Saturday, April 6, 2024

ಲಾರಿ ಹಾಗೂ ಕ್ರೇನ್ ನಡುವೆ ಅಪಘಾತ : ಕೆಲ ಹೊತ್ತು ಸಂಚಾರಕ್ಕೆ ಅಡಚಣೆ

ಬಂಟ್ವಾಳ: ಲಾರಿ ಹಾಗೂ ಕ್ರೇನ್ ನಡುವೆ ಅಜ್ಜಿಬೆಟ್ಟು ಕ್ರಾಸ್ ಬಳಿ ಅಪಘಾತ ಸಂಭವಿಸಿದ್ದು, ಕೆಲ ಹೊತ್ತು ಸಂಚಾರಕ್ಕೆ ಅಡಚಣೆ ಉಂಟಾಯಿತು.

ಬಿಸಿರೋಡಿನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಅಜ್ಜಿ ಬೆಟ್ಟು ಕ್ರಾಸ್ ನಲ್ಲಿ ಅಪಘಾತ ಸಂಭಿಸಿದ್ದು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಕ್ರೇನ್ ನ ಎದುರು ಭಾಗದ ಕೊಕ್ಕು ತಾಗಿದ ಪರಿಣಾಮವಾಗಿ ಲಾರಿಯ ಮೇಲ್ಬಾಗದಲ್ಲಿ ಸ್ವಲ್ಪ ಡ್ಯಾಮೇಜ್ ಉಂಟಾಗಿದೆ. ಲಾರಿ ಚಾಲಕನ ತಲೆ ಮೇಲೆಯೇ ಡ್ಯಾಮೇಜ್ ಆಗಿದ್ದು, ಲಾರಿ ಚಾಲಕನ ಸಮಯಪ್ರಜ್ಞೆಯಿಂದ ಯಾವುದೇ ಗಾಯವಾಗದೆ ಪಾರಾಗಿದ್ದಾನೆ.

ಕ್ರೇನ್ ನ ಕೊಕ್ಕು ತಾಗಿದ ಕೂಡಲೇ ಎಚ್ಚೆತ್ತುಕೊಂಡ ಚಾಲಕ ತಲೆಯನ್ನು ಕಳೆಗೆ ಮಾಡಿದ ಪರಿಣಾಮವಾಗಿ ಬಚಾವ್ ಆಗಿದ್ದಾನೆ.

ಕ್ರೇನ್ ಚಾಲಕ ಬಸ್ ನಿಲ್ದಾಣದ ಕಡೆಯಿಂದ ಮತ್ತೆ ಬಿಸಿರೋಡು ಪೇಟೆಗೆ ಹೋಗುವ ಉದ್ದೇಶದಿಂದ ಅಜ್ಜಿಬೆಟ್ಟು ಕ್ರಾಸ್ ನಲ್ಲಿ ತಿರುಗಿಸಿದಾಗ ಕೈಕಂಬ ಕಡೆಯಿಂದ ಬರುತ್ತಿದ್ದ ಲಾರಿಗೆ ಡಿಕ್ಕಿಯಾಗಿದೆ.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸಾವು ಗೆದ್ದು ಬಂದ ಸಾತ್ವಿಕ್ ; ಸತತ 20 ಗಂಟೆಗಳ ಕಾರ್ಯಾಚರಣೆ ಯಶಸ್ವಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ 2 ವರ್ಷದ ಕಂದ ಸಾತ್ವಿಕ್​​ನನ್ನು ಕೊನೆಗೂ ರಕ್ಷಣಾ ಪಡೆಯ ಸಿಬ್ಬಂದಿ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇಂಡಿಯ ಲಚ್ಯಾನ ಗ್ರಾಮದ ತೋಟದಲ್ಲಿ ಆಟವಾಡುತ್ತಿದ್ದಾಗ ಮಗು ಕೊಳವೆ ಬಾವಿಗೆ ಬಿದ್ದಿತ್ತು. ಈ ಸಂಬಂಧ...

ಕೊಳವೆ ಬಾವಿಗೆ ಬಿದ್ದ 2 ವರ್ಷದ ಕಂದಮ್ಮ : ರಕ್ಷಣೆಗೆ ಅರ್ಧ ಅಡಿಯಷ್ಟೇ ಬಾಕಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ ಮಗು ಸಾತ್ವಿಕ ಸುರಕ್ಷಿತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತಕ್ಕೆ ಬಂದಿದೆ. ಮಗು ಸುರಕ್ಷಿತವಾಗಿದ್ದು, ಕಾರ್ಯಾಚರಣೆ ಆಶಾದಾಯಕವಾಗಿದೆ. 16 ಅಡಿ ಆಳದಲ್ಲಿರುವ ಸಾತ್ವಿಕ್ ರಕ್ಷಣೆಗಾಗಿ 22 ಅಡಿ ಆಳದವರೆಗೆ ಸುರಂಗ...

ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ

ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರು ಬುಧವಾರ ನಾಮಪತ್ರ ಸಲ್ಲಿಸಿದರು. ಇನ್ನು ಕೋಟ ಶ್ರೀನಿವಾಸ್ ಪೂಜಾರಿ ಅವರು ನಾಮಪತ್ರ ಸಲ್ಲಿಸುವ ಮುನ್ನ ಪಕ್ಷದ ಕಾರ್ಯಕರ್ತರ ಬೃಹತ್‌ ಸಮಾವೇಶ...