Thursday, April 11, 2024

ತುಂಬೆ ಡ್ಯಾಂ ಬಳಿಯ ರೈತರಿಗೆ ಸೂಕ್ತವಾದ ಪರಿಹಾರ ನೀಡಿ: ರೈತ ಸಂಘ ಸರಕಾರಕ್ಕೆ ಮನವಿ

ಬಂಟ್ವಾಳ: ಮಂಗಳೂರು ಜನತೆಗೆ ಕುಡಿಯುವ ನೀರು ಪೂರೈಕೆ ಮಾಡಯವ ನಿಟ್ಟಿನಲ್ಲಿ ಮಹಾನಗರ ಪಾಲಿಕೆ ಏಳು ಮೀಟರ್ ನೀರು ಸಂಗ್ರಹ ಮಾಡಲು ಹೊರಟಿದ್ದು, ಇದರಿಂದಾಗಿ ಕೃಷಿಕರ ಭೂಮಿ ಜಲಾವೃತಗೊಳ್ಳಲಿದೆ, ಹಾಗಾಗಿ ರೈತರಿಗೆ ಸೂಕ್ತವಾದ ಪರಿಹಾರವನ್ನು ನೀಡಬೇಕು ಎಂದು ಆಗ್ರಹಿಸಿ ಬಂಟ್ವಾಳ ರೈತ ಸಂಘ ಸರಕಾರಕ್ಕೆ ಮನವಿ ನೀಡಿದೆ.

ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಇತ್ತೀಚೆಗೆ ಮಂಗಳೂರಿಗೆ ಕುಡಿಯುವ ನೀರಿನ ಸಲುವಾಗಿ ನೇತ್ರಾವತಿಯಲ್ಲಿ 6.50 ಮೀಟರ್ ನೀರು ಸಂಗ್ರಹಿಸಲಾಗಿದ್ದು ಈ ಬಾರಿ ನೀರಿನ ಕೊರತೆ ಆಗದು ಎಂಬುದಾಗಿ ತಿಳಿಸಿರುತ್ತಾರೆ. ಆದರೆ ಜಿಲ್ಲಾಡಳಿತ ಈ ಹಿಂದೆ ನೀರು ಸಂಗ್ರಹದ ನಿಮಿತ್ತ ಸಂತ್ರಸ್ತ ರೈತರಿಗೆ 6 ಮೀಟರ್ ಗೆ ಭೂ ಪರಿಹಾರ ಒದಗಿಸಿದ್ದು, ಅದರಲ್ಲಿ ಎಲ್ಲಾ ರೈತರಿಗೆ ಇನ್ನೂ ಕೂಡ ಪರಿಹಾರ ದೊರೆತಿರುವುದಿಲ್ಲ. ಹಾಗಾಗಿ ಪ್ರಸ್ತುತ ಆರುವರೆ ಮೀಟರ್ ಗೆ ನೀರು ಸಂಗ್ರಹಿಸಿದ್ದು ಕೇಂದ್ರ ಜಲ ಆಯೋಗದ ನಿರ್ದೇಶನದಂತೆ ವರತೆ ಪ್ರದೇಶ ಸೇರಿಸಿನೀರು ಸಂಗ್ರಹಕ್ಕೆ1 ಮೀಟರ್ ಹೆಚ್ಚುರಿಯಾಗಿ ಅಂದರೆ ಏಳುವರೆ ಮೀಟರ್ ಗೆ ಏರಿಸಲು ರೈತರ ಸಮಕ್ಷಮ ಸರ್ವೇ ಮಾಡಿ ರೈತರಿಗೆ ನ್ಯಾಯೋಚಿತ ಸೂಕ್ತ ಪರಿಹಾರ ಜಿಲ್ಲಾ ಆಡಳಿತದ ಮೂಲಕ ಒದಗಿಸಿಕೊಡುವಂತೆ ಸಜಿಪ ಮುನ್ನೂರುಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮಣ್ ಮೂಲಕ ಲಿಖಿತಮನವಿ ನೀಡಿದರು.

ಬಂಟ್ವಾಳ ತಾಲೂಕು ರೈತ ಸಂಘ ಅಧ್ಯಕ್ಷ ಎo ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು ರೈತರ ನಿಯೋಗದಲ್ಲಿ ಎನ್ ಕೆ ಇದಿನ ಬ್ಬ. ಅಬ್ದುಲ್ ಖಾದರ್. ಎನ್ ರಾಮ ಹುಸೇನಾರ್. ಬಿ ಅಣ್ಣಪ್ಪಯ್ಯ. ಅಬ್ಬಾಸ್. ಮೊದಲಾದವರು ಜೊತೆಗಿದ್ದರು

More from the blog

ಲೋಕಸಭಾ ಚುನಾವಣೆಯ ಹಿನ್ನೆಲೆ : ಚಾರ್ಮಾಡಿಯ ಮೂವರು ಗಡಿಪಾರು

ಬೆಳ್ತಂಗಡಿ: ಚುನಾವಣ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಹಾಗೂ ಕೋಮು ಗಲಭೆಗಳಲ್ಲಿ ಭಾಗವಹಿಸುವ ಸಾಧ್ಯತೆ ಇರುವ ಕಾರಣ ಮೂವರು ರೌಡಿಶೀಟರ್‌ಗಳನ್ನು ಧರ್ಮಸ್ಥಳ ಪೊಲೀಸರು ಗಡಿಪಾರು ಮಾಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ನಿವಾಸಿಗಳಾದ...

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...