ್ಲ : ಮಹಿಳೆ ಆತ್ಮಹತ್ಯೆ

ವಿಟ್ಲ: ವಿಟ್ಲಪಡ್ನೂರು ಗ್ರಾಮದ ಕುಂಟುಕುಡೇಲು ಕಾಪಿಕಾಡು ನಿವಾಸಿ ಮಹಿಳೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಿ.ರಾಮಣ್ಣ ನಾಯ್ಕ ಅವರ ಪತ್ನಿ ಸುಶೀಲಾ ಅವರು ಮನೆ ಸಮೀಪದ ಗುಡ್ಡದಲ್ಲಿ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.