Sunday, October 22, 2023

ಮಂಗಳೂರು ದಸರಾ – ನಾಳೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಭೇಟಿ

Must read

ಮಂಗಳೂರು: ಮಂಗಳೂರಿನಲ್ಲಿ ದಸರಾ ಹಬ್ಬ ವಿಜೃಂಭನೆಯಿಂದ ನಡೆಯುತ್ತಿದ್ದು ಅ.23ರಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಆಗಮಿಸಲಿದ್ದಾರೆ.

ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿ ಕಾರ್ಯಕ್ರಮದ ನೇತೃತ್ವ ವಹಿಸಲಿದ್ದಾರೆ. ಅ.24ರಂದು ಸಂಜೆ 4 ಗಂಟೆಯಿಂದ ಶ್ರೀ ಶಾರದಾ ಮಾತೆಯ ಶೋಭಾಯಾತ್ರೆ ಎಂದು ಕರೆಯಲಾಗುವ ಭವ್ಯ ಮೆರವಣಿಗೆ ನಡೆಯಲಿದೆ.

ಇನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನಸೌಧದ ಅಧ್ಯಕ್ಷ ಯು.ಟಿ. ಖಾದರ್, ಮಂಗಳೂರು ಬಿಷಪ್ ರೆ| ಡಾ ಪೀಟರ್ ಪಾವ್ ಸಲ್ಡಾನ್ಹಾ ಹಾಗೂ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.

More articles

Latest article