Monday, October 30, 2023

ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗ್ರಾ.ಪಂ.ಸದಸ್ಯರು: ಎಂಟು ಮಂದಿ ಎಸ್.ಡಿ.ಪಿ.ಐ.ಬೆಂಬಲಿತ ಸದಸ್ಯರ ವಿರುದ್ದ ಠಾಣೆಯಲ್ಲಿ ಪ್ರಕರಣ ದಾಖಲು

Must read

ಬಂಟ್ವಾಳ: ಗ್ರಾಮ ಪಂಚಾಯತ್ ಗೆ ಯಾವುದೇ ಮಾಹಿತಿ ನೀಡದೆ ಗ್ರಾಮಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕಿದ್ದಲ್ಲದೆ,ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂಬ ಕಾರಣಕ್ಕಾಗಿ ಎಂಟು ಮಂದಿ ಗ್ರಾಮಪಂಚಾಯತ್ ಸದಸ್ಯರ ಮೇಲೆ ಕಾನೂನು ಕ್ರಮಕ್ಕೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಯೊರ್ವರು ದೂರು ನೀಡಿದ ಘಟನೆ ಸಜೀಪ ಮುನ್ನೂರು ಎಂಬಲ್ಲಿ ನಡೆದಿದೆ.
ಸಜೀಪಮುನ್ನೂರು ಗ್ರಾ.ಪಂ.ನ ಪಿಡಿಒ ಲಕ್ಷ್ಮಣ್ ಎಂಬವರು ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಇಲ್ಲಿನ ಎಸ್.ಡಿ.ಪಿ.ಈ
ಐ.ಬೆಂಬಲಿತ ಎಂಟು ಮಂದಿ ಸದಸ್ಯರುಗಳು ಗ್ರಾಮಪಂಚಾಯತ್ ಗೆ ಯಾವುದೇ ಮುನ್ನೆಚ್ಚರಿಕೆ ನೀಡದೆ ಮುತ್ತಿಗೆ ಹಾಕಿದ್ದರು.
ಅಲ್ಲದೆ ಪಂಚಾಯತ್ ಸಿಬ್ಬಂದಿಗಳಾದ ಮೀನಾಕ್ಷಿ, ಮಹಮ್ಮದ್ ಹಾರಿಶ್,ನಳಿನಿ,ಸುಮನಾ ರವರನ್ನು ಕಚೇರಿಯೊಳಗೆ ಹೋಗದಂತೆ ತಡೆ ಹಿಡಿದು ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು.
ಜೊತೆಗೆ ಕಚೇರಿಯ ಬೀಗದ ಕೀಯನ್ನು ಬಲವಂತವಾಗಿ ಕಸಿದುಕೊಂಡಿರುವುದಾಗಿಯೂ ದೂರಿನಲ್ಲಿ ತಿಳಿಸಿದ್ದಾರೆ.
ಗ್ರಾಮ ಪಂಚಾಯತ್ ಸದಸ್ಯರಾದ
ಅಬುಬಕ್ಕರ್ ಸಿದ್ದೀಕ್, ಜಮಾಲುದ್ದೀನ್, ಫಾತಿಮಾ ಸೌನ್,ಪೌಝಿಯಾ,ಸಬೀನಾ, ರಜಿಯಾ, ಸಾಜಿದ್, ವಹಿದಾಬಾನು ಎಂಬವರು ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದು ಎಲ್ಲರ ಮೇಲೆ ಕಾನೂನು ಕ್ರಮಕೈಗೊಳ್ಳುವಂತೆ ಪಿಡಿಒ ಲಕ್ಷ್ಮಣ್ ಅವರು ನಗರ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

More articles

Latest article