Monday, October 23, 2023

ನಾಪತ್ತೆಯಾಗಿದ್ದ ಪೊಲೀಸ್ ಕಾನ್ಸ್ಟೇಬಲ್ ಮೃತದೇಹ ಬಾವಿಯಲ್ಲಿ ಪತ್ತೆ

Must read

ಕಾರ್ಕಳ: ಅಕ್ಟೋಬರ್ 19ರಂದು ಕಾಣೆಯಾಗಿದ್ದ ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್‌ ಅವರ ಮೃತದೇಹ ಕಾರ್ಕಳ ಪುಲ್ಕೇರಿ ಸಮೀಪದ ಬಾವಿಯಲ್ಲಿ ಪತ್ತೆಯಾಗಿದೆ.

ಕಾರ್ಕಳ ನಗರ ಠಾಣೆಯ ಹೆಡ್ ಕಾನ್ಸ್ಟೇಬಲ್ ಶೃತಿನ್ ಶೆಟ್ಟಿ ಮೃತದೇಹ ಬಾವಿಯಲ್ಲಿ ಪತ್ತೆಯಾಗಿದೆ.

ಕಾಪು ಜನಾರ್ದನ ದೇವಸ್ಥಾನ ಬಳಿಯಿರುವ ಅಂಗಡಿಮನೆ ನಿವಾಸಿ ಶೃತಿನ್ ಶೆಟ್ಟಿ ಅ.19ರಂದು ಕಾಣೆಯಾಗಿದ್ದು, ಅಂದು ರಾತ್ರಿ 7.30ಕ್ಕೆ ಪತ್ನಿಗೆ ಫೋನ್ ಮಾಡಿ ನಾನು ನಂದಿಕೂರಿನಲ್ಲಿದ್ದು ಮನೆಗೆ ಬರುತ್ತಿರುವುದಾಗಿ ಹೇಳಿದ್ದರು. ಅನಂತರ ಅವರ ಫೋನ್ ಸ್ವಿಚ್ ಆಫ್ ಆಗಿತ್ತು. ಶುಕ್ರವಾರ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಶೃತಿನ್ ಪತ್ನಿ ನಾಪತ್ತೆ ದೂರು ದಾಖಲಿಸಿದ್ದರು.

ಇನ್ನು 2008ರ ಬ್ಯಾಚಿನಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಯಾಗಿದ್ದ ಇವರು ಎರಡು ತಿಂಗಳ ಹಿಂದೆಯಷ್ಟೇ ಬಡ್ತಿಯಾಗಿ ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೆಬಲ್ ಆಗಿ ಕರ್ತವ್ಯಕ್ಕೆ ಹಾಜರಾಗಿದ್ದರು.

ಈ ಕುರಿತು ಪೊಲೀಸರು ಅಸಹಜ ಸಾವು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

More articles

Latest article