Friday, April 5, 2024

ವಿಟ್ಲ: ವಿವೇಕ ಶಾಲಾ ಕೊಠಡಿ ಕಾಮಗಾರಿಗೆ ಶಿಲಾನ್ಯಾಸ

ವಿಟ್ಲ: ವಿಟ್ಲ ಸರಕಾರಿ ಪ್ರೌಢಶಾಲೆ (ಆರ್ ಎಂ ಎಸ್ ಎ) ಯಲ್ಲಿ 32 ಲಕ್ಷ 80 ಸಾವಿರ ವೆಚ್ಚದ ವಿವೇಕ ಶಾಲಾ ಕೊಠಡಿಗಳ ಶಿಲಾನ್ಯಾಸ ಕಾರ್ಯಕ್ರಮವನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ನೆರವೇರಿಸಿದರು.

ರಾಜ್ಯದಲ್ಲೇ ಅತ್ಯಧಿಕ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಇರುವ ಸರಕಾರಿ ಶಾಲೆಗೆ ಬೇಕಾದಂತಹ ಸವಲತ್ತುಗಳನ್ನು ಒದಗಿಸುವ ವ್ಯವಸ್ಥೆ ಮಾಡುವುದು ಶಾಸಕರ ಕರ್ತವ್ಯ. ಶಾಲೆಯಲ್ಲಿ ಗುಣಾತ್ಮಕ ಶಿಕ್ಷಣ ದೊರೆತು ಉತ್ತಮ ವಿದ್ಯಾರ್ಥಿಗಳನ್ನು ಹೊರತರುವಂತಾಗಲಿ ಎಂದು ಈ ಸಂದರ್ಭದಲ್ಲಿ ಅವರು ಹಾರೈಸಿದರು.

ಶಾಲಾ ಗೌರವಾಧ್ಯಕ್ಷ ಸುಬ್ರಾಯ ಪೈ ಅವರು ಶಾಸಕರ ವತಿಯಿಂದ ಶಾಲೆಗೆ ಬಂದಂತಹ ವಿವಿಧ ಸವಲತ್ತುಗಳ ಬಗ್ಗೆ ತಿಳಿಸಿದರು.

ಬಂಟ್ವಾಳದ ಶಾಲಾ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್, ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರುಗಳಾದ ಶಾರದಾ ಮತ್ತು ರವಿಶಂಕರ ಶಾಸ್ತ್ರಿ ಇತರ ಸದಸ್ಯರು, ಪಟ್ಟಣ ಪಂಚಾಯಿತಿಯ ಸದಸ್ಯರಾದ ಗೋಪಿಕೃಷ್ಣ, ಅಶ್ರಫ್, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ರಮಾನಾಥ ವಿಟ್ಲ, ಪಂಚಾಯತ್ ರಾಜ್ ಇಲಾಖೆಯ ಇಂಜಿನಿಯರ್ ನಾಗೇಶ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ವಾರಿಜಾಕುಮಾರಿ, ನಿವೃತ್ತ ಮುಖ್ಯ ಶಿಕ್ಷಕಿ ಪುಷ್ಪಾ, ಇಂಜಿನಿಯರ್ ರಾಘವೇಂದ್ರ ಪೈ, ಪ್ರೌಢಶಾಲೆಯ ವಿದ್ಯಾರ್ಥಿಗಳು ಹಾಗೂ ಸಹಶಿಕ್ಷಕರು ಉಪಸ್ಥಿತರಿದ್ದರು.

ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಅನ್ನಪೂರ್ಣಾ ಸ್ವಾಗತಗೈದು ವಂದಿಸಿದರು.

More from the blog

ಕಲ್ಲಡ್ಕ: ಖಾಸಗಿ ಬಸ್ಸಿಗೆ ಪಿಕಪ್ ಢಿಕ್ಕಿ: ಹಲವರಿಗೆ ಗಾಯ

ವಿಟ್ಲ: ವಿಟ್ಲ ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ಬಸ್ಸಿಗೆ ಪಿಕಪ್ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡಿದ್ದಾರೆ. ವಿಟ್ಲ ಕಡೆಗೆ ಕಾಂಕ್ರೀಟ್ ಮಿಕ್ಸರ್ ಯಂತ್ರವನ್ನು ಒಯ್ಯುತ್ತಿದ್ದ ಪಿಕಪ್ ಆಕಸ್ಮಿಕವಾಗಿ ವಿಟ್ಲದಿಂದ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ಸಿಗೆ...

ವಿಟ್ಲ : ಮಹಿಳೆ ಆತ್ಮಹತ್ಯೆ

ವಿಟ್ಲ: ವಿಟ್ಲಪಡ್ನೂರು ಗ್ರಾಮದ ಕುಂಟುಕುಡೇಲು ಕಾಪಿಕಾಡು ನಿವಾಸಿ ಮಹಿಳೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಿ.ರಾಮಣ್ಣ ನಾಯ್ಕ ಅವರ ಪತ್ನಿ ಸುಶೀಲಾ ಅವರು ಮನೆ ಸಮೀಪದ ಗುಡ್ಡದಲ್ಲಿ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ಮುಂಭಾಗದಲ್ಲಿ ನೀರಿಗಾಗಿ ಪ್ರತಿಭಟನೆ 

ವಿಟ್ಲ: ವಿಟ್ಲ ಮುಡ್ನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ೩ನೇ ವಾರ್ಡ್‌ನಲ್ಲಿ ಕುಡಿಯುವ ನೀರಿನ ಸಮಸ್ಯೆಯಿದ್ದು, ಜನಪ್ರತಿನಿಧಿಗಳು ಹಾಗೂ ಗ್ರಾಮ ಪಂಚಾಯಿತಿ ಯಾವುದೇ ಸ್ಪಂದನೆ ನೀಡುತ್ತಿಲ್ಲ ಎಂದು ಆರೋಪಿಸಿ ಗ್ರಾಮಸ್ಥರು ಕೊಡ, ಬಕೆಟ್ ಹಿಡಿದು...

ಜಿಲ್ಲಾ ಕಾಂಗ್ರೇಸ್ ಹಿಂದುಳಿದ ವರ್ಗದ ಉಪಾಧ್ಯಕ್ಷ ಪದ್ಮನಾಭ ಸೇವಂತ ಅವರದು, ಆತ್ಮಹತ್ಯೆಯಲ್ಲ, ವ್ಯವಸ್ಥಿತ ಕೊಲೆ ಶಂಕೆ: ಪ್ರಕಾಶ್ ಶೆಟ್ಟಿ ತನಿಖೆಗೆ ಒತ್ತಾಯ

ಬಂಟ್ವಾಳ: ದ.ಕ.ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಪದ್ಮನಾಭ‌ ಸೇವಂತ ಎಂಬವರ ಸಾವಿನ ಸುತ್ತ ಅನುಮಾನಗಳು ವ್ಯಕ್ಯವಾಗಿದ್ದು, ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ ಪ್ರಕರಣ ಎಂದು ಕಂಡು ಬಂದರೂ ಇದನ್ನು ವಿಮರ್ಶೆ ಮಾಡಿದರೆ ಇದೊಂದು ಕೊಲೆ...