Monday, April 15, 2024

ಟಿಪ್ಪರ್‌ ಲಾರಿ ಮತ್ತು ಬೈಕ್ ನಡುವೆ ಅಪಘಾತ – ಸವಾರ ಮೃತ್ಯು

ಬಜ್ಜೆ: ಟಿಪ್ಪರ್ ಲಾರಿ ಮತ್ತು ಬೈಕಿನ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಬಜ್ಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮುಳ್ಳೂರು ಕ್ರಾಸ್ ಬಳಿ  ನಡೆದಿದೆ.

ಮೃತರನ್ನು ಸಚಿನ್ ಕುಮಾರ್ ಎಂದು ತಿಳಿದು ಬಂದಿದೆ.

ಮೃತ ಸಚಿನ್ ಅವರು ಕದ್ರಿಯಲ್ಲಿ ಬ್ಯಾಂಕ್ ಉದ್ಯೋಗಿಯಾಗಿದ್ದು, ಕೆಲಸ ಮುಗಿಸಿಕೊಂಡು ಸಂಜೆ 6.45ರ ವೇಳೆಗೆ ತನ್ನ ಮನೆಗೆ ತೆರಳುತ್ತಿದ್ದ ಸಂದರ್ಭ ಮೂಡಬಿದ್ರೆ ಕಡೆಯಿಂದ ಕೈಕಂಬ ಕಡೆಗೆ ಅತೀವೇಗ ಮತ್ತು ಅಜಾಗರೂಕತೆಯಿಂದ ಬಂದ ಟಿಪ್ಪರ್ ಲಾರಿಯು ಸಚಿನ್ ತೆರಳುತ್ತಿದ್ದ ಬೈಕ್ ನ ಬಿಂಭಾಗಕ್ಕೆ ಡಿಕ್ಕಿಹೊಡೆಯಿತೆನ್ನಲಾಗಿದೆ.

ಅಪಘಾತದ ರಭಸಕ್ಕೆ ಬೈಕ್‌ ಸವಾರನು ಬೈಕ್ ಸಮೇತ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದರು. ತಕ್ಷಣ ಸಾರ್ವಜನಿಕರು ಅವರುನ್ನು ಮೂಡಬಿದ್ರೆಯ ಆಸ್ಪತ್ರೆಗೆ ರವಾನಿಸಿದ್ದರು. ಅಲ್ಲಿ ಸಚಿನ್ ಅವರನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ಘೋಶಿಸಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆ ಸಂಬಂಧಿಸಿ ಬಜ್ಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More from the blog

ಪ್ರಧಾನಿ ಮೋದಿಯವರೇ.. ದಕ್ಷಿಣ ಕನ್ನಡಕ್ಕೆ ನೀವು ಕೊಟ್ಟದ್ದೆಷ್ಟು- ಸಿಎಂ ಪ್ರಶ್ನೆ

ಬೆಂಗಳೂರು: “ನನ್ನ ತೆರಿಗೆ ನನ್ನ ಹಕ್ಕು" ಅಭಿಯಾನದ ಮುಂದುವರಿದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಚುನಾವಣ ರ್‍ಯಾಲಿ ನಡೆಸಿದ ದಕ್ಷಿಣ ಕನ್ನಡಕ್ಕೆ ತಮ್ಮ ಕೊಡುಗೆಯ ಲೆಕ್ಕ ಕೊಡುವಂತೆ ಕಾಂಗ್ರೆಸ್‌ ಕೇಳಿದೆ. ಪ್ರಧಾನಿ ನರೇಂದ್ರ ಮೋದಿ...

ಹಿಂದೂ‌ ಸಂಘಟನೆಯ ಕಾರ್ಯಕರ್ತನಿಗೆ ಚೂರಿ ಇರಿತ

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹಿಂದೂಯುವಸೇನೆಯ ಮುಖಂಡನಾಗಿದ್ದು, ಉದ್ಯಮಿಯಾಗಿರುವ...

ಮಂಗಳೂರು: ರೋಡ್​ಶೋ ಮೂಲಕ ಪ್ರಧಾನಿ ಮೋದಿ ಚುನಾವಣಾ ಪ್ರಚಾರ

ಮಂಗಳೂರು: ರಾಜ್ಯದ ಲೋಕಸಭಾ ಚುನಾವಣೆ ಅಖಾಡಕ್ಕೆ ಇಳಿದಿರುವ ಪ್ರಧಾನಿ ನರೇಂದ್ರ ಮೋದಿ, ಮೈಸೂರಿನಿಂದ ತಮ್ಮ ಯಾತ್ರೆ ಆರಂಭಿಸಿದ್ದಾರೆ. ಇದೀಗ ಮಂಗಳೂರಿನಲ್ಲಿ ರೋಡ್​ಶೋ ಮೂಲಕ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಮೈಸೂರಿನಲ್ಲಿ ಅದ್ದೂರಿ...

ಲೋಕಸಭಾ ಚುನಾವಣೆ : ‘ಸಂಕಲ್ಪ ಪತ್ರ’ ಹೆಸರಿನಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ನವದೆಹಲಿ: ದೆಹಲಿಯಲ್ಲಿರುವ ಬಿಜೆಪಿಯ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಕಸಭೆ ಚುನಾವಣೆಗಾಗಿ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ‘ಸಂಕಲ್ಪ ಪತ್ರ’ ಹೆಸರಲ್ಲಿ ದೇಶದ ಜನರಿಗೆ ಪ್ರಧಾನಿ ಮೋದಿ ಆಶ್ವಾಸನೆಗಳನ್ನು ನೀಡಿದ್ದು ಮೊದಲ ಸಂಕಲ್ಪ...