Saturday, April 6, 2024

ಆಭರಣದೊಂದಿಗೆ ಪೊಲೀಸರಿಗೆ ಶರಣಾದ ದೇಗುಲದ ಮಾಜಿ ಅಧ್ಯಕ್ಷ

ಉಪ್ಪಿನಂಗಡಿ: ಕಳೆದ ಡಿಸೆಂಬರ್ ತಿಂಗಳಲ್ಲಿ ನಡೆದ ಪೆರ್ನೆಯ ಕಳೆಂಜ – ದೇಂತಡ್ಕದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸದ ವೇಳೆ ದೇವರಿಗೆ ಸಮರ್ಪಿಸಲಾದ ಆಭರಣಗಳು ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಿದ ಬೆನ್ನಿಗೆಯೇ ದೇವಳದ ಆಡಳಿತ ಮಂಡಳಿಯ ಮಾಜಿ ಅಧ್ಯಕ್ಷ ನಾಪತ್ತೆಯಾದ ಚಿನ್ನಾಭರಣದೊಂದಿಗೆ ಪೊಲೀಸರಿಗೆ ಶರಣಾಗಿರುವ ಘಟನೆ ನಡೆದಿದೆ.

ದೇವಾಲಯದ ಬ್ರಹ್ಮಕಲಶಾಭಿಷೇಕದ ವೇಳೆ ಭಕ್ತರೋರ್ವರು ಸುಮಾರು ಮೂರು ಮುಕ್ಕಾಲು ಪವನಿನ ಐದು ಎಳೆಗಳಿಂದ ಕೂಡಿದ ಚಿನ್ನದ ಜೋಮಾಲೆ ಸರವನ್ನು ದೇವರಿಗೆ ಸಮರ್ಪಿಸಿದ್ದರು. ಇದರೊಂದಿಗೆ ಈ ಹಿಂದಿನ ದೇವಾಲಯದ ಪುನರ್ ನಿರ್ಮಾತೃ ದಿ. ರಾಮದಾಸ್ ರೈ ಎಂಬವರು ಸಮರ್ಪಿಸಿದ ಎರಡು ಪವನಿನ ಚಿನ್ನದ ಸರ ದೇವಾಲಯದಲ್ಲಿತ್ತು.

ಕಳೆದ ಭಾನುವಾರ ಆಡಳಿತಾಧಿಕಾರಿಯ ಸಮ್ಮುಖದಲ್ಲಿ ಆಭರಣಗಳು ನಾಪತ್ತೆಯಾಗಿರುವ ವಿಚಾರ ಬೆಳಕಿಗೆ ಬಂದಿತ್ತು. ಈ ಬಗ್ಗೆ ದೇವಾಲಯದ ಆಡಳಿತ ಮಂಡಳಿಯ ಮಾಜಿ ಕಾರ್ಯದರ್ಶಿ ಗೋಪಾಲ ಶೆಟ್ಟಿ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದರು.

ಪ್ರಕರಣಕ್ಕೆ ಸಂಬಂಧಿಸಿ ಶಂಕಿತರ ವಿರುದ್ಧ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಂತೆಯೇ, ಚಿನ್ನಾಭರಣವನ್ನು ಉಪ್ಪಿನಂಗಡಿಯ ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಅಡಮಾನವಿರಿಸಿ ಹಣ ಪಡೆದಿದ್ದ ಮಾಜಿ ಅಧ್ಯಕ್ಷ ರೋಹಿತಾಕ್ಷ ಬಾಣಬೆಟ್ಟು ಚಿನ್ನಾಭರಣವನ್ನು ಹಣಕಾಸು ಸಂಸ್ಥೆಯಿಂದ ಬಿಡಿಸಿಕೊಂಡು ನೇರವಾಗಿ ಪೊಲೀಸ್ ಠಾಣೆಗೆ ಹಾಜರಾಗಿದ್ದರು.

ಆರೋಪಿಯನ್ನು ವಶಕ್ಕೆ ಪಡೆದುಕೊಂಡ ಪೊಲೀಸರು ದೇವಾಲಯದಲ್ಲಿ ಮಹಜರು ನಡೆಸಿ ಇಲಾಖಾ ಕ್ರಮ ಕೈಗೊಂಡಿದ್ದಾರೆ. ಆದರೆ ಮತ್ತೊಂದು ಚಿನ್ನದ ಸರ ನಾಪತ್ತೆಯಾಗಿದ್ದು, ಇದರ ತನಿಖೆ ಮುಂದುವರಿದೆ.

More from the blog

ಕೊಳವೆ ಬಾವಿಗೆ ಬಿದ್ದ 2 ವರ್ಷದ ಕಂದಮ್ಮ : ರಕ್ಷಣೆಗೆ ಅರ್ಧ ಅಡಿಯಷ್ಟೇ ಬಾಕಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ ಮಗು ಸಾತ್ವಿಕ ಸುರಕ್ಷಿತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತಕ್ಕೆ ಬಂದಿದೆ. ಮಗು ಸುರಕ್ಷಿತವಾಗಿದ್ದು, ಕಾರ್ಯಾಚರಣೆ ಆಶಾದಾಯಕವಾಗಿದೆ. 16 ಅಡಿ ಆಳದಲ್ಲಿರುವ ಸಾತ್ವಿಕ್ ರಕ್ಷಣೆಗಾಗಿ 22 ಅಡಿ ಆಳದವರೆಗೆ ಸುರಂಗ...

ಮಿತಿ ಮೀರಿದ ತಾಪಮಾನ : ಖಡಕ್​ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಬಿರು ಬಿಸಿಲು ಹೆಚ್ಚಳವಾಗುತ್ತಿದ್ದು ಮುಂದಿನ 14 ದಿನಗಳ ಕಾಲ ಬಿಸಿಗಾಳಿ ಬೀಸಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ (KSNDMC) ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್​...

ಮನೆಯ ಮಹಡಿಯಿಂದ ಬಿದ್ದು ಬಾಲಕ ಸಾವು

ಬಂಟ್ವಾಳ: ಮನೆಯ ಮಹಡಿಯ ಮೇಲಿಂದ ಕೆಳಗೆ ಬಿದ್ದು ಬಾಲಕನೋರ್ವ ಮೃತಪಟ್ಟ ಘಟನೆ ಎ.‌ ೧ರ ಮುಂಜಾನೆ ನಡೆದಿದೆ. ಬಂಟ್ವಾಳ ಜಕ್ರಿಬೆಟ್ಟು ನಿವಾಸಿ ದಿನೇಶ್ ಪೂಜಾರಿ ಅವರ ಪುತ್ರ ಆದಿಶ್(೧೫) ಮೃತಪಟ್ಟ ಬಾಲಕ. ಆತ ಮನೆಯಲ್ಲಿ ದೊಡ್ಡಮ್ಮನ...

ಮಾಂಸ ಪ್ರಿಯರಿಗೆ ಬೆಲೆ ಏರಿಕೆ ಶಾಕ್.. ಕೋಳಿ ಮಾಂಸದ ದರ ಏರಿಕೆ

ಮಂಗಳೂರು: ಕೋಳಿಮಾಂಸ, ಮೀನಿನ ದರ ಏರುಗತಿ ಯಲ್ಲಿ ಸಾಗುತ್ತಿದ್ದು ಮಾಂಸಾಹಾರ ಪ್ರಿಯರ ಜೇಬಿಗೂ ಕತ್ತರಿ ಬೀಳುವಂತಾಗಿದೆ. ಪ್ರಸ್ತುತ ಕೋಳಿಮಾಂಸಕ್ಕೆ (ವಿದ್‌ ಸ್ಕಿನ್‌) ಕೆ.ಜಿ.ಗೆ ಬ್ರಾಯ್ಲರ್‌ ಕೆಲವು ಕಡೆ 235-240 ರೂ., ಟೈಸನ್‌ 270 ರೂ....