Monday, April 15, 2024

ಬಂಟ್ವಾಳ ತಾಲೂಕು ಮಕ್ಕಳ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ

ಮಕ್ಕಳ ಕಲಾ ಲೋಕ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಘಟಕವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಡೇಶಿವಾಲಯದ ಸಹಯೋಗದಲ್ಲಿ ದಿನಾಂಕ 06-12-2023 ರಂದು ಕಡೇಶಿವಾಲಯದಲ್ಲಿ ಜರಗುವ 17ನೇ ವರ್ಷದ ಬಂಟ್ವಾಳ ತಾಲೂಕು ಮಕ್ಕಳ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಸ್ವಾಗತ ಸಮಿತಿಯ ಗೌರವಾಧ್ಯಕ್ಷರಾದ ಕೆ.ಕೆ.ಶೆಟ್ಟಿ ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಶಾಲಾ ಎಸ್. ಡಿ. ಎಂ.ಸಿ. ಅಧ್ಯಕ್ಷರಾದ ಹರಿಶ್ಚಂದ್ರ ಎಂ. , ಮಕ್ಕಳ ಕಲಾ ಲೋಕದ ಅಧ್ಯಕ್ಷರಾದ ರಮೇಶ ಎಂ. ಬಾಯಾರು ಕಾರ್ಯದರ್ಶಿ ಪುಷ್ಪ ಎಚ್. , ವಿದ್ಯಾ ವರ್ಧಕ ಸಂಘದ ಅಧ್ಯಕ್ಷರಾದ ಮಾಧವ ರೈ, ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ. ಬಾಬು ಪೂಜಾರಿ, ಉಪಾಧ್ಯಕ್ಷ ಗಿರಿಯಪ್ಪ ಗೌಡ, ಸ್ವಾಗತ ಸಮಿತಿಯ ಸದಸ್ಯರು, ಪಂಚಾಯತ್ ಸದಸ್ಯರು, ಎಸ್. ಡಿ.ಎಂ.ಸಿ.ಸದಸ್ಯರು, ಶಾಲಾ ಶಿಕ್ಷಕರು, ನಿವೃತ್ತ ಶಿಕ್ಷಕಿ ಸರಸ್ವತಿ ಮತ್ತು ಊರ ಗಣ್ಯರಾದ ಗಣೇಶ ಆರ್ ಶೆಟ್ಟಿ, ವಿದ್ಯಾಧರ ರೈ, ಜಯರಾಮ ರೈ ಪಾಚಿಕೊಡಿ ಮುಂತಾದವರು ಉಪಸ್ಥಿತರಿದ್ದರು.

More from the blog

ಲೋಕಸಭಾ ಚುನಾವಣೆ : ಮತಯಂತ್ರಗಳ ಕಮಿಷನಿಂಗ್‌ ಕಾರ್ಯ…. ಸ್ಥಳಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ಭೇಟಿ

ಬಂಟ್ವಾಳ :ಮೊಡಂಕಾಪಿನಲ್ಲಿರುವ ಇನ್ಫೆಂಟ್‌ ಜೀಸಸ್‌ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಈ ದಿನ ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 205 ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಬಳಸಲಾಗುವ ಮತಯಂತ್ರಗಳ ಕಮಿಷನಿಂಗ್‌ ಕಾರ್ಯವು ನಡೆಯಿತು. ಈ ಸಂದರ್ಭದಲ್ಲಿ...

ಯುವಮೋರ್ಚಾ ಬಂಟ್ವಾಳ ವತಿಯಿಂದ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಬಿ. ಸಿ ರೋಡಿನ ರಕ್ತೇಶ್ವರಿ ದೇವಸ್ಥಾನದಲ್ಲಿ ಪ್ರಾರ್ಥನೆ

ಯುವಮೋರ್ಚಾ ಬಂಟ್ವಾಳ ವತಿಯಿಂದ ನರೇಂದ್ರ ಮೋದಿ ಮತೊಮ್ಮೆ ಪ್ರಧಾನಿಯಾಗಲೆಂದು ರಕ್ತೇಶ್ವರಿ ದೇವಸ್ಥಾನ ಬಿ. ಸಿ ರೋಡಿನಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.

ಆಯತಪ್ಪಿ ಬಾವಿಗೆ‌ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ

ಮಂಗಳೂರು: ಬಾವಿಯಿಂದ ನೀರು ಸೇದುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದ ಮಹಿಳೆಯೋರ್ವರನ್ನು ಗುರುವಾರ ಕದ್ರಿ ಅಗ್ನಿಶಾಮಕ ಠಾಣೆಯವರು ರಕ್ಷಿಸಿದ್ದಾರೆ ಬಿಕ್ಕರ್ನಕಟ್ಟೆ ಸಮೀಪದ ನಿವಾಸಿ ಟ್ರೆಸ್ಸಿ ಡಿಸೋಜಾ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ರಕ್ಷಿಸಲ್ಪಟ್ಟ ಮಹಿಳೆ. ಸಂಜೆ 5 ಗಂಟೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರೆ..ಮಹಾರಥೋತ್ಸವ ಕಣ್ಣುಂಬಿಕೊಂಡ ಸಾವಿರಾರು ಭಕ್ತರು

ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆಯಲ್ಲಿ ಎ. ೧೧ರಂದು ಸಂಜೆ ರಥೋತ್ಸವ ನಡೆಯಿತು. ಜಾತ್ರೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ಮಹಾಪೂಜೆಯ ಬಳಿಕ ದೇವರು ರಥಾರೋಹಣಗೊಂಡು ಸಾಂಕೇತಿಕವಾಗಿ ರಥವನ್ನು ಎಳೆಯಲಾಯಿತು. ಮಧ್ಯಾಹ್ನ ರಥಕ್ಕೆ...