Thursday, April 11, 2024

ಬುಲ್ ಬುಲ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಜಾಥ

ಸರ್ಕಾರಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ದಡ್ಡಲಕಾಡು ಇಲ್ಲಿ ಸಂಸ್ಥೆಯ ಬುಲ್ ಬುಲ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಜಾಥವನ್ನು ಹಮ್ಮಿಕೊಳ್ಳಲಾಯಿತು.

ಸಂಸ್ಥೆಯ ಬುಲ್ ಬುಲ್ ಶಿಕ್ಷಕಿಯಾದ ಹಿಲ್ಡಾ ಫೆರ್ನಾಂಡಿಸ್ ಬುಲ್ ಬುಲ್ ವಿದ್ಯಾರ್ಥಿಗಳಿಗೆ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಹೇಗೆ ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂಬ ಮಾಹಿತಿಯನ್ನು ನೀಡುವುದರ ಮೂಲಕ ವಿದ್ಯಾರ್ಥಿಗಳೊಂದಿಗೆ ಸೇರಿ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡರು.

ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರೌಢ ಶಾಲಾ ವಿಭಾಗದ ಎಸ್ ಡಿ ಎಂ ಸಿ ಅಧ್ಯಕ್ಷರಾದ ಪುರುಷೋತ್ತಮ್ ಅಂಚನ್ ,ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಪ್ರಕಾಶ್ ಅಂಚನ್ ,ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ವಿನ್ನಿ ಸಿಂತಿಯಾ ,ಬುಲ್ ಬುಲ್ ಶಿಕ್ಷಕಿ ಹಿಲ್ಡಾ ಫೆರ್ನಾಂಡಿಸ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸಂಸ್ಥೆಯ ಕಟ್ಟಡ ಕಾಮಗಾರಿ ವೀಕ್ಷಣೆಗೆ ಬಂದ ಜಿಲ್ಲಾ ಪಂಚಾಯತ್ ನ ಮುಖ್ಯ ಇಂಜಿನಿಯರ್ ಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಬುಲ್ ಬುಲ್ ತಂಡದ ಕಾರ್ಯಕ್ಕೆ ಪ್ರಶಂಸೆಯನ್ನು ವ್ಯಕ್ತಪಡಿಸಿದರು .

More from the blog

ಲೋಕಸಭಾ ಚುನಾವಣೆಯ ಹಿನ್ನೆಲೆ : ಚಾರ್ಮಾಡಿಯ ಮೂವರು ಗಡಿಪಾರು

ಬೆಳ್ತಂಗಡಿ: ಚುನಾವಣ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಹಾಗೂ ಕೋಮು ಗಲಭೆಗಳಲ್ಲಿ ಭಾಗವಹಿಸುವ ಸಾಧ್ಯತೆ ಇರುವ ಕಾರಣ ಮೂವರು ರೌಡಿಶೀಟರ್‌ಗಳನ್ನು ಧರ್ಮಸ್ಥಳ ಪೊಲೀಸರು ಗಡಿಪಾರು ಮಾಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ನಿವಾಸಿಗಳಾದ...

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...