Friday, April 12, 2024

ಮಜಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಸಂಭ್ರಮ ಶನಿವಾರ ಕಾಯ೯ಕ್ರಮದಲ್ಲಿ ಮಾದಕ ವಸ್ತುಗಳ ದುಬ೯ಳಕೆ ತಡೆಗಟ್ಟುವಿಕೆ ಮತ್ತು ನಿವ೯ಹಣೆ ಕುರಿತು ಮಾಹಿತಿ

ಕಲ್ಲಡ್ಕ: ದುಶ್ಚಟಗಳಿಗೆ ವ್ಯಸನರಾಗಿ ಅದೆಷ್ಟೋ ಜೀವಗಳು ಬಲಿಯಾಗಿವೆ, ದುಷ್ಟಗಳಿಂದ ದೂರವಿರಲು ಹಾಗೂ ಅವುಗಳ ದಾಸರಾಗದಂತೆ ತನ್ನ ಎಳವೆಯಲ್ಲೇ ಈ ಕುರಿತಾದ ಉತ್ತಮ ಸಂಸ್ಕಾರಯುತವಾದ ಗುಣಮಟ್ಟದ ಕಲಿಕೆ, ಉತ್ತಮ ಗೆಳೆತನ, ಇದಕ್ಕೆ ಕಾರಣವಾಗಿದೆ. ತನ್ನ ಪರಿಸರದಲ್ಲಿ ವ್ಯಸನಕ್ಕೆ ಬಲಿಯಾದ ಜನರ ಬಗ್ಗೆ ಕಾಳಜಿವಹಿಸಿ ಅವರನ್ನು ಸರಿದಾರಿಗೆ ತರಲು ನಿಧಿ೯ಷ್ಟ ಸಂಸ್ಥೆಗಳಿಗೆ ದೂರು ನೀಡಬೇಕು, ಶಾಲಾ ಪರಿಸರ ಮತ್ತು ಮನೆಯಲ್ಲಿ ಈ ಬಗ್ಗೆ ಕಂಡುಬಂದಾಗ ಯಾವ ರೀತಿ ಕ್ರಮ ತೆಗೆದುಕೊಳ್ಳಬೇಕು, ಎಂಬುದಾಗಿ ಬಂಟ್ವಾಳ ತಾಲೂಕಿನ ವೀರಕಂಬ ಗ್ರಾಮದ ಮಜಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಸಂಭ್ರಮ ಶನಿವಾರ ಕಾಯ೯ಕ್ರಮದಲ್ಲಿ ಮಾದಕ ವಸ್ತುಗಳ ದುಬ೯ಳಕೆ ತಡೆಗಟ್ಟುವಿಕೆ ಮತ್ತು ನಿವ೯ಹಣೆ ಕುರಿತಾಗಿ ವಿಟ್ಲ ಆರಕ್ಷಕಠಾಣೆ ವ್ಯಾಪ್ತಿಯ ವೀರಕಂಭ ಗ್ರಾಮ ಬೀಟ್ ಪೊಲೀಸ್ ಮನೋಜ್ ರವರು ತಿಳಿಸಿದರು.

ವೇದಿಕೆಯಲ್ಲಿ ಕಲ್ಲಡ್ಕ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಜ್ಯೋತಿ, ಮುಖ್ಯ ಶಿಕ್ಷಕಿ ಬೆನಡಿಕ್ಟಾ ಆಗ್ನೇಸ್ ಮಂಡೋನ್ಸಾ,ಉಪಸ್ಥಿತರಿದ್ದರು ಕಾರಕ್ರಮದಲ್ಲಿ ಶಾಲಾ ,ಶಿಕ್ಷಕರು, ಮಕ್ಕಳು ಉಪಸ್ಥಿತರಿದ್ದರು.

ಮಾಹಿತಿ ಕಾಯಾ೯ಗಾರದ ಬಳಿಕ ವಿದ್ಯಾಥಿ೯ಗಳು ಮಾದಕ ವ್ಯಸನದ ಬಗ್ಗೆ ಪ್ರಹಸನ ನೀಡಿದರು.

ಶಿಕ್ಷಕಿ ಸಂಗೀತ ಶರ್ಮ ಪಿ ಜಿ ಸ್ವಾಗತಿಸಿ ವಂದಿಸಿದರು.

More from the blog

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...

ಕಲ್ಲಡ್ಕ: ಖಾಸಗಿ ಬಸ್ಸಿಗೆ ಪಿಕಪ್ ಢಿಕ್ಕಿ: ಹಲವರಿಗೆ ಗಾಯ

ವಿಟ್ಲ: ವಿಟ್ಲ ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ಬಸ್ಸಿಗೆ ಪಿಕಪ್ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡಿದ್ದಾರೆ. ವಿಟ್ಲ ಕಡೆಗೆ ಕಾಂಕ್ರೀಟ್ ಮಿಕ್ಸರ್ ಯಂತ್ರವನ್ನು ಒಯ್ಯುತ್ತಿದ್ದ ಪಿಕಪ್ ಆಕಸ್ಮಿಕವಾಗಿ ವಿಟ್ಲದಿಂದ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ಸಿಗೆ...

ವಿಟ್ಲ : ಮಹಿಳೆ ಆತ್ಮಹತ್ಯೆ

ವಿಟ್ಲ: ವಿಟ್ಲಪಡ್ನೂರು ಗ್ರಾಮದ ಕುಂಟುಕುಡೇಲು ಕಾಪಿಕಾಡು ನಿವಾಸಿ ಮಹಿಳೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಿ.ರಾಮಣ್ಣ ನಾಯ್ಕ ಅವರ ಪತ್ನಿ ಸುಶೀಲಾ ಅವರು ಮನೆ ಸಮೀಪದ ಗುಡ್ಡದಲ್ಲಿ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.