Sunday, April 14, 2024

ವಿಟ್ಲ: ಎನ್ನೆಸ್ಸೆಸ್ ಶಿಬಿರ ಉದ್ಘಾಟನೆ

ವಿಟ್ಲ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಪದವಿಪೂರ್ವ), ರಾಷ್ಟ್ರೀಯ ಸೇವಾ ಯೋಜನಾ ಘಟಕ, ವಿಠಲ ಪದವಿಪೂರ್ವ ಕಾಲೇಜು ಇದರ 20 ನೇ ವಾರ್ಷಿಕ ಶಿಬಿರ 2023-24 ‘ಸ್ವಚ್ಛ ಪರಿಸರ ಮತ್ತು ಸ್ವಸ್ಥ ಸಮಾಜಕ್ಕೆ ಯುವ ಜನತೆ’ ಬೊಳಂತಿಮೊಗರು ದ ಕ ಜಿ ಪಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಕ್ಟೋಬರ್ 13 ರಿಂದ 19 ರ ತನಕ ನಡೆಯಲಿದ್ದು, ಈ ಶಿಬಿರದ ಉದ್ಘಾಟನೆಯನ್ನು ವಿಟ್ಲ ಸರಾಸರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಪದ್ಮನಾಭ ನೆರವೇರಿಸಿದರು.

ವಿಠಲ ಎಜುಕೇಶನ್ ಸೊಸೈಟಿ ಅಧ್ಯಕ್ಷ ಮುಗುಳಿ ತಿರುಮಲೇಶ್ವರ ಭಟ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಿಟ್ಲ ಪಟ್ಟಣ ಪಂಚಾಯತ್ ಸದಸ್ಯ ಅಬ್ದುಲ್ ರಹಿಮಾನ್, ವಿಠಲ ಎಜುಕೇಶನ್ ಸೊಸೈಟಿ ಉಪಾಧ್ಯಕ್ಷ ಅಲ್ಫಾನ್ಸ್ ಸಿಲ್ವೆಸ್ಟರ್ ಮಸ್ಕರೇನಸ್, ಕೋಶಾಧಿಕಾರಿ ಬಾಬು ಕೊಪ್ಪಳ, ಸದಸ್ಯ ಸದಾಶಿವ ಬನ, ಪ್ರಾಂಶುಪಾಲ ಆದರ್ಶ ಚೊಕ್ಕಾಡಿ, ಬೊಳಂತಿಮೊಗರು ಶಾಲಾ sdmc ಅಧ್ಯಕ್ಷ ಪುರಂದರ ಅಂಚನ್, ಸದಸ್ಯ ಜಗದೀಶ್ ಚಂದ್ರ ಗೌಡ ನಾಯ್ತೊಟ್ಟು, ನಿವೃತ್ತ ಮುಖ್ಯ ಶಿಕ್ಷಕ ಕೇಶವಯ್ಯ ಎಸ್, ಶಿಕ್ಷಕ ಚಂದ್ರಶೇಖರ ಗೌಡ, ಬೊಳಂತಿಮೊಗರು ಪ್ರೌಢಶಾಲಾ ಮುಖ್ಯ ಶಿಕ್ಷಕಿ ಸಂಧ್ಯಾರಾಣಿ ಮತ್ತು ಶಿಕ್ಷಕ ರಾಮಣ್ಣ ಗೌಡ ಭಾಗವಹಿಸಿದ್ದರು.

ಶಿಬಿರಾಧಿಕಾರಿ ಅಣ್ಣಪ್ಪ ಬಿ.ಎಸ್ ಪ್ರಸ್ತಾಪಿಸಿ ಸ್ವಾಗತಿಸಿದರು. ಚೈತನ್ಯ ವಂದಿಸಿದರು. ಉಪನ್ಯಾಸಕಿ ಜಲಜಾಕ್ಷಿ ಕಾರ್ಯಕ್ರಮ ನಿರೂಪಿಸಿದರು.

More from the blog

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...

ಕಲ್ಲಡ್ಕ: ಖಾಸಗಿ ಬಸ್ಸಿಗೆ ಪಿಕಪ್ ಢಿಕ್ಕಿ: ಹಲವರಿಗೆ ಗಾಯ

ವಿಟ್ಲ: ವಿಟ್ಲ ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ಬಸ್ಸಿಗೆ ಪಿಕಪ್ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡಿದ್ದಾರೆ. ವಿಟ್ಲ ಕಡೆಗೆ ಕಾಂಕ್ರೀಟ್ ಮಿಕ್ಸರ್ ಯಂತ್ರವನ್ನು ಒಯ್ಯುತ್ತಿದ್ದ ಪಿಕಪ್ ಆಕಸ್ಮಿಕವಾಗಿ ವಿಟ್ಲದಿಂದ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ಸಿಗೆ...

ವಿಟ್ಲ : ಮಹಿಳೆ ಆತ್ಮಹತ್ಯೆ

ವಿಟ್ಲ: ವಿಟ್ಲಪಡ್ನೂರು ಗ್ರಾಮದ ಕುಂಟುಕುಡೇಲು ಕಾಪಿಕಾಡು ನಿವಾಸಿ ಮಹಿಳೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಿ.ರಾಮಣ್ಣ ನಾಯ್ಕ ಅವರ ಪತ್ನಿ ಸುಶೀಲಾ ಅವರು ಮನೆ ಸಮೀಪದ ಗುಡ್ಡದಲ್ಲಿ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.