Friday, October 20, 2023

ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನಲ್ಲಿ ಅ.21 ರಂದು ರಕ್ತದಾನ ಶಿಬಿರ….

Must read

ಶ್ರೀರಾಮ‌ ಪ್ರಥಮ ದರ್ಜೆ ಮಹಾವಿದ್ಯಾಲಯ ಕಲ್ಲಡ್ಕ,ರೆಡ್ ಕ್ರಾಸ್ ಘಟಕ ಮತ್ತು ಕೆ ಎಂ ಸಿ ಹಾಸ್ಪಿಟಲ್ ಮಂಗಳೂರು ಮತ್ತು ರಾಷ್ಟ್ರೀಯ ಸೇವಾ ಯೋಜನೆ ಯ ಸಹಯೋಗದಲ್ಲಿ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದ ಆವರಣದಲ್ಲಿ ಬೃಹತ್ ರಕ್ತದಾನ ಶಿಬಿರ ಅ.21 ರಂದು ಶನಿವಾರ ಬೆಳಿಗ್ಗೆ ನಡೆಯಲಿದೆ.

ಕಾರ್ಯಕ್ರಮವನ್ನು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷ ಡಾ| ಪ್ರಭಾಕರ್ ಭಟ್ ಕಲ್ಲಡ್ಕ ಉದ್ಘಾಟಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಭಾಗವಹಿಸಲಿದ್ದು

ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಾಂಶುಪಾಲ ಕೃಷ್ಣಪ್ರಸಾದ್ ಕಾಯಾರ್ಕಟ್ಟೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More articles

Latest article