Friday, April 5, 2024

ಕೆ.ಎನ್.ಆರ್.ಸಿ.ಕಂಪೆನಿಯ ಘನಗಾತ್ರದ ಲಾರಿ ಕಾರಿಗೆ ಡಿಕ್ಕಿ: ಜಖಂಗೊಂಡ ಕಾರು,ಕಾರು ಚಾಲಕ ಅಪಾಯದಿಂದ ಪಾರು. ಅಪಘಾತ ಸಂಭವಿಸಿದ ಸ್ಥಳದಲ್ಲಿ ಸಾರ್ವಜನಿಕರ ಪ್ರತಿಭಟನೆ: ಕಂಪೆನಿ ವಿರುದ್ದ ಆಕ್ರೋಶ, ಲಾರಿಗಳನ್ನು ತಡೆದು ಪ್ರತಿಭಟನೆ… ಜಮಾಯಿಸಿದ್ದ ಜನರ ಚದುರಿಸಿ,ಪರಿಸ್ಥಿತಿಯನ್ನು ತಿಳಿಯಾಗಿಸಿದ ಟ್ರಾಫಿಕ್ ಪೋಲೀಸರು

ಬಂಟ್ವಾಳ: ಜಲ್ಲಿ ಸಾಗಿಸುವ ಬೃಹತ್ ಗಾತ್ರದ ಲಾರಿಯೊಂದು ಕಾರಿಗೆ ಡಿಕ್ಕಿಯಾಗಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅದೃಷ್ಟವಶಾತ್ ಕಾರು ಚಾಲಕ ಅಪಾಯದಿಂದ ಪಾರಾದ ಘಟನೆ ಇಂದು ಬೆಳಿಗ್ಗೆ ಬಂಟ್ವಾಳ ಸಮೀಪದ ಲೊರೆಟ್ಟೋ ಎಂಬಲ್ಲಿ ನಡೆದಿದೆ.

ಮೈಸೂರು ಮೂಲದ ಕೃಷ್ಣ ಅರಸ ಎಂಬವರ ಕಾರಿಗೆ ಕೆ.ಎನ್.ಆರ್.ಸಿ.ಕಂಪೆನಿಯ ಲಾರಿ ಡಿಕ್ಕಿಯಾಗಿದೆ.

ಕೃಷ್ಣ ಅರಸ ಅವರು ಮೈಸೂರಿನಿಂದ ಬಂಟ್ವಾಳ ಕಡೆಯಿಂದ ಮೂಡಬಿದಿರೆ ಅಳ್ವಾಸ್ ಕಾಲೇಜಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಕೃಷ್ಣ ಅರಸ ಅವರ ಮಗಳು ಮೂಡಬಿದಿರೆಯ ಅಳ್ವಾಸ್ ಕಾಲೇಜಿನಲ್ಲಿ ಶಿಕ್ಷಣ ಪಡೆಯುತ್ತಿದ್ದ ದೀಪಾವಳಿ ರಜೆ ನಿಮಿತ್ತ ಊರಿಗೆ ಕರೆದುಕೊಂಡು ಹೋಗುವ ಉದ್ದೇಶದಿಂದ ಮೂಡಬಿದಿರೆಯ ಕಡೆಗೆ ತೆರಳುವ ವೇಳೆ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬರುತ್ತಿದ್ದ ಕೆ.ಎನ್.ಆರ್.ಸಿ.ಕಂಪೆನಿಯ ಲಾರಿ ಎದುರಿನಿಂದ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.ಆದರೆ ಅದೃಷ್ಟವಶಾತ್ ಕಾರು ಚಾಲಕ ಕೃಷ್ಣ ಅವರಿಗೆ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.

ಸ್ಥಳದಲ್ಲಿ ಹಠಾತ್ ಪ್ರತಿಭಟನೆ

ಬಿಸಿರೋಡನಿಂದ ಅಡ್ಡಹೊಳೆವರೆಗೆ ರಾಷ್ಟ್ರೀಯ ಹೆದ್ದಾರಿ ಚತುಷ್ಪತ ಕಾಮಗಾರಿ ಗುತ್ತಿಗೆ ವಹಿಸಿಕೊಂಡ ಕೆ.ಎನ್.ಆರ್.ಸಿ.ಕಂಪೆನಿಯವರು ಕಾಮಗಾರಿ ನಡೆಸಲು ಜಲ್ಲಿಯನ್ನು ಕುಪ್ಪೆಪದವು ಎಂಬಲ್ಲಿರುವ ಜಲ್ಲಿ ಪ್ಲ್ಯಾಂಟ್ ನಿಂದ ಬೃಹತ್ ಗಾತ್ರದ ಲಾರಿಗಳ ಮೂಲಕ ತರುತ್ತಾರೆ.

ಆದರೆ ಕಂಪೆನಿಯ ಲಾರಿಯ ಚಾಲಕರು ಎ.ಸಿ.ಹಾಕಿಕೊಂಡು ಕಿವಿಗೊಂದು ಇಯರ್ ಪೋನ್ ಸಿಕ್ಕಿಸಿ ಹಾಡು ಕೇಳಿಕೊಂಡು ಅಥವಾ ಮೊಬೈಲ್ ನಲ್ಲಿ ಹರಟೆ ಹೊಡೆಯುತ್ತಾ ರಸ್ತೆಯಲ್ಲಿ ಬರುವ ಇತರ ವಾಹನಗಳ ಬಗ್ಗೆ ಗಮನವಿಲ್ಲದೆ ಅತೀ ವೇಗ ಮತ್ತು ಅಜಾಗರೂಕತೆಯಿಂದ ಬರುತ್ತಾರೆ ಎಂಬುದು ಸ್ಥಳೀಯರ ವಾದ. ಹಾಗಾಗಿ ಕಳೆದ ಎರಡು ವರ್ಷಗಳಿಂದ ಕಂಪೆನಿಯ ಲಾರಿಗಳು ಡಿಕ್ಕಿಯಾಗಿ ಅನೇಕರಿಗೆ ಗಾಯವಾಗಿದೆ ಎಂದು ಅರೋಪ ಮಾಡಿದ್ದಾರೆ.

‌‌ ಕಂಪೆನಿಯ ಘನಗಾತ್ರದ ವಾಹನಗಳ ಸಂಚಾರದಿಂದ ಪ್ರಾಣಹಾನಿಯ ಜೊತೆಗೆ ಉತ್ತಮವಾಗಿದ್ದ ಡಾಮರು ರಸ್ತೆಯಲ್ಲಿ ಅಲ್ಲಲ್ಲಿ ಹೊಂಡಗಳು ಬಿದ್ದಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇಂದು ಅಪಘಾತ ನಡೆದ ಜಾಗದಲ್ಲಿ ಶಾಲೆಯಿದ್ದು, ಮಕ್ಕಳು ಶಾಲೆಗೆ ಬರುವ ಸಮಯದಲ್ಲಿ ಅತೀ ವೇಗ ಮತ್ತು ಅಜಾಗರೂಕತೆಯ ಚಾಲನೆ ಮಾಡಿದರೆ ಅನಾಹುತಗಳು ನಡೆಯಬಹುದು, ಎಂದು ಇಲ್ಲಿ ಸೇರಿದ ಜನರು ಅರೋಪ ಮಾಡಿದ್ದಾರೆ.

ಕಂಪೆನಿ ವಿರುದ್ದ ಪ್ರಕರಣ ದಾಖಲಿಸಿ ಮತ್ತು ಕಂಪೆನಿ ಲಾರಿಗಳಿಗೆ ಸ್ಪೀಡ್ ಕಂಟ್ರೋಲ್ ಕಿಟ್ ಹಾಕಿ ಎಂದು ಸಾರ್ವಜನಿಕ ರು ಒತ್ತಾಯ ಮಾಡಿದ್ದಾರೆ.

ಕೆಲ ಹೊತ್ತು ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿತ್ತು. ಕಂಪೆನಿ ಮತ್ತು ಲಾರಿ ಚಾಲಕರ ವಿರುದ್ದ ಸಾರ್ವಜನಿಕರು ರೊಚ್ಚಿಗೆದ್ದ ಘಟನೆ ನಡೆಯಿತು. ಅಮಾರ್ಗದಲ್ಲಿ ಬರುವ ಕಂಪೆನಿಯ ಎಲ್ಲಾ ಲಾರಿಗಳನನ್ನು ನಿಲ್ಲಿಸಿ ಆಕ್ರೋಶ ವ್ಯಕ್ತಪಡಿಸಿದರು.

ಘಟನೆಯಿಂದ ಸ್ಥಳದಲ್ಲಿ ಜಮಾಯಿಸಿದ್ದ ಜನರನ್ನು ಪೋಲಿಸರು ಚದುರಿಸಿದರು.

ಸ್ಥಳಕ್ಕೆ ಟ್ರಾಫಿಕ್ ಎಸ್.ಐ ಸುತೇಶ್, ಮತ್ತು ಸಂಜೀವ ಹಾಗೂ ಎಎಸ್.ಐ ಸುರೇಶ್ ಪಡಾರ್, ಸಿಬ್ಬಂದಿಗಳಾದ ರಾಜು, ವಿವೇಕ್, ಸಂತೋಷ ಬೇಟಿ ನೀಡಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.

More from the blog

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...