Tuesday, April 9, 2024

ಪ್ರೌಢಶಾಲಾ ಸಹಶಿಕ್ಷಕರ ಜಿಲ್ಲಾ ಶೈಕ್ಷಣಿಕ ಸಮ್ಮೇಳನ, ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಕಾರ್ಯಕ್ರಮ

ಬಂಟ್ವಾಳ: ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘ (ರಿ.) ಬೆಂಗಳೂರು, ದ.ಕ ಜಿಲ್ಲಾ ಘಟಕ ಮತ್ತು ಬಂಟ್ವಾಳ ತಾಲ್ಲೂಕು ಘಟಕ ಇದರ ಸಹಯೋಗದೊಂದಿಗೆ ಪ್ರೌಢಶಾಲಾ ಸಹಶಿಕ್ಷಕರ ಜಿಲ್ಲಾ ಶೈಕ್ಷಣಿಕ ಸಮ್ಮೇಳನ, ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಕಾರ್ಯಕ್ರಮ ನ.28 ರಂದು ಬಂಟ್ವಾಳ ಸ್ಪರ್ಶಾ ಕಲಾಮಂದಿರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಕಡ್ಡಾಯ ಶಿಕ್ಷಣ ನೀತಿಯಲ್ಲಿ ಪ್ರತಿಯೊಬ್ಬರನ್ನೂ ಅಕ್ಷರಜ್ಞಾನಿಯನ್ನಾಗಿ ಮಾಡುವ ಹೊಣೆಗಾರಿಕೆ ಸಮಾಜಕ್ಕಿದೆ. ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಜನಪ್ರತಿನಿಧಿಗಳಿಗೆ ಸದನದಲ್ಲಿ ಕ್ಷೇತ್ರದ

ನ್ಯೂನತೆಗಳನ್ನು ಸರಿಪಡಿಸುವ ಅವಕಾಶ ಇದೆ.ನನ್ನ ಸರಕಾರ ಅಧಿಕಾರಕ್ಕೆ ಬಂದಿದೆ. ವೀರಪ್ಪ ಮೊಯ್ಲಿ ಅವರು ಶಿಕ್ಷಣ ಸಚಿವರಾಗಿದ್ದ ಸಂದರ್ಭ ನಾನು ಶಿಕ್ಷಕರ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸಿದ್ದೇನೆ. ಸರ್ವ ಶಿಕ್ಷಾ ಅಭಿಯಾನದ ಮೂಲಕ ಕೊಠಡಿಗಳ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳಾಗಿವೆ. ದಕ್ಷಿಣ ಕನ್ನಡ ಜಿಲ್ಲೆಗೆ ಉತ್ತಮ ಕೊಡುಗೆಗಳು ಲಭಿಸಿವೆ ಎಂದರು.

ಶಿಕ್ಷಣ ಇಲಾಖೆಯ ಕೆಲವು ನ್ಯೂನತೆಗಳನ್ನು ಸರಿಪಡಿಸಿಕೊಂಡು ಸಮಸ್ಯೆಗಳನ್ನು ಪರಿಹಾರ ಮಾಡಲು ಅವಕಾಶಗಳಿವೆ.

ಮೂಲಭೂತವಾಗಿ ಬೇಕಾಗಿರುವ ಅವಶ್ಯಕತೆಗಳನ್ನು ಪೂರೈಕೆ ಮಾಡುವ ನಿಟ್ಟಿನಲ್ಲಿ ಈ ಸಮ್ಮೇಳನ ಅತ್ಯಂತ ಮಹತ್ವ ಪೂರ್ಣ ಕಾರ್ಯಕ್ರಮ.

ಸಮ್ಮೇಳನದಲ್ಲಿ ನಡೆದ ಚರ್ಚೆಗಳು ಸರಕಾರದ ಗಮನಕ್ಕೆ ತಂದರೆ, ಸಜೀವ ಸರಕಾರ ಸಮಸ್ಯೆಗಳನ್ನು ಪರಿಹರಿಸಲು ಮುಂದಾಗುತ್ತದೆ ಎಂದು ಭರವಸೆ ನೀಡಿದರು.

ಪ್ರೌಡ ಶಾಲಾ ಶಿಕ್ಷಕರ ಸಮಸ್ಯೆಗಳು ಬಹಳಷ್ಟು ಇದೆ.  ಸರ್ವ ಶಿಕ್ಷಣ ಅಭಿಯಾನದ ನಂತರ ಶಾಲಾ ಕೊಠಡಿಗಳ ಪರಿಹಾರ ಮಾಡುವಲ್ಲಿ ಸಹಾಯವಾಗಿದೆ ಎಂದು ಅವರು ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಬಿ.ಎಲ್.ಬೋಜೆಗೌಡ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಶಿಕ್ಷಣ ಕ್ಷೇತ್ರದಲ್ಲಿ ವಿವಿಧ ಸಾಧನೆ ಮಾಡಿದ ಶಿಕ್ಷಕರನ್ನು ಗುರುತಿಸಿ ಗೌರವಿಸಲಾಯಿತು.

ರಾಜ್ಯಾಧ್ಯಕ್ಷ ಸಿದ್ದಬಸಪ್ಪ ಸಹಿತ ಅನೇಕ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ಬಳಿಕ ಶೈಕ್ಷಣಿಕ ಗೋಷ್ಠಿಗಳು ,ಸಂವಾದ ಕಾರ್ಯಕ್ರಮಗಳು ನಡೆಯಿತು.  ಒಂದುವರೆ ತಾಸುಗಳ ಬಳಿಕ ಕಾರ್ಯಕ್ರಮದ ಉದ್ಘಾಟನೆ ನಡೆಯಿತು. ಶಿಕ್ಷಕರ ಕಾರ್ಯಕ್ರಮವಾದ್ಧರಿಂದ ಸಮಯಕ್ಕೆ ಸರಿಯಾಗಿ ಆರಂಭವಾಗಬೇಕಿತ್ತು. 10 ಗಂಟೆಗೆ ಕಾರ್ಯಕ್ರಮದ ಉದ್ಘಾಟನೆ ನೆರವೇರಬೇಕಿತ್ತು.

ಆದರೆ ಸುಮಾರು ಒಂದುವರೆ ಗಂಟೆಗಳ ಕಾಲ ತಡವಾಗಿ 11.30 ಕಾರ್ಯಕ್ರಮದ ಉದ್ಘಾಟನೆ ನಡೆಯಿತು.

More from the blog

ಭಕ್ತರೇ ಗಮನಿಸಿ…. ಈ ದಿನ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಆಗೇಲು ಸೇವೆ ಇರುವುದಿಲ್ಲ

ಬಂಟ್ವಾಳ ತಾಲೂಕು ಸಜೀಪಮೂಡ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಏ.12, 14, 16 ರಂದು ಆಗೇಲು ಸೇವೆ ಇರುವುದಿಲ್ಲ. ಏ. 19ರಿಂದ ಆಗೇಲು ಸೇವೆ ನಡೆಯುತ್ತದೆ ಹಾಗೂ ಏ.21 ರಂದು ಆಗೇಲು ಸೇವೆ...

ಲೋಕಸಭಾ ಚುನಾವಣೆ : ಅಕ್ರಮ ವ್ಯವಹಾರಿಗಳಿಗೆ ರಹದಾರಿಯಾದ ಸಾಲೆತ್ತೂರು ಬಳಿಯ ಕೂಡುರಸ್ತೆ ಚೆಕ್ ಪೋಸ್ಟ್

ವಿಟ್ಲ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಆದರೆ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...