ಬಂಟ್ವಾಳ : ಅಕ್ಷರ ದಾಸೋಹ ನೌಕರರಿಗೆ ಬಾಕಿ ಇರುವ ವೇತನ ಕೂಡಲೇ ಪಾವತಿಸುವಂತೆ ಹಾಗೂ ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಯನ್ನು ಕೂಡಲೇ ಈಡೇರಿಸಲು ಒತ್ತಾಯಿಸಿ ಇಂದು ಬಿ.ಸಿ.ರೋಡ್ ಆಡಳಿತ ಸೌಧದ ಮುಂಭಾಗ ಕರ್ನಾಟಕ ರಾಜ್ಯ ಪ್ರಗತಿಪರ ಅಕ್ಷರ ದಾಸೋಹ ನೌಕರರ ಸಂಘ ಎ.ಐ.ಸಿ.ಸಿ.ಟಿ.ಯು ವತಿಯಿಂದ ಪ್ರತಿಭಟನೆ ನಡೆಯಿತು.
ಪ್ರತಿಭಟನೆ ಯನ್ನುದ್ದೇಶಿಸಿ ಎ.ಐ.ಸಿ.ಸಿ.ಟಿ.ಯು ಜಿಲ್ಲಾ ಅಧ್ಯಕ್ಷರಾದ ರಾಮಣ್ಣ ವಿಟ್ಲ ಮಾತನಾಡಿ ಅಕ್ಷರ ದಾಸೋಹ ನೌಕರರು ಕಳೆದ ಇಪ್ಪತ್ತು ವರ್ಷಗಳಿಂದ ಕಡಿಮೆ ವೇತನ ದಲ್ಲಿ ದುಡಿಯುತ್ತಿದ್ದು 3 ತಿಂಗಳಿಂದ ಸಂಬಳ ನೀಡದೆ ಸತಾಯಿಸಲಾಗುತ್ತಿದೆ ಎಂದು ಆರೋಪಿಸಿದರು ಹಾಗೂ ಚುನಾವಣೆ ಸಂಧರ್ಭದಲ್ಲಿ ಸಂಬಳ ಏರಿಕೆ ಮಾಡುವುದಾಗಿ ಭರವಸೆ ನೀಡಿದ್ದು ಸರಕಾರವು ಈ ವರೆಗೆ ಏರಿಕೆ ಮಾಡಿರುವುದಿಲ್ಲ ಕೂಡಲೇ ವೇತನ ಏರಿಕೆ ಮಾಡದಿದ್ದಲ್ಲಿ ಅಕ್ಟೋಬರ್ 30 ರಿಂದ ಅನಿರ್ಧಿಷ್ಡಾವಧಿ ಧರಣಿ ನಡೆಸಲಾಗುವುದು ಎಂದರು.
ಪ್ರತಿಭಟನೆ ನಂತರ ತಹಶೀಲ್ದಾರ್ ಮುಖಂತರ ಮುಖ್ಯಮಂತ್ರಿ ಗಳಿಗೆ ಹಾಗೂ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳ ಮುಖಾಂತರ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಲಾಯಿತು.
ಸಂಘದ ಅಧ್ಯಕ್ಷರಾದ ಜಯಶ್ರೀ ಆರ್.ಕೆ ಸ್ವಾಗತಿಸಿದರು. ಪ್ರತಿಭಟನೆಯ ನೇತೃತ್ವ ವನ್ನು ಸಂಘದ ಕಾರ್ಯದರ್ಶಿ ವಾಣಿಶ್ರೀ , ಮುಖಂಡರಾದ ಜಯಂತಿ ಶಂಭೂರು, ಲಲಿತಾಂಭಿಕೆ, ವನಿತಾ ದಡ್ಡಲಕಾಡು, ಮಾಲತಿ ,ವಿನಯ ನಡುಮೊಗರು, ಮಮತಾ ಬಿಳಿಯೂರು ಮುಂತಾದವರು ನೇತೃತ್ವ ವಹಿಸಿದ್ದರು.