Monday, April 15, 2024

ಕುಚ್ಚಲಕ್ಕಿ ಬೆಲೆ ಭಾರೀ ಹೆಚ್ಚಳ : ಕಂಗಾಲಾದ ಕರಾವಳಿಯ ಜನತೆ

ಮಂಗಳೂರು: ಕುಚ್ಚಲಕ್ಕಿ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ.

ಕುಚ್ಚಲಕ್ಕಿ ಕೆ.ಜಿ.ಗೆ 15ರಿಂದ 20 ರೂ. ಹೆಚ್ಚಳವಾಗಿ 48 ರಿಂದ 50 ರೂ. ನಲ್ಲಿ ಮಾರಾಟವಾಗುತ್ತಿದೆ. ಆದರೆ ಭತ್ತದ ಬೆಲೆ ಕೆ.ಜಿ.ಗೆ 2-3 ರೂ. ಮಾತ್ರ ಏರಿಕೆಯಾಗಿದೆ. ಖಾಸಗಿ ಮಿಲ್‌ಗ‌ಳಲ್ಲಿ ಸ್ಥಳೀಯ ಭತ್ತಕ್ಕೆ ಕ್ವಿಂಟಾಲ್‌ಗೆ 2,500-2,600 ರೂ. ಇದೆ. ಕಟಾವು ಚುರುಕುಗೊಂಡ ತಕ್ಷಣ ಇಳಿಮುಖವಾಗುವ ಭೀತಿಯೂ ಇದೆ. ಹಿನ್ನಲೆಯಲ್ಲಿ ಜನತೆ ಕಂಗಾಲಾಗಿದ್ದಾರೆ.

ಕರಾವಳಿ ಸೇರಿದಂತೆ ಮಲೆನಾಡು, ಬಯಲುಸೀಮೆ ಭಾಗದಲ್ಲೂ ಕಾರ್ಮಿಕರ ಕೊರತೆ, ಬೆಲೆಯ ಅಸ್ಥಿರತೆ ಇತ್ಯಾದಿ ಕಾರಣಕ್ಕೆ ಭತ್ತದ ಬೇಸಾಯ ಕುಸಿತ ಕಂಡಿದ್ದು, ಇದರಿಂದಾಗಿ ಕುಚ್ಚಲಕ್ಕಿ ಬೆಲೆ ಏರಿಕೆಯಾಗಿದೆ. ಆದರೆ ಮಧ್ಯವರ್ತಿಗಳು ಭತ್ತದ ಬೆಳೆಯನ್ನು ಏರದಂತೆ ತಡೆಯುತ್ತಿದ್ದಾರೆ ಎಂದು ರೈತರು ಆರೋಪವನ್ನು ಮಾಡುತ್ತಿದ್ದಾರೆ.

ಭತ್ತ ಹಾಗೂ ಅಕ್ಕಿ ನಡುವಿನ ಬೆಲೆ ವ್ಯತ್ಯಾಸವನ್ನು ಸರಿಪಡಿಸಿ ರೈತರಿಗೆ ನ್ಯಾಯ ಒದಗಿಸಲು ಸರಕಾರ ಮಧ್ಯಪ್ರವೇಶಿಸಿ ಕೂಡಲೇ ಭತ್ತಕ್ಕೆ ಹೆಚ್ಚಿನ ಬೆಂಬಲ ಬೆಲೆ ನಿಗದಿಪಡಿಸಬೇಕು. ಅದಕ್ಕಿಂತ ಕಡಿಮೆ ಬೆಲೆಯಲ್ಲಿ ಭತ್ತ ಖರೀದಿಸದಂತೆ ಖಾಸಗಿಯವರಿಗೆ ಕಡಿವಾಣ ಹಾಕುವ ವ್ಯವಸ್ಥೆ ಜಾರಿಯಾಗಬೇಕು ಎಂದು ರೈತರು ಆಗ್ರಹಿಸಿದ್ದಾರೆ.

More from the blog

ಹಿಂದೂ‌ ಸಂಘಟನೆಯ ಕಾರ್ಯಕರ್ತನಿಗೆ ಚೂರಿ ಇರಿತ

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹಿಂದೂಯುವಸೇನೆಯ ಮುಖಂಡನಾಗಿದ್ದು, ಉದ್ಯಮಿಯಾಗಿರುವ...

ಮಂಗಳೂರು: ರೋಡ್​ಶೋ ಮೂಲಕ ಪ್ರಧಾನಿ ಮೋದಿ ಚುನಾವಣಾ ಪ್ರಚಾರ

ಮಂಗಳೂರು: ರಾಜ್ಯದ ಲೋಕಸಭಾ ಚುನಾವಣೆ ಅಖಾಡಕ್ಕೆ ಇಳಿದಿರುವ ಪ್ರಧಾನಿ ನರೇಂದ್ರ ಮೋದಿ, ಮೈಸೂರಿನಿಂದ ತಮ್ಮ ಯಾತ್ರೆ ಆರಂಭಿಸಿದ್ದಾರೆ. ಇದೀಗ ಮಂಗಳೂರಿನಲ್ಲಿ ರೋಡ್​ಶೋ ಮೂಲಕ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಮೈಸೂರಿನಲ್ಲಿ ಅದ್ದೂರಿ...

ಲೋಕಸಭಾ ಚುನಾವಣೆ : ‘ಸಂಕಲ್ಪ ಪತ್ರ’ ಹೆಸರಿನಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ನವದೆಹಲಿ: ದೆಹಲಿಯಲ್ಲಿರುವ ಬಿಜೆಪಿಯ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಕಸಭೆ ಚುನಾವಣೆಗಾಗಿ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ‘ಸಂಕಲ್ಪ ಪತ್ರ’ ಹೆಸರಲ್ಲಿ ದೇಶದ ಜನರಿಗೆ ಪ್ರಧಾನಿ ಮೋದಿ ಆಶ್ವಾಸನೆಗಳನ್ನು ನೀಡಿದ್ದು ಮೊದಲ ಸಂಕಲ್ಪ...

ಪ್ರಧಾನಿ ಮೋದಿ ರೋಡ್ ಶೋಗೆ ಸಿದ್ಧತೆ : ರಸ್ತೆಗಳಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌

ಮಂಗಳೂರು: ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ರೋಡ್‌ ಶೋ ಇರುವ ಹಿನ್ನೆಲೆಯಲ್ಲಿ ಭಾರೀ ಪೊಲೀಸ್‌ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಶನಿವಾರ ಸಂಜೆಯಿಂದಲೇ ಪೊಲೀಸರು ಕಾರ್ಯ ನಿರತರಾಗಿದ್ದು, ಹೊಸದಿಲ್ಲಿಯಿಂದ ಆಗಮಿಸಿರುವ ಎಸ್‌ಪಿಜಿ ಅಧಿಕಾರಿಗಳು ರೋಡ್‌ ಶೋ...