Friday, April 5, 2024

ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕೃಷಿ ಇಲಾಖೆ ಅಧಿಕಾರಿ

ಮಂಗಳೂರು: ಲಂಚ ಸ್ವೀಕರಿಸುತ್ತಿದ್ದಾಗ ಕೃಷಿ ಇಲಾಖೆಯ ಅಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಮಂಗಳೂರಿನ ಉಪ ಕೃಷಿ ನಿರ್ದೇಶಕಿ ಭಾರತಮ್ಮ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಅಧಿಕಾರಿ.

ಅರಣ್ಯ ಇಲಾಖೆಯ ಅಧಿಕಾರಿಯಾಗಿದ್ದ ಪರಮೇಶ್.ಎನ್.ಪಿ ಅವರು ಆಗಸ್ಟ್ ನಲ್ಲಿ ನಿವೃತ್ತಿ ಹೊಂದಿದ್ದು, ಕರ್ತವ್ಯ ನಿರ್ವಹಿಸುತ್ತಿರುವ ಸಮಯದಲ್ಲಿ, ಬಂಟ್ವಾಳ ತಾಲೂಕು ಸಜೀಪ ಮುನ್ನೂರು, ಸಜೀಪ ಮೂಡ, ಸಜೀಪಪಡು, ಕುರ್ನಾಡು, ನರಿಂಗಾನ, ಬಾಳೆಪುಣಿ ಮತ್ತು ಮಂಜನಾಡಿ ಗ್ರಾಮಗಳ ಸಾರ್ವಜನಿಕರಿಗೆ ಸರ್ಕಾರದ ವತಿಯಿಂದ ವಿವಿಧ ಜಾತಿಯ 50 ಲಕ್ಷದ ಮೌಲ್ಯದ ಸಸಿ ವಿತರಣೆ ಮಾಡಿದ್ದರು.

ನರ್ಸರಿ ಮಾಲೀಕರಿಂದ ಅರಣ್ಯ ಇಲಾಖೆ 50 ಲಕ್ಷ ರೂ. ಸಸಿ ಖರೀದಿಸಿದ್ದು, 32 ಲಕ್ಷ ರೂ. ಬಾಕಿ ಉಳಿಸಿಕೊಂಡಿತ್ತು. ಈ ಬಾಕಿ ಮೊತ್ತವನ್ನು ರಿಲೀಸ್‌ ಮಾಡುವಂತೆ ಪರಮೇಶ್‌ ಹೇಳಿದಾಗ ಭಾರತಮ್ಮ 1ಲಕ್ಷಕ್ಕೆ ಬೇಡಿಕೆಯಿಟ್ಟಿದ್ದರು. “ಬಿಲ್ ಮೊತ್ತದ 18% ಹಣವನ್ನು ಮುಂಗಡವಾಗಿ ತನಗೆ ಲಂಚದ ರೂಪದಲ್ಲಿ ನೀಡಬೇಕು ಇಲ್ಲವಾದರೆ ತಾನು ಬಿಲ್ ಪಾವತಿ ಮಾಡುವುದಿಲ್ಲ” ಎಂದು ಬೇಡಿಕೆ ಇಟ್ಟಿದ್ದರು.

ಈ ಹಿನ್ನಲೆಯಲ್ಲಿ ಲೋಕಾಯುಕ್ತಕ್ಕೆ ದೂರು ನೀಡಿದ್ದು, ಈ ಹಿನ್ನಲೆಯಲ್ಲಿ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು ಇಂದು ಭಾರತಮ್ಮ ರವರು ದೂರುದಾರಿಂದ 1ಲಕ್ಷ ಲಂಚದ ಹಣವನ್ನು ಸ್ವೀಕರಿಸುವಾಗ ಸ್ಥಳದಲ್ಲಿಯೇ ಸಿಕ್ಕಿಬಿದ್ದಿದ್ದಾರೆ. ಸದ್ಯ ಆರೋಪಿತರನ್ನು ಬಂಧಿಸಿ ಮಾಡಿ ಲಂಚದ ಹಣವನ್ನು ವಶಪಡಿಸಿಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

ಮಂಗಳೂರು ಲೋಕಾಯುಕ್ತ ಎಸ್ಪಿ ಸಿ.ಎ. ಸೈಮನ್ ಮಾರ್ಗದರ್ಶನದಲ್ಲಿ , ಡಿವೈಎಸ್ಪಿ ಶ್ರೀಮತಿ ಕಲಾವತಿ,ಕೆ, ಡಿವೈಎಸ್ಪಿ ಚಲುವರಾಜು ಹಾಗೂ ಇನ್ಸ್ಪೆಕ್ಟರ್ ಸುರೇಶ್, ಕುಮಾರ್‌.ಪಿ ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

More from the blog

ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ನಾಮಪತ್ರ ಸಲ್ಲಿಕೆ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಅವರು ಪೂಜೆ...

ದೇವರ ರಥ ಹೋಗುವ ದಾರಿಯಲ್ಲಿ ಇದ್ದ ವಾಹನಗಳನ್ನ ಜಖಂಗೊಳಿಸಿದ ಭಕ್ತರು

ಮುಲ್ಕಿ: ದೇವರ ರಥ ಹೋಗುವ ದಾರಿಯಲ್ಲಿದ್ದ ವಾಹನಗಳನ್ನು ಭಕ್ತರು ಜಖಂ ಗೊಳಿಸಿದ ಘಟನೆ ಮುಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ಜಾತ್ರೆಯಲ್ಲಿ ಇತ್ತೀಚೆಗೆ ನಡೆದಿದ್ದು, ಇದೀಗ ಈ ವಿಡಿಯೋ ವೈರಲ್ ಆಗುತ್ತಿದೆ. ಜಾತ್ರೆಯಲ್ಲಿ ದೇವರ ರಥ ಹೋಗುವ...

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ನಾಮಪತ್ರ ಸಲ್ಲಿಕೆ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪದ್ಮರಾಜ್ ಅರ್.ಪೂಜಾರಿ ಅವರು ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮುಂಭಾಗದಿಂದ ಎ.ಬಿ.ಶೆಟ್ಟಿ ಸರ್ಕಲ್ ವರೆಗೆ...

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಚುನಾವಣಾ ಸಿಬ್ಬಂದಿ

ಮಂಗಳೂರು: ವೈಯಕ್ತಿಕ ಕಾರಣಗಳ ಹಿನ್ನೆಲೆಯಲ್ಲಿ ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ  ನಗರದ ಜಿಲ್ಲಾಧಿಕಾರಿಯವರ ಕಚೇರಿ ಆವರಣದಲ್ಲಿ ನಡೆದಿದೆ. ಕೂಡಲೇ ಅವರನ್ನು ನಗರ್ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ...