Thursday, April 18, 2024

ಬಂಟ್ಟಾಳ ತಾಲೂಕು ಮಟ್ಟದ ಮಕ್ಕಳ ಸಾಹಿತ್ಯ ಶಿಬಿರ

ಸಾಹಿತ್ಯ ಬರಹಗಳು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಬಹಳ ಪೂರಕ ಸಾಧನವಾಗಿವೆ. ವಿದ್ಯಾರ್ಥಿ ದೆಸೆಯಲ್ಲೇ ಸಾಹಿತ್ಯ ಕ್ಷೇತ್ರದಲ್ಲಿ ಒಲವು ತೋರಿಸಿದರೆ ಮುಂದೆ ಬಹು ದೊಡ್ಡ ಸಾಧನೆ ಮಾಡಬಹುದು ಎಂದು ಮಂಚಿ ಕೊಲ್ನಾಡು ಸರಕಾರಿ ಪ್ರೌಢಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಬಾಲಕೃಷ್ಣ ಸೆರ್ಕಳರವರು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು (ರಿ) ಬಂಟ್ಟಾಳ ತಾಲೂಕು ಹಾಗೂ ಸರಕಾರಿ ಪ್ರೌಢಶಾಲೆ ಮಂಚಿ ಕೊಳ್ನಾಡು ಇದರ ಜಂಟಿ ಆಶ್ರಯದಲ್ಲಿ 2 ದಿನಗಳ ಬಂಟ್ಟಾಳ ತಾಲೂಕು ಮಟ್ಟದ ಮಕ್ಕಳ ಸಾಹಿತ್ಯ ಶಿಬಿರವನ್ನು ಬಂಟ್ವಾಳ ತಾಲೂಕಿನ ಸರಕಾರಿ ಪ್ರೌಢಶಾಲೆ ಮಂಚಿ ಕೊಳ್ಳಾಡು ಇಲ್ಲಿ ಉದ್ಘಾಟಿಸಿ ಅಭಿಪ್ರಾಯಪಟ್ಟರು.

ಮಕ್ಕಳ ಸಾಹಿತ್ಯ ಪರಿಷತ್ ದ.ಕ ಜಿಲ್ಲಾಧ್ಯಕ್ಷೆ ಪರಿಮಳ ಮಹೇಶ ರಾವ್ ಮಂಗಳೂರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಉದ್ಯಮಿ ದೇವಿಪ್ರಸಾದ್ ಚೆಂಗಲ್ಪಾಡಿ , ಗೌರವ ಸಲಹೆಗಾರರಾದ ಬಾಲಕೃಷ್ಣ ಕಾರಂತ್ ಎರುಂಬು, ಶಾಲಾ ಮುಖ್ಯೋಪಾಧ್ಯಾಯರಾದ ಸುಶೀಲಾ ವಿಟ್ಲ , ಸಾಹಿತಿ ಹಾಗೂ ಪತ್ರಕರ್ತರಾರ ಜಯಾನಂದ ಪೆರಾಜೆ ಇವರು ಶುಭ ಹಾರೈಸಿದರು .

ಈ ಸಂದರ್ಭದಲ್ಲಿ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಪರಿಷತ್ತಿನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ನೇರಳಕಟ್ಟೆಯವರನ್ನು ಗೌರವಿಸಲಾಯಿತು.

ಶಿಬಿರದಲ್ಲಿ ಜಯಾನಂದ ಪೆರಾಜೆಯವರು ಚುಟುಕು ಕವನ , ರಶ್ಮಿತಾ ಸುರೇಶ್ ಜೋಗಿಬೆಟ್ಟುರವರು ಹಾಸ್ಯ ಸಾಹಿತ್ಯ , ಸುರೇಖಾ ಯಳವಾರರವರು ಮಕ್ಕಳ ಸಾಹಿತ್ಯ , ತಾರಾನಾಥ್ ಕೈರಂಗಳರವರು ಚಿತ್ರ ಸಾಹಿತ್ಯ , ಜಯರಾಮ ಪಡ್ರೆಯವರು ಕಥನ ಕಾವ್ಯ , ಗೋಪಾಲಕೃಷ್ಣ ನೇರಳಕಟ್ಟೆ ಯವರು ಸೃಜನಶೀಲ ಸಾಹಿತ್ಯ , ಅಬ್ಬುಲ್ ಮಜೀದ್ ತುಂಬೆರವರು ಮೌಲ್ಯ ಸಾಹಿತ್ಯ , ಶ್ರೀಕಲಾ ಕಾರಂತ ಅಳಿಕೆಯವರು ಬಾಲ ಸಾಹಿತ್ಯ , ಎಂ.ಡಿ ಮಂಚಿರವರು ನಾಟಕ ಸಾಹಿತ್ಯದ ಬಗ್ಗೆ ಮಾಹಿತಿ ನೀಡಿದರು. ಶಾಲೆಯ ಶಿಕ್ಷಕ ವೃಂದದವರು ಸಂಪೂರ್ಣ ಸಹಕರಿಸಿದರು ತರಬೇತಿಯಲ್ಲಿ ಬಂಟ್ವಾಳ ತಾಲೂಕಿನ ವಿವಿಧ ಶಾಲೆಗಳ ಸುಮಾರು 125 ವಿದ್ಯಾರ್ಥಿಗಳು ಭಾಗವಹಿಸಿದ್ದರು ಮಕ್ಕಳ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಶ್ರೀಕಲಾ ಕಾರಂತ್ ಅಳಿಕೆ ಸ್ವಾಗತಿಸಿ, ವಲಯ ಸಂಯೋಜಕಿ ತುಳಸಿ ಕೈರಂಗಳ ವಂದಿಸಿದರು.ಶಿಕ್ಷಕ ಕಲಾವಿದ ತಾರಾನಾಥ್ ಕೈರಂಗಳ ಕಾರ್ಯಕ್ರಮ ನಿರ್ವಹಿಸಿದರು.

More from the blog

ನರಿಕೊಂಬು: ನವಜೀವನ ವ್ಯಾಯಾಮ ಶಾಲೆ: 21ರಂದು ಹನುಮಾನ್ ಮಂದಿರ ಲೋಕಾರ್ಪಣೆ

ಬಂಟ್ವಾಳ: ಇಲ್ಲಿನ ನರಿಕೊಂಬು ಗ್ರಾಮದ ನವಜೀವನ ವ್ಯಾಯಾಮ ಶಾಲೆ ವತಿಯಿಂದ ರೂ 1 ಕೋಟಿ ವೆಚ್ಚದಲ್ಲಿ ಪುನರ್ ನಿಮರ್ಾಣಗೊಂಡ ಶ್ರೀ ಹನುಮಾನ್ ಮಂದಿರ ಲೋಕಾರ್ಪಣೆ ಮತ್ತು ಶ್ರೀ ಆಂಜನೇಯ ಬಿಂಬ ಪುನರ್ ಪ್ರತಿಷ್ಠೆ...

ಹಿಂದೂ ಸಂಘಟನೆ ಮುಖಂಡನಿಗೆ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಚೂರಿ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣೆಯ ಪೋಲೀಸರು ಬಂಧಿಸಿದ ಘಟನೆ ಇಂದು ನಡೆದಿದೆ. ಬಂಟ್ವಾಳ ನಿವಾಸಿ ರವಿ ಯಾನೆ ರವೀಂದ್ರ ಬಂಧಿತ ಆರೋಪಿಯಾಗಿದ್ದಾನೆ. ಎ.14 ರಂದು ಆದಿತ್ಯವಾರ...

ಬಂಟ್ವಾಳ: ಕರ್ಪೆ ಗ್ರಾಮದ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವಂತೆ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಕಾರ್ಯಕ್ರಮದ ಮೂಲಕ ಬಂಟ್ವಾಳದ...

ವೈದ್ಯರ ಎಡವಟ್ಟು : ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ

ಮಂಗಳೂರಿನ ಹೆಸರಾಂತ ಮನೋರೋಗ ತಜ್ಞರೊಬ್ಬರು ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ ಹೊಡೆದು ಆವಾಂತರ ಸೃಷ್ಟಿಸಿದ ಘಟನೆ ನಗರ ಹೊರ ವಲಯದ ಪರಂಗಿಪೇಟೆ ಬಳಿಯ ಅರ್ಕುಳ ಎಂಬಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಕುಡಿದ...