Monday, April 8, 2024

ಅಕ್ರಮ ಕಲ್ಲು ಗಣಿಗಾರಿಕೆಗೆ ಪೊಲೀಸರಿಂದ ದಾಳಿ : ಆರೋಪಿಗಳು ಪರಾರಿ

ಬಂಟ್ವಾಳ: ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಬಗ್ಗೆ ತಿಳಿದು ಪೋಲೀಸರು ದಾಳಿ ನಡೆಸಿದ ವೇಳೆ ಆರೋಪಿಗಳು ಸೊತ್ತುಗಳನ್ನು ಬಿಟ್ಟು ಪರಾರಿಯಾದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಮಂಚಿ ಎಂವಲ್ಲಿ ನಡೆದಿದೆ.

ಸಿ.ಇ.ಎನ್ ಅಪರಾಧ ಪೋಲೀಸ್ ಠಾಣಾ ಪೋಲೀಸ್ ಉಪನಿರೀಕ್ಷಕ ಮಂಜುನಾಥ ಟಿ.ಅವರು ಕಚೇರಿ ಕಾರ್ಯದ ನಿಮಿತ್ತ ಮಂಚಿ ರಸ್ತೆಯಾಗಿ ಹೋಗುತ್ತಿದ್ದ ವೇಳೆ ಮಂಚಿ ಮುಡಿಪು ರಸ್ತೆಯ ಕಂಡತಟ್ಟು ಗುಡ್ಡ ತಲುಪಿದಾಗ ಅಲ್ಲಿ ಕೆಂಪು ಕಲ್ಲು ಗಣಿಗಾರಿಕೆ ನಡೆಸುವುದು ಕಂಡು ಬಂದಿದೆ.

ಗಣಿಗಾರಿಕೆಯನ್ನು ನೋಡಿ ದಾಳಿ ನಡೆಸಿದಾಗ ಆರೋಪಿಗಳು ಕೆಂಪು ಕಲ್ಲು ಗಣಿಗಾರಿಕೆಗೆ ಬಳಸುತ್ತಿರುವ ಯಂತ್ರವನ್ನು ಸ್ಥಳದಲ್ಲಿ ಬಿಟ್ಟು ಪರಾರಿಯಾಗಿದ್ದಾರೆ.

ಈ ಬಗ್ಗೆ ಅವರು ಬಂಟ್ವಾಳ ಗ್ರಾಮಾಂತರ ಪೋಲೀಸರಿಗೆ ಮಾಹಿತಿ ನೀಡಿದ್ದು, ಪರವಾನಿಗೆ ಇಲ್ಲದೆ ಅಕ್ರಮವಾಗಿ ಗಣಿಗಾರಿಕೆ ಮಾಡಲು ಬಳಸಿದ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಆರೋಪಿಗಳ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ.

More from the blog

ಬಿಳಿನೆಲೆಗೆ ಬಂದ ನಕ್ಸಲರಿಗೆ ಶೋಧ : 6 ಮೊಬೈಲ್‌, 1 ಲ್ಯಾಪ್‌ಟಾಪ್‌ ಚಾರ್ಜ್‌ ಮಾಡಿಸಿಕೊಂಡ ನಕ್ಸಲರು

ಸುಬ್ರಹ್ಮಣ್ಯ: ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಚೇರು ಎಂಬಲ್ಲಿನ ಅರಣ್ಯದಂಚಿನ ಮನೆಗೆ ಗುರುವಾರ ರಾತ್ರಿ ಭೇಟಿ ನೀಡಿದ್ದ ಮುಸುಕುಧಾರಿ, ಶಸ್ತ್ರಧಾರಿ ನಕ್ಸಲರ ತಂಡದಲ್ಲಿ 6 ಮಂದಿ ಇದ್ದರು ಎನ್ನುವುದು ದೃಢಪಟ್ಟಿದೆ. ಬಂದವರೆಲ್ಲರೂ ಒಂದೇ ರೀತಿಯ...

ವಿಶ್ವ ಹಿಂದೂ ಪರಿಷತ್, ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ “ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ” ಬೃಹತ್ ಪಾದಯಾತ್ರೆ

ಬಂಟ್ವಾಳ: ವಿಶ್ವ ಹಿಂದೂ ಪರಿಷತ್,ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಲೋಕಕಲ್ಯಾಣಾರ್ಥವಾಗಿ "ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ" ಬೃಹತ್ ಪಾದಯಾತ್ರೆಯು ಭಾನುವಾರ ಮುಂಜಾನೆ ನಡೆಯಿತು. ಬೆಳಗ್ಗಿನ ಜಾವ‌ 5.30 ರ ವೇಳೆಗೆ ಕಡೆಗೋಳಿ ಪೊಳಲಿ ದ್ವಾರ,...

ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಶ್ರಮಿಸಿದ ಸ್ವಯಂಸೇವಕರಿಗೆ ಕೃತಜ್ಞತಾ ಸಭೆ

ಬಂಟ್ವಾಳ: ದೇವಸ್ಥಾನದ ನಿರ್ಮಾಣ ಮಾಡಿದರೆ,ಸಾಲದು ಅದರ ಪ್ರಭಾವ ಇನ್ನಷ್ಟು ಬೆಳಗಬೇಕಾದರೆ ಭಕ್ತರು ಕ್ಷೇತ್ರಕ್ಕೆ ಬಂದು ದೇವರ ದರ್ಶನ ಮಾಡಬೇಕಾಗಿದೆ ಎಂದು ಶ್ರೀ ಧಾಮ ಮಾಣಿಲ ಕ್ಷೇತ್ರದ ಯೋಗಿ ಕೌಸ್ತುಭ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ...

ಪ್ರಶಾಂತ್ ಪುಂಜಾಲಕಟ್ಟೆ ಅವರಿಗೆ ಪಿತೃ ವಿಯೋಗ

ಬಂಟ್ವಾಳ: ನಮ್ಮ ಬಂಟ್ವಾಳ ಸಮೂಹ ಸಂಸ್ಥೆಯ ಮಾಲಕರಾದ ಪ್ರಶಾಂತ್ ಪುಂಜಾಲಕಟ್ಟೆ ಅವರ ತೀರ್ಥರೂಪರು, ಕುಕ್ಕಳ ಗ್ರಾಮದ ಪುಂಜಾಲಕಟ್ಟೆ ನಿವಾಸಿ ಸಂಜೀವ ಪೂಜಾರಿ( 83) ಅವರು ಅಲ್ಪಕಾಲದ ಅಸೌಖ್ಯದಿಂದ ಎ.6ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...