Sunday, April 7, 2024

ಇಂದು ಬೆಂಗಳೂರಲ್ಲಿ 2ನೇ ದಿನದ ಕಂಬಳ : ಇವತ್ತು ಏನೆಲ್ಲಾ ನಡೆಯುತ್ತೆ..? ನಟ ದರ್ಶನ ಭಾಗಿ ಸಾಧ್ಯತೆ

ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ತುಳುನಾಡಿವ ವೈಭವ ತೆರೆದುಕೊಂಡಿದೆ. ಇತಿಹಾಸದಲ್ಲಿ ಪ್ರಥಮ ಬಾರಿಗೆ ಬೆಂಗಳೂರಲ್ಲಿ ನಡೆಯುತ್ತಿರುವ ಕಂಬಳದ ಮೊದಲ ದಿನದ ಝಲಕ್ ಅದ್ಭುತವಾಗಿತ್ತು. ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಜನ ತುಳುನಾಡಿನ ಕೋಣದ ಓಟದ ಸ್ಪರ್ಧೆಯನ್ನು ನೋಡಿ ಫುಲ್ ಫಿದಾ ಆಗಿದ್ದರು. ನಿನ್ನೆ ಆರಂಭವಾದ ನಮ್ಮ ಕಂಬಳ, ಬೆಂಗಳೂರು ಕಂಬಳದ ಸಂಭ್ರಮ ಇವತ್ತು ಕೂಡ ನಡೆಯಲಿದೆ.

ಇಂದು ಬೆಳಗ್ಗೆ ಸಭಾ ಕಾರ್ಯಕ್ರಮ ಆರಂಭವಾಗಲಿದ್ದು ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡ ಸೇರಿದಂತೆ ಹಿರಿಯ ರಾಜಕಾರಣಿಗಳು, ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಮಧ್ಯಾಹ್ನ 1 ಗಂಟೆ ಸುಮಾರಿಗೆ ಮತ್ತೆ ಸಭಾ ಕಾರ್ಯಕ್ರಮ ನಡೆಯಲಿದೆ ಈ ವೇಳೆ ನವದೆಹಲಿಯ NCCF ಅಧ್ಯಕ್ಷ ವಿಶಾಲ್ ಸಿಂಗ್ ಸೇರಿ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಇದರ ಜೊತೆಗೆ ಸ್ಯಾಂಡಲ್​ವುಡ್​ನ ಚಾಲೆಂಜಿಂಗ್ ಸ್ಟಾರ್​ ದರ್ಶನ ಕೂಡ ಮಧ್ಯಾಹ್ನ ಕಂಬಳ ಸಮಾರಂಭದಲ್ಲಿ ಭಾಗಿಯಾಗಿಲಿದ್ದಾರೆ.

ಸಾಧಕ ಕುಸ್ತಿಪಟುಗಳಿಗೆ ಕಂಬಳ ಸಮಿತಿ ವತಿಯಿಂದ ಸಂಜೆ 4 ಗಂಟೆಗೆ ಬಹುಮಾನ ವಿತರಣೆ ಮತ್ತು ಸಮಾರೋಪ ಸಮಾರಂಭ ನಡೆಯಲಿದೆ. ಅತ್ತ ವೇದಿಕೆ 2ರಲ್ಲಿ ನಿರಂತರವಾಗಿ ಸಾಂಸ್ಕ್ರತಿಕ ಕಾರ್ಯಕ್ರಮಗಳು ನಡೆಯುತ್ತಿರುತ್ತಾವೆ. ಕರಂಗೋಲು ನೃತ್ಯ, ಗಂಡುಕಲೆ ಯಕ್ಷಗಾನ, ಆಟಿ ಕಳಂಜ, ಆಕ್ಸಿಜನ್ ಡ್ಯಾನ್ಸ್ ಟೀಮ್, ಮಂಗಳೂರು ಕಾಮಿಡಿ ಕಲಾವಿದರಿಂದ ಶೋ, ಮಿಮಿಕ್ರಿ ಸೇರಿ ಮುಂತಾದ ಕಾರ್ಯಕ್ರಮಗಳು ಈ ವೇಳೆ ನಡೆಯಲಿವೆ.

ಅಲ್ಲದೇ ಸಂಜೆ 7 ಗಂಟೆಯಿಂದ ಸೆಲೆಬ್ರಿಟಿಗಳ ಸಂಗೀತ ಸಂಜೆ ಇರಲಿದೆ. ಇದರಲ್ಲಿ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ ಅವರು ಸಂಗೀತ ರಸ ಸಂಜೆ ನಡೆಸಿಕೊಡಲಿದ್ದಾರೆ. ನಾಗರಾಜ್ ಅವರು ಮ್ಯೂಸಿಕಲ್ ಪ್ರೋಗ್ರಾಂ ಇರಲಿದೆ. ನಂತರ ಖ್ಯಾತ ಗಾಯಕಿ ಶಮಿತಾ ಮಲ್ನಾಡ್ ಅವರಿಂದ ಸಂಗೀತ ಕಾರ್ಯಕ್ರಮ ಇರಲಿದೆ.

More from the blog

ರಾಜ್ಯದಲ್ಲಿ 60 ಮಂದಿಯ ನಾಮಪತ್ರ ತಿರಸ್ಕೃತ

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳು 492 ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 13 ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯ ಮುಗಿದಿದೆ. 276 ನಾಮಪತ್ರಗಳು ಕ್ರಮಬದ್ಧವಾಗಿದ್ದು, 60 ನಾಮಪತ್ರಗಳು...

ಕೊಳವೆ ಬಾವಿಗೆ ಬಿದ್ದ 2 ವರ್ಷದ ಕಂದಮ್ಮ : ರಕ್ಷಣೆಗೆ ಅರ್ಧ ಅಡಿಯಷ್ಟೇ ಬಾಕಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ ಮಗು ಸಾತ್ವಿಕ ಸುರಕ್ಷಿತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತಕ್ಕೆ ಬಂದಿದೆ. ಮಗು ಸುರಕ್ಷಿತವಾಗಿದ್ದು, ಕಾರ್ಯಾಚರಣೆ ಆಶಾದಾಯಕವಾಗಿದೆ. 16 ಅಡಿ ಆಳದಲ್ಲಿರುವ ಸಾತ್ವಿಕ್ ರಕ್ಷಣೆಗಾಗಿ 22 ಅಡಿ ಆಳದವರೆಗೆ ಸುರಂಗ...

ಮಿತಿ ಮೀರಿದ ತಾಪಮಾನ : ಖಡಕ್​ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಬಿರು ಬಿಸಿಲು ಹೆಚ್ಚಳವಾಗುತ್ತಿದ್ದು ಮುಂದಿನ 14 ದಿನಗಳ ಕಾಲ ಬಿಸಿಗಾಳಿ ಬೀಸಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ (KSNDMC) ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್​...

ಜಿಲ್ಲಾ ಕಾಂಗ್ರೇಸ್ ಹಿಂದುಳಿದ ವರ್ಗದ ಉಪಾಧ್ಯಕ್ಷ ಪದ್ಮನಾಭ ಸೇವಂತ ಅವರದು, ಆತ್ಮಹತ್ಯೆಯಲ್ಲ, ವ್ಯವಸ್ಥಿತ ಕೊಲೆ ಶಂಕೆ: ಪ್ರಕಾಶ್ ಶೆಟ್ಟಿ ತನಿಖೆಗೆ ಒತ್ತಾಯ

ಬಂಟ್ವಾಳ: ದ.ಕ.ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಪದ್ಮನಾಭ‌ ಸೇವಂತ ಎಂಬವರ ಸಾವಿನ ಸುತ್ತ ಅನುಮಾನಗಳು ವ್ಯಕ್ಯವಾಗಿದ್ದು, ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ ಪ್ರಕರಣ ಎಂದು ಕಂಡು ಬಂದರೂ ಇದನ್ನು ವಿಮರ್ಶೆ ಮಾಡಿದರೆ ಇದೊಂದು ಕೊಲೆ...