Sunday, April 7, 2024

ಬೋರ್ ವೆಲ್ ಲಾರಿ – ಕಾರು ನಡುವೆ ಭೀಕರ ಅಪಘಾತ: ಕಂಬಳ ನೋಡಿ ವಾಪಾಸ್‌ ಆಗುತ್ತಿದ್ದ ದ.ಕ ಮೂಲದ ಇಬ್ಬರ ಸಾವು

ಕುಣಿಗಲ್ : ಬೋರ್ ವೆಲ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಮೂರು ಮಂದಿ ಗಾಯಗೊಂಡಿರುವ ಘಟನೆ ರಾಜ್ಯ ಹೆದ್ದಾರಿ 33 ತಾಲೂಕಿನ ಕೊತ್ತಗೆರೆ ಹೋಬಳಿ ಚಿಗಣಿ ಪಾಳ್ಯ ಗ್ರಾಮದ ಬಳಿ ಭಾನುವಾರ ಮುಂಜಾನೆ ಸಂಭವಿಸಿದೆ.

ಮಂಗಳೂರಿನ ಬಜಪೆ ಮೂಲದ ಕಿಶಾನ್ ಶೆಟ್ಟಿ ದಕ್ಷಿಣ ಕನ್ನಡ ಜಿಲ್ಲೆ ಭಟ್ಟರ ತೋಟ ಗ್ರಾಮದ ಫಿಲೀಪ್ ನೇರಿ ಲೋಬೋ ಮೃತ ದುರ್ಧೈವಿಗಳು. ನಿತೀಶ್ ಭಡಾರಿ, ಪ್ರೀತಿ ಲೋಬೋ, ಹರೀಶ್ ತೀವ್ರವಾಗಿ ಗಾಯಗೊಂಡು ಅದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಕಂಬಳ‌ ನೋಡಿಕೊಂಡು‌ ಮಂಗಳೂರಿಗೆ ಕಾರಿನಲ್ಲಿ ವಾಪಸ್ ಆಗುತ್ತಿದ್ದರು. ಈ ವೇಳೆ ಚಿಗಣಿಪಾಳ್ಯ ಬಳಿಯ ರಸ್ತೆಯಲ್ಲಿ ಬರುತ್ತಿದ್ದಂತೆ ಕಾರು ಹಾಗೂ ಬೋರ್​​ವೆಲ್​ ಲಾರಿ ನಡುವೆ ಭೀಕರವಾಗಿ ಡಿಕ್ಕಿ ಸಂಭವಿಸಿದೆ. ಪರಿಣಾಮ ಕಾರಿನಲ್ಲಿದ್ದವರು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಲಾರಿ-ಕಾರು ನಡುವೆ ರಭಸದಿಂದ ಡಿಕ್ಕಿಯಾದ ಪರಿಣಾಮ ಕಾರು ಫುಲ್ ಜಖಂ ಆಗಿತ್ತು. ಹೀಗಾಗಿ ಮೃತದೇಹಗಳನ್ನು ಹೊರ ತೆಗೆಯಲು ಹರಸಾಹಸ ಪಡಬೇಕಾಯಿತು.

ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿರುವ ಗಾಯಾಳುಗಳನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಸ್ಥಳಕ್ಕೆ ಪೊಲೀಸರು ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದು ಲಾರಿ ಹಾಗೂ ಅದರ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಕುಣಿಗಲ್ ‌ಪೊಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದೆ.

 

More from the blog

ಕೊಳವೆ ಬಾವಿಗೆ ಬಿದ್ದ 2 ವರ್ಷದ ಕಂದಮ್ಮ : ರಕ್ಷಣೆಗೆ ಅರ್ಧ ಅಡಿಯಷ್ಟೇ ಬಾಕಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ ಮಗು ಸಾತ್ವಿಕ ಸುರಕ್ಷಿತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತಕ್ಕೆ ಬಂದಿದೆ. ಮಗು ಸುರಕ್ಷಿತವಾಗಿದ್ದು, ಕಾರ್ಯಾಚರಣೆ ಆಶಾದಾಯಕವಾಗಿದೆ. 16 ಅಡಿ ಆಳದಲ್ಲಿರುವ ಸಾತ್ವಿಕ್ ರಕ್ಷಣೆಗಾಗಿ 22 ಅಡಿ ಆಳದವರೆಗೆ ಸುರಂಗ...

ಮಿತಿ ಮೀರಿದ ತಾಪಮಾನ : ಖಡಕ್​ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಬಿರು ಬಿಸಿಲು ಹೆಚ್ಚಳವಾಗುತ್ತಿದ್ದು ಮುಂದಿನ 14 ದಿನಗಳ ಕಾಲ ಬಿಸಿಗಾಳಿ ಬೀಸಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ (KSNDMC) ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್​...

ಮನೆಯ ಮಹಡಿಯಿಂದ ಬಿದ್ದು ಬಾಲಕ ಸಾವು

ಬಂಟ್ವಾಳ: ಮನೆಯ ಮಹಡಿಯ ಮೇಲಿಂದ ಕೆಳಗೆ ಬಿದ್ದು ಬಾಲಕನೋರ್ವ ಮೃತಪಟ್ಟ ಘಟನೆ ಎ.‌ ೧ರ ಮುಂಜಾನೆ ನಡೆದಿದೆ. ಬಂಟ್ವಾಳ ಜಕ್ರಿಬೆಟ್ಟು ನಿವಾಸಿ ದಿನೇಶ್ ಪೂಜಾರಿ ಅವರ ಪುತ್ರ ಆದಿಶ್(೧೫) ಮೃತಪಟ್ಟ ಬಾಲಕ. ಆತ ಮನೆಯಲ್ಲಿ ದೊಡ್ಡಮ್ಮನ...

ಮಾಂಸ ಪ್ರಿಯರಿಗೆ ಬೆಲೆ ಏರಿಕೆ ಶಾಕ್.. ಕೋಳಿ ಮಾಂಸದ ದರ ಏರಿಕೆ

ಮಂಗಳೂರು: ಕೋಳಿಮಾಂಸ, ಮೀನಿನ ದರ ಏರುಗತಿ ಯಲ್ಲಿ ಸಾಗುತ್ತಿದ್ದು ಮಾಂಸಾಹಾರ ಪ್ರಿಯರ ಜೇಬಿಗೂ ಕತ್ತರಿ ಬೀಳುವಂತಾಗಿದೆ. ಪ್ರಸ್ತುತ ಕೋಳಿಮಾಂಸಕ್ಕೆ (ವಿದ್‌ ಸ್ಕಿನ್‌) ಕೆ.ಜಿ.ಗೆ ಬ್ರಾಯ್ಲರ್‌ ಕೆಲವು ಕಡೆ 235-240 ರೂ., ಟೈಸನ್‌ 270 ರೂ....