Saturday, April 6, 2024

ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಬೀಳ್ಕೊಡುವ ಸಮಾರಂಭ

ಪುಂಜಾಲಕಟ್ಟೆ ಪೊಲೀಸ್ ಠಾಣೆಯಿಂದ ವರ್ಗಾವಣೆಗೊಂಡ ಸಿಬ್ಬಂದಿಯವರಿಗೆ‌ ಹಾಗೂ ಬೆಳ್ತಂಗಡಿ ವೃತ್ತದಿಂದ‌ ಬಂಟ್ವಾಳ ಗ್ರಾಮಾಂತರ ಠಾಣೆಗೆ ವರ್ಗಾವಣೆ ಗೊಂಡ ಪೊಲೀಸ್ ನಿರೀಕ್ಷರಿಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯ ವತಿಯಿಂದ ಬೀಳ್ಕೊಡುವ ಸಮಾರಂಭ ಮಡಂತ್ಯಾರ್ SDS ಸಭಾಂಗಣದಲ್ಲಿ ನಡೆಯಿತು.

ಬೆಳ್ತಂಗಡಿ ವೃತ್ತದ ವೃತ್ತ ನಿರೀಕ್ಷಕರಾಗಿದ್ದು, ಬಂಟ್ವಾಳ ಗ್ರಾಮಾಂತರ ಠಾಣೆಗೆ ವರ್ಗಾವಣೆಯಾದ‌ ಶಿವಕುಮಾರ್ ಬಿ ರವರಿಗೆ, ಪುಂಜಾಲಕಟ್ಟೆ ಪೊಲೀಸ್ ಠಾಣೆಯಿಂದ ವೇಣೂರು ಪೊಲೀಸ್ ಠಾಣೆಗೆ ವರ್ಗಾವಣೆಗೊಂಡ ಸತ್ಯಪ್ರಕಾಶ್, ಪುತ್ತೂರು ನಗರ‌‌ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡ ಪ್ರಭಾಕರ್ ಮೋರೆ, ಪುತ್ತೂರು ಸಂಚಾರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡ ಸಾಬು ಮಿರ್ಜಿ, ಕರಾವಳಿ ಕಾವಲು ಪಡೆಗೆ‌ ವರ್ಗಾವಣೆಗೊಂಡ ಪ್ರದೀಪ್ ರವರಿಗೆ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಬೀಳ್ಕೋಡಲಾಯಿತು.

ಕಾರ್ಯಕ್ರಮದಲ್ಲಿ ಪುಂಜಾಲಕಟ್ಟೆ ಪೊಲೀಸ್ ಠಾಣಾ ಪಿಎಸ್ಐ ನಂದಕುಮಾರ್ ರವರು ಉಪಸ್ಥಿತರಿದ್ದು, ಪೊಲೀಸ್ ಸಿಬ್ಬಂದಿಗಳ ಕುಟುಂಬಸ್ಥರು ಹಾಗೂ ವೃತ್ತದ ಸಿಬ್ಬಂದಿಯ ವರು ಹಾಜರಿದ್ದರು.

ಕಾರ್ಯಕ್ರಮದಲ್ಲಿ ಎ.ಎಸ್.ಐ ನಾರಾಯಣ ರವರು ಸ್ವಾಗತಿಸಿ, ಮಪಿಸಿ ಲೋಲಾಕ್ಷಿ ರವರು ವಂದಿಸಿ, ಠಾಣಾ ಬರಹಗಾರರಾದ‌ ಮನೋಹರ್‌ ಪಿ.ಸಿ ರವರು ಕಾರ್ಯಕ್ರಮ ನಿರೂಪಿಸಿದರು. ಎ.ಎಸ್.ಐ ತಾರನಾಥ್ , ಹೆಚ್.ಸಿ ಸಂದೀಪ್‌ ಹಾಗೂ ಠಾಣಾ ಸಿಬ್ಬಂದಿಯವರು ಸಹಕರಿಸಿದರು.

More from the blog

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...

ಗ್ರಾಮೀಣ ಪುನರ್ವಸತಿ ಕಾರ್ಯಕತರಿಗೆ ಮತದಾನ ಜಾಗೃತಿ

ಬಂಟ್ವಾಳ ತಾಲೂಕು ಪಂಚಾಯತ್, ತಾಲೂಕು ಕಚೇರಿ ಹಾಗೂ ತಾಲೂಕು ಸ್ವೀಪ್ ಸಮಿತಿಯಿಂದ ಗ್ರಾಮೀಣ ಪುನರ್ವಸತಿ ಕಾರ್ಯಕತರಿಗೆ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ತಾಲೂಕು ಆಡಳಿತ ಸೌಧದಿಂದ ಹಮ್ಮಿಕೊಂಡ ಜಾಥಾ ಬಿ.ಸಿ.ರೋಡ್ ಖಾಸಗಿ ಬಸ್ ನಿಲ್ದಾಣ...