Tuesday, April 9, 2024

ಕೊಣಾಜೆ: ಯುವಕ ನಾಪತ್ತೆ

ಮಂಗಳೂರು: ಕೊಣಾಜೆ ನಿವಾಸಿ ನಮಿತ್‌ ಮನೆಯಿಂದ ನಾಪತ್ತೆಯಾಗಿದ್ದು, ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿಕಾಂ ವಿದ್ಯಾಭ್ಯಾಸ ಮುಗಿಸಿದ್ದ ಆತ ಮನೆಯವರ ಸೂಚನೆ ಮೇರೆಗೆ ಹೆಚ್ಚಿನ ವಿದ್ಯಾಭ್ಯಾಸಕ್ಕೆ ಮನೆಯಿಂದ 25 ಸಾವಿರ ರೂ. ನಗದು ಪಡೆದುಕೊಂಡಿದ್ದು, ಮಾಡೂರಿನ ಕಾಲೇಜೊಂದರಲ್ಲಿ ಪ್ರವೇಶಾತಿ ಪಡೆದಿರುವುದಾಗಿ ತಿಳಿಸಿದ್ದ. ಪ್ರತಿ ದಿನ ಕಾಲೇಜಿಗೆಂದು ತೆರಳಿ ಸಂಜೆ ವಾಪಾಸಾಗುತ್ತಿದ್ದ.

ಅ.17ರಂದು ಕಾಲೇಜು ಫೀಸು ಎಂದು ಹೇಳಿ ಕಾಲೇಜು ಖಾತೆಗೆ 1.25 ಲಕ್ಷ ರೂ. ವರ್ಗಾವಣೆ ಮಾಡಿಸಿದ್ದ. ಅ. 25ರಂದು ಬೆಳಗ್ಗೆ ಕಾಲೇಜಿನಿಂದ ಆತನ ತಂದೆಗೆ ಕರೆ ಮಾಡಿ, ನಿಮ್ಮ ಮಗ ನಮ್ಮ ಕಾಲೇಜಿನಲ್ಲಿ ಪ್ರವೇಶ ಪಡೆದಿಲ್ಲ. ಕಟ್ಟಿರುವ ಹಣವನ್ನು ವಾಪಾಸು ತೆಗೆದುಕೊಳ್ಳಿ ಎಂದು ತಿಳಿಸಿದ್ದಾರೆ. ಈ ಬಗ್ಗೆ ನಮಿತ್‌ನಲ್ಲಿ ವಿಚಾರಿಸಿದಾಗ ಆತ ಪ್ರತಿಕ್ರಿಯೆ ನೀಡಿಲ್ಲ. ಇದಾದ ಬಳಿಕ ಆತ ನೇರವಾಗಿ ಕಾಲೇಜಿಗೆ ಹೋಗಿ ಹಣ ವಾಪಸು ಕೇಳಿದ್ದು, ಇದರಿಂದ ಅನುಮಾನಗೊಂಡ ಕಾಲೇಜು ಸಿಬ್ಬಂದಿ, ಆತನ ತಂದೆಗೆ ಮಾಹಿತಿ ನೀಡಿದ್ದಾರೆ.

ಅವರು ಅಲ್ಲಿಗೆ ಹೋದಾಗ ಆತ ಅಲ್ಲಿಂದ ತೆರಳಿದ್ದ. ಅವರು ತತ್‌ಕ್ಷಣ ಮನೆಗೆ ಕರೆಮಾಡಿ ಕೇಳಿದಾಗ ಮಧ್ಯಾಹ್ನ ಆಟೋದಲ್ಲಿ ಮನೆಗೆ ಬಂದು ಅದೇ ಆಟೋದಲ್ಲಿ ವಾಪಸು ಹೋಗಿರುವುದಾಗಿ ಯುವಕನ ತಾಯಿ ತಿಳಿಸಿದ್ದಾರೆ. ಆದರೆ ಆ ಬಳಿಕ ಮನೆಗೆ ಬಂದಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇನ್ನು ಈತನ ಬಗ್ಗೆ ಮಾಹಿತಿಯಿದ್ದಲ್ಲಿ ಕೊಣಾಜೆ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.

More from the blog

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...

ಏಪ್ರಿಲ್ 14ರಂದು ಮಂಗಳೂರಿಗೆ ಪ್ರಧಾನಿ ಮೋದಿ

ಬೆಂಗಳೂರು: ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ಸಮಾವೇಶ ಚಿಕ್ಕಬಳ್ಳಾಪುರದಿಂದ ಮಂಗಳೂರಿಗೆ ಸ್ಥಳಾಂತರಗೊಂಡಿದ್ದು, ಅದರಂತೆ, ಏಪ್ರಿಲ್ 14 ರಂದು ದ.ಕ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಮಾವೇಶ ನಡೆಯಲಿದೆ.. ಏಪ್ರಿಲ್ 14ಕ್ಕೆ ಬೆಂಗಳೂರಿಗೆ ಆಗಮಿಸಲಿರುವ...

ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ : ಕಡಬ, ಅಜೆಕಾರಿನಲ್ಲಿ ದಾಖಲೆಯ ಉಷ್ಣಾಂಶ

ಮಂಗಳೂರು: ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ಶಾಕ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಕರಾವಳಿ ಭಾಗದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಎ. 4ರಿಂದ 5ರ...

ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ನಾಮಪತ್ರ ಸಲ್ಲಿಕೆ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಅವರು ಪೂಜೆ...