Thursday, April 11, 2024

ಅನನ್ಯ. ಪಿ ಅವರಿಗೆ 2023ನೇ ಸಾಲಿನ ಪಿಜಿ ಸಿಐಟಿ ಪರೀಕ್ಷೆಯಲ್ಲಿ 69ನೇ ರ‍್ಯಾಂಕ್

ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಬಿಎಸ್ಇ ವ್ಯಾಸಂಗ ಮಾಡುತ್ತಿದ್ದು 2023/24ನೇ ಸಾಲಿನ ಪಿಜಿ ಸಿಐಟಿ ಪರೀಕ್ಷೆ ಬರೆದಿದ್ದು 69ನೇ ರ‍್ಯಾಂಕ್ ಪಡೆದಿರುತ್ತಾರೆ.

ಅನನ್ಯ ಅವರು ಎಸ್. ಎಸ್. ಎಲ್. ಸಿ ಹಾಗೂ ಪಿ. ಯು.ಸಿ ವಿದ್ಯಾಭ್ಯಾಸ ರಾಮಕುಂಜೇಶ್ವರ ವಿದ್ಯಾಸಂಸ್ಥೆಯಲ್ಲಿ ಮಾಡಿರುತ್ತಾರೆ ಅಲ್ಲಿಯೂ 94ನೇ ರ‍್ಯಾಂಕ್ ಪಡೆದಿರುತ್ತಾರೆ. ಓದಿನಲ್ಲಿ ರ‍್ಯಾಂಕ್ ಪಡೆದು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿರುತ್ತಾರೆ.

ಅದೇರೀತಿ ಪಠ್ಯೇತರ ಚಟುವಟಿಕೆ ಯಕ್ಷಗಾನ, ಭಾರತನಾಟ್ಯ, ಸಂಗೀತಗಳಲ್ಲಿ ಪ್ರತಿಭನ್ವಿತಾರಾಗಿದ್ದು ಇದೀಗ ಪಿಜಿ ಸಿಐಟಿ.ಪರೀಕ್ಷೆ ಯಲ್ಲಿ 69 ನೇ ರ‍್ಯಾಂಕ್ ಪಡೆದು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿರುತ್ತಾರೆ.

ಅನನ್ಯ ಅವರ ಮುಂದಿನ ವಿದ್ಯಾಭ್ಯಾಸ ಕ್ಕೆ ತಂದೆ ಉದಯಕುಮಾರ್. ಪಿ, ತಾಯಿ ಚಂದ್ರಪ್ರಭ,ತಮ್ಮ ಆದಿತ್ಯ. ಪಿ. ಶುಭಕೋರಿದ್ದಾರೆ.

More from the blog

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…. ರಿಸಲ್ಟ್​ ಚೆಕ್ ಮಾಡೋದು ಹೇಗೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ನಾಳೆ...

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...