Thursday, April 11, 2024

ಕೋಳಿ ಮಾಂಸ ಹಿಡಿದುಕೊಂಡು ಪ್ರಯಾಣಿಸಿದ ಪ್ರಯಾಣಿಕನ ನಿಂಧಿಸಿ, ಬಸ್ ಸಹಿತ ಪೋಲೀಸ್ ಠಾಣೆಗೆ ಕೊಂಡು ಹೋದ ಸರಕಾರಿ ಬಸ್ ಚಾಲಕ

ಬಂಟ್ವಾಳ: ಪ್ರಯಾಣಿಕನೋರ್ವ ಚೀಲದಲ್ಲಿ ಕೋಳಿ ಮಾಂಸ ಹಿಡಿದುಕೊಂಡು ಬಸ್ ಹತ್ತಿದ ಕಾರಣಕ್ಕಾಗಿ ಆತನಿಗೆ ನಿರ್ವಾಹಕ ಅವ್ಯಾಚ್ಚ ಶಬ್ದದಿಂದ ಬೈದುದಲ್ಲದೆ, ಚಾಲಕ ಸೀದಾ ಪ್ರಯಾಣಿಕರನ್ನು ಕೂರಿಸಿಕೊಂಡು ಪೋಲಿಸ್ ಠಾಣೆಗೆ ತಂದ ಘಟನೆ ನಡೆದಿದೆ.

ಸುರೇಶ್ ಎಂಬವರು ತುಂಬೆಯಲ್ಲಿ ಸ್ಟೇಟ್ ಬ್ಯಾಂಕ್ ಪುತ್ತೂರು ಕೆ.ಎಸ್.ಆರ್.ಟಿ.ಸಿ.ಬಸ್ ಹತ್ತಿದ್ದಾರೆ.

ಬಸ್ ನಿರ್ವಾಹಕ ಟಿಕೆಟ್ ಪಡೆಯಲು ಬಂದಾಗ ಈತನ ಕೈಯಲ್ಲಿ ಚೀಲವೊಂದ್ದಿದ್ದು,ಇದರ ಬಗ್ಗೆ ವಿಚಾರಿಸಿದ್ದಾನೆ. ಪ್ರಯಾಣಿಕ ಕೋಳಿ ಮಾಂಸ ಎಂದು ತಿಳಿಸಿದಾಗ ಬಸ್ ನಿಂದ ಇಳಿಯುವಂತೆ ಒತ್ತಾಯಿಸಿದ್ದಾನೆ. ಕೋಳಿ ಮಾಂಸ ಬಸ್ ನಲ್ಲಿ ತರಲು ಅವಕಾಶವಿಲ್ಲ ಎಂಬ ವಾದ ನಿರ್ವಾಹಕನದ್ದು, ಆದರೆ ಕೂಲಿ ಕಾರ್ಮಿಕನಿಗೆ ಇದರ ಅರಿವಿಲ್ಲದೆ , ಬಸ್ ನಿಂದ ಇಳಿಯಲು ಒಪ್ಪಲಿಲ್ಲ.

ಇವರಿಬ್ಬರ ನಡುವೆ ವಾಗ್ವಾದ ನಡೆದಿದೆ. ನಿರ್ವಾಹಕ ಪ್ರಯಾಣಿಕನಿಗೆ ಕೆಟ್ಟ ಶಬ್ದಗಳಿಂದ ನಿಂದಿಸಿದ್ದಾನೆ ಎಂದು ಹೇಳಲಾಗಿದೆ.

ಈತ ಬಸ್ ನಿಂದ ಇಳಿಯದ ಕಾರಣಕ್ಕಾಗಿ ಚಾಲಕ ಪ್ರಯಾಣಿಕರು ತುಂಬಿದ್ದ ಬಸ್ ನ್ನು ಸೀದಾ ಪೋಲೀಸ್ ಠಾಣೆಗೆ ತಂದು ಪ್ರಯಾಣಿಕನನ್ನು ಎಳೆದು ಇಳಿಸಿ ಹೋಗಿದ್ಧಾನೆ.

ಎಸ್.ಐ.ಬುದ್ದಿಮಾತು

ಈ ವೇಳೆ ಠಾಣೆಯಲ್ಲಿದ್ದ ಎಸ್.ಐ.ರಾಮಕೃಷ್ಣ ಅವರು ಕೆ.ಎಸ್. ಆರ್.ಟಿ.ಸಿ.ಬಸ್ ಚಾಲಕ ಮತ್ತು ನಿರ್ವಾಹಕನಿಗೆ ಬುದ್ದಿ ಮಾತು ಹೇಳಿದ್ದಾರೆ.

ಬಡವರ ಗೋಳು ಕೇಳುವವರು ಯಾರು?

ಕೂಲಿ ಕಾರ್ಮಿಕರು ಬಸ್ ನಲ್ಲಿ ಮಾಂಸ , ಮೀನು ಕೊಂಡು ಅವಕಾಶ ವಿಲ್ಲ ಎಂದಾದರೆ ಮತ್ತೆ ಹೇಗೆ ಕೊಂಡುಹೋಗುವುದು ಎಂಬ ಪ್ರಶ್ನೆಯನ್ನು ಈತ ಮಾಡಿದ್ದಾನೆ.

ಕಾರು ,ರಿಕ್ಷಾ ಬಾಡಿಗೆ ಮಾಡಿಕೊಂಡು ಒಂದು ಕೆ.ಜಿ.ಕೋಳಿ ಕೊಂಡು ಹೋಗಬೇಕಾ ಎಂಬ ಪ್ರಶ್ನೆಯನ್ನು ಕೇಳಿದ್ದಾರೆ.

ಬಡವರು ಕೋಳಿ ಮಾಂಸ,ಕೊಂಡು ಹೋದರೆ ಅವರನ್ನು ಪೋಲೀಸ್ ಠಾಣೆಗೆ ಕರೆದುಕೊಂಡು ಹೋಗುವುದು ಎಷ್ಟು ಸರಿ ಎಂಬ ಪ್ರಶ್ನೆ ಸಾರ್ವಜನಿಕರದ್ದು, ನಿರ್ವಾಹಕ ಚಾಲಕರ ಇಂತಹ ನಡೆಯ ಬಗ್ಗೆ ಅಕ್ರೋಶಗಳು ವ್ಯಕ್ತವಾಗಿದೆ.

ಕೋಳಿ,ಮೀನು ತರುವಂತಿಲ್ಲ

ಬಸ್ ನಲ್ಲಿ ಕೋಳಿ,ಮೀನು ಮಾಂಸ ಬಸ್ ನಲ್ಲಿ ತರುವಂತಿಲ್ಲ, ಜೀವ ಇರುವ ವಸ್ತುವನ್ನು ತರಬಹುದು, ಮಾಂಸ ಇತರರಿಗೆ ವಾಸನೆ ಬರುತ್ತದೆ, ಇತರ ಪ್ರಯಾಣಿಕರಿಗೆ ತೊಂದರೆಯಾಗುತ್ತದೆ. ಎಂಬ ನಿಟ್ಟಿನಲ್ಲಿ ನಿಗಮ ಅದೇಶ ಮಾಡಿದೆ ಎಂದು ಕೆ.ಎಸ್. ಆರ್.ಟಿ.ಸಿ.ಬಂಟ್ವಾಳ ವಿಭಾಗದ ವಿಭಾಗೀಯ ಅಧಿಕಾರಿ ಶ್ರೀಶ ಭಟ್ ಅವರು ಮಾಹಿತಿ ನೀಡಿದ್ದಾರೆ.

‌‌

More from the blog

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...

ಕಡಬ: ಚೇರು ಪ್ರದೇಶದ ಮನೆಗೆ ಶಂಕಿತರ ಭೇಟಿ : ಊಟ ಮಾಡಿ, ಸಾಮಗ್ರಿ ಪಡೆದು ತೆರಳಿದ ಶಂಕಿತರು

ಸುಬ್ರಹ್ಮಣ್ಯ: ಕಡಬ ಪೊಲೀಸ್‌ ಠಾಣಾ ವ್ಯಾಪ್ತಿಯ ಮನೆಯೊಂದಕ್ಕೆ ಗುರುವಾರ ರಾತ್ರಿ ವೇಳೆ ಶಂಕಿತರ ತಂಡ ಆಗಮಿಸಿ ಊಟ, ಮಾಡಿ ದಿನಸಿ ಸಾಮಾಗ್ರಿಗಳನ್ನು ಪಡೆದು ತೆರಳಿರುವ ವಿಷಯ ಶುಕ್ರವಾರ ಸಂಜೆ ವೇಳೆಗೆ ಬೆಳಕಿಗೆ ಬಂದಿದೆ. ತಾಲೂಕಿನ...

ಬಜರಂಗದಳ ಪುತ್ತೂರು ಜಿಲ್ಲಾ ಸಂಯೋಜಕ ಭರತ್ ಕುಮ್ಡೇಲು ಗಡಿಪಾರು – ಸರಕಾರದ ಹಿಂದೂ ವಿರೋಧಿ ಧೋರಣೆ ನೀತಿಗೆ ಪ್ರಸಾದ್ ಕುಮಾರ್ ರೈ ಖಂಡನೆ

ಬಂಟ್ವಾಳ: ಬಜರಂಗದಳ ಪುತ್ತೂರು ಜಿಲ್ಲಾ ಸಂಯೋಜಕರಾದ ಭರತ್ ಕುಮ್ಡೇಲು ಅವರ ಗಡಿಪಾರು ಅದೇಶ ರಾಜಕೀಯ ಪ್ರೇರಿತ ಷಡ್ಯಂತ್ರವಾಗಿದ್ದು,ಸರಕಾರದ ಹಿಂದೂ ವಿರೋಧಿ ಧೋರಣೆ ನೀತಿಯನ್ನು ವಿಶ್ವಹಿಂದೂ ಪರಿಷತ್ ಬಂಟ್ವಾಳ ‌ಪ್ರಖಂಡದ ಅಧ್ಯಕ್ಷ ನ್ಯಾಯವಾದಿ ಪ್ರಸಾದ್...