Wednesday, April 10, 2024

ಮಜಿ ಸ.ಹಿ.ಪ್ರಾಥಮಿಕ ಶಾಲೆಯಲ್ಲಿ ಸಮುದಾಯದತ್ತ ಕಾರ್ಯಕ್ರಮ

ಕಲ್ಲಡ್ಕ: ಶೈಕ್ಷಣಿಕ ವಿಚಾರಗಳ ಸಂಬಂಧಿತವಾದ ಒಳ್ಳೆಯ ಚಚೆ೯ಗಳು ಮೂಡಿಬಂದಾಗ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ಕೆಲಸಗಳು ಮೂಡಲು ಸಾಧ್ಯ ‌. ಪ್ರತಿಯೊಬ್ಬ ವಿದ್ಯಾರ್ಥಿ, ಪೋಷಕರು,ತನ್ನ ಶಾಲೆಯ ಬಗ್ಗೆ ಒಳ್ಳಯ ಭಾವನೆ, ಸಂಬಂಧ ಇರಬೇಕು ಆಗ ಮಾತ್ರ ಶೈಕ್ಷಣಿಕವಾಗಿ ಹಾಗೂ ಭೌತಿಕ ಅಭಿವೃದ್ಧಿ ಪಡಿಸಲು ಸಾಧ್ಯಗುತ್ತದೆ ಎಂದು ಶಾಲಾ ಮುಖ್ಯ ಶಿಕ್ಷಕಿ ಬೆನಡಿಕ್ಟಾ ಆಗ್ನೇಸ್ ಮಂಡೋನ್ಸಾ ಹೇಳಿದರು.

ಅವರು ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಜಿ, ಇಲ್ಲಿ ನಡೆದ ಸಮುದಾಯದತ್ತ ಕಾರ್ಯಕ್ರಮದ ಶಾಲಾ ಶಿಕ್ಷಕ ರಕ್ಷಕ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಶಾಲೆಯನ್ನು ಇನ್ನಷ್ಟು ಅಭಿವೃದ್ಧಿಪಡಿಸುವ ದೃಷ್ಟಿಯಿಂದ ಹಾಗೂ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಮಾಡಲು ಪೋಷಕರೊಂದಿಗೆ ಮುಕ್ತವಾಗಿ ಚರ್ಚಿಸಿ ಸಲಹೆ ಅಭಿಪ್ರಾಯವನ್ನು ಪಡೆದು ಸದರಿ ವರ್ಷದ ಡಿಸೆಂಬರ್ ತಿಂಗಳ ಎರಡನೇ ವಾರದಲ್ಲಿ ಶಾಲಾ ವಾರ್ಷಿಕೋತ್ಸವವನ್ನು ಆಚರಿಸುದೆಂದು ಪೋಷಕರ ಒಪ್ಪಿಗೆ ಮೇರೆಗೆ ಶಾಲಾಭಿವೃದ್ಧಿ ಸಮಿತಿಯ ಮೂಲಕ ನಿರ್ಣಯಿಸಲಾಯಿತು

ಕಾರ್ಯಕ್ರಮದ ವೇದಿಕೆಯಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೊರಗಪ್ಪ ನಾಯ್ಕ್ ಸಿಂಗೇರಿ, ಶಾಲಾ ಶಿಕ್ಷಕರುಗಳಾದ ಶಕುಂತಲಾ ಎಂ ಬಿ, ಸಂಗೀತ ಶರ್ಮಾ ಪಿ ಜಿ, ಅನುಷಾ, ಮುರ್ಷಿದ ಬಾನು, ಮಮತಾ ಮೊದಲಾದವರು ಉಪಸ್ಥಿತರಿದ್ದು ಪೋಷಕರ ಪ್ರಶ್ನೆಗಳಿಗೆ ಮಾಹಿತಿಗಳನ್ನು ಹಂಚಿಕೊಂಡರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಪೋಷಕರು, ಶಾಲಾಭಿವೃದ್ಧಿಸಮಿತಿಯ ಸದಸ್ಯರುಗಳು ಉಪಸ್ಥಿತರಿದ್ದರು. ಶಿಕ್ಷಕಿ ಮಮತಾ ಸ್ವಾಗತಿಸಿ, ಶಿಕ್ಷಕಿ ಮುರ್ಷಿದ ಬಾನು ವಂದಿಸಿ, ಶಿಕ್ಷಕಿ ಸಂಗೀತ ಶರ್ಮ ಕಾರ್ಯಕ್ರಮ ನಿರೂಪಿಸಿದರು.

More from the blog

ಮನೆಗೆ‌ ನುಗ್ಗಿ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ‌ಗ್ರಾಮಾಂತರ ಪೋಲೀಸ್ ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದು,ನ್ಯಾಯಾಲಯ ಈತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಅಬ್ದುಲ್ ರಹಿಮಾನ್ ಎಂಬಾತ ಬಂಧಿತ...

ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ನಾರಿಶಕ್ತಿ ಮಹಿಳಾ ಸಮಾವೇಶ

ಬಂಟ್ವಾಳ: ನಾರಿ ಶಕ್ತಿ ಸಶಕ್ತರಾಗಬೇಕು ಎಂಬುದು ಮಹತ್ವದ ಕನಸು ಮತ್ತು ಪರಿಕಲ್ಪನೆಯಾಗಿದ್ದು, ರಾಜಕೀಯವಾಗಿ ಮಹಿಳೆಯರನ್ನು ಸಬಲೀಕರಣ ಮಾಡಿದ ಪಕ್ಷ ಬಿಜೆಪಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರದ...

ವಿಕಸಿತ ಭಾರತ ಸಂಕಲ್ಪದೊಂದಿಗೆ ಗ್ರಾಮ, ಮನೆ, ಮನ ಅಭಿಯಾನ ಸಂಪರ್ಕಕ್ಕೆ ಶಾಸಕ ರಾಜೇಶ್ ನಾಯ್ಕ್ ಚಾಲನೆ

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು, ದ.ಕ.ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಪ್ರಚಂಡ ಬಹುಮತದೊಂದಿಗೆ ಗೆಲುವು ಸಾಧಿಸಬೇಕು ಎಂಬ ಯೋಚನೆಯಿಂದ ಶಾಸಕ ರಾಜೇಶ್ ನಾಯ್ಕ್ ಅವರು ವಿಕಸಿತ ಭಾರತ ಸಂಕಲ್ಪದೊಂದಿಗೆ ಗ್ರಾಮ ,ಮನೆ,...

ವೀರಕಂಬ ಗ್ರಾಮದ ಗ್ರಾಮದೈವ ಶ್ರೀ ಗಿಳಿಕಿಂಜತಾಯಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

ಬಂಟ್ವಾಳ ತಾಲೂಕು ವೀರಕಂಬ ಗ್ರಾಮದ ಗ್ರಾಮದೈವ ಶ್ರೀ ಗಿಳಿಕಿಂಜತಾಯಿ ದೇವಸ್ಥಾನದ ವರ್ಷವದಿ ಜಾತ್ರೆಯು ಊರ ಪರವೂರ ಭಕ್ತದಿಗಳ ಸೇರಿಗೆಯಲ್ಲಿ ವಿಜೃಂಭಣೆಯಿಂದ ಜರಗಿತು. ದಿನಾಂಕ 7-4-2024 ರ ರಾತ್ರಿ ಗಿಳಿಕಿಂಜ ಬಂಡಾರ ಮನೆಯಿಂದ ದೈವದ ಬಂಡಾರ...