Saturday, April 6, 2024

ಬಸ್ ಹತ್ತುವ ವೇಳೆ ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಅಪರಿಚಿತ ವ್ಯಕ್ತಿ: ಆರೋಪಿಯನ್ನು ಪತ್ತೆ ಹಚ್ಚಿ ಕಾನೂನು ಕ್ರಮಕೈಗೊಂಡ ಪೋಲೀಸರು.

ಬಂಟ್ವಾಳ: ಕಾಲೇಜು ವಿದ್ಯಾರ್ಥಿನಿಯೋರ್ವಳಿಗೆ ಬೆಳಿಗ್ಗೆನ ಸಮಯದಲ್ಲಿ ಕಾಲೇಜಿಗೆ ಹೋಗುವ ವೇಳೆ ಬಸ್ ಹತ್ತುವಾಗ ಅಪರಿಚಿತ ಪ್ರಯಾಣಿಕನೊರ್ವ ಲೈಗಿಂಕ ಕಿರುಕುಳ ನೀಡಿದ ಘಟನೆ ನಡೆದಿದೆ.
ಬಂಟ್ವಾಳದ ಅಗ್ರಾರ್ ನಿವಾಸಿಯಾಗಿದ್ದು ಮಂಗಳೂರು ಕಾಲೇಜಿಗೆ ತೆರಳುವ ಸಮಯದಲ್ಲಿ ಬಿಸಿರೋಡು ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ವಿದ್ಯಾರ್ಥಿನಿ ಕಾಲೇಜಿಗೆ ಹೋಗುವ ಉದ್ದೇಶದಿಂದ ಕೆ.ಎಸ್.ಆರ್.ಟಿ‌.ಸಿ ಬಸ್ ಹತ್ತುವ ಸಮಯದಲ್ಲಿ ‌ಹಿಂಬದಿಯಿಂದ ಇದ್ದ ಅಪರಿಚಿತ ವ್ಯಕ್ತಿ ಲೈಂಗಿಕ ‌ಕಿರುಕುಳ ನೀಡಿದ್ದಾನೆ. ಈ ಬಗ್ಗೆ ಪ್ರಶ್ನಿಸಿದಾಗ ಆತ ವಿದ್ಯಾರ್ಥಿನಿ ಬೆದರಿಸಿದ್ದಲ್ಲದೆ, ಮುಂದೆಯೇ ಇದೇ ರೀತಿ ಕಿರುಕುಳ ನೀಡುತ್ತೇನೆ ಏನು ಮಾಡುತ್ತಿ ಎಂದು ಹೆದರಿಸಿದ್ದಾನೆ ಎಂದು ಹೇಳಲಾಗಿದೆ. ಈ ಬಗ್ಗೆ ನಿರ್ವಾಹಕನಿಗೆ ವಿದ್ಯಾರ್ಥಿನಿ ದೂರು ನೀಡಿದ್ದು, ಪ್ರಯಾಣಿಕ ಹಾಗೂ ನಿರ್ವಾಹಕನ ನಡುವೆ ಮಾತು ಬೆಳೆದಿದೆ ಎನ್ನಲಾಗಿದೆ.
ಬಸ್ ನಲ್ಲಿ ನಡೆದ ಘಟನೆ ಬಗ್ಗೆ ಸ್ಥಳದಿಂದಲೇ ವಿದ್ಯಾರ್ಥಿನಿ ಪೋನ್ ಮಾಡಿ ಮನೆಯವರಿಗೆ ತಿಳಿಸಿದ್ದಾಳೆ. ಪೋಷಕರು ಮತ್ತು ವಿದ್ಯಾರ್ಥಿನಿಕೂಡಲೇ ಪೋಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ ಎಂದು ಹೇಳಲಾಗಿದೆ.
ದೂರು ನೀಡಿದ ಕೂಡಲೇ ಪ್ರಕರಣ ದಾಖಲಿಸಿಕೊಂಡು, ಕಾರ್ಯಪ್ರವೃತ್ತರಾದ ನಗರ ಠಾಣಾ ಪೋಲೀಸರು ಅಪರಿಚಿತ ಆರೋಪಿಯನ್ನು ಪತ್ತೆ ಹಚ್ಚಿ ಆತನ ಮೇಲೆ ಕಾನೂನು ‌ಕ್ರಮ ಕೈಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...