Tuesday, April 9, 2024

ಜೆಡಿಎಸ್ ಪಕ್ಷದಿಂದ ಸಿ.ಎಂ ಇಬ್ರಾಹಿಂ ಅಮಾನತು ; ಹೆಚ್.ಡಿ‌.ದೇವೇಗೌಡರಿಂದ ಮಹತ್ವದ ಆದೇಶ

ಬೆಂಗಳೂರು: ಜೆಡಿಎಸ್​​ ಪಕ್ಷದಿಂದ ಸಿಎಂ ಇಬ್ರಾಹಿಂ ಅವರನ್ನು ಅಮಾನತುಗೊಳಿಸಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್​​ಡಿ ದೇವೇಗೌಡ ಅವರು ಆದೇಶ ಹೊರಡಿಸಿದ್ದಾರೆ.

07-11-2023ರಂದು ಜೆಡಿಎಸ್ ಜಿಲ್ಲಾಧ್ಯಕ್ಷರು ಮತ್ತು ಪಕ್ಷದ ರಾಜ್ಯ ಮಟ್ಟದ ವಿಭಾಗ ಮುಖ್ಯಸ್ಥರನ್ನು ಉದ್ದೇಶಿಸಿ ಇಬ್ರಾಹಿಂ ಅವರು ಬರೆದಿರುವ ಪತ್ರದಲ್ಲಿ ದಿನಾಂಕ: 19-10-2023ರಂದು ರಾಜ್ಯ ಕಾರ್ಯಕಾರಿ ಸಮಿತಿಯ ರಾಜ್ಯಾಧ್ಯಕ್ಷರನ್ನು ಒಳಗೊಂಡಂತೆ ಪದಾಧಿಕಾರಿಗಳನ್ನು ವಿಸರ್ಜನೆ ಮಾಡಿರುವುದು ಕಾನೂನು ಬಾಹಿರ ಮತ್ತು ಏಕಪಕ್ಷೀಯ ನಿರ್ಧಾರವೆಂದು ತಿಳಿಸಿ, ತಾನು ಇನ್ನೂ ರಾಜ್ಯಾಧ್ಯಕ್ಷನಾಗಿ ಮುಂದುವರೆದು, ಕಾರ್ಯನಿರ್ವಹಿಸುತ್ತಿರುವುದಾಗಿ, ಹಾಗಾಗಿ ಪಕ್ಷದ ಜಿಲ್ಲಾಧ್ಯಕ್ಷರು ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು ತಮ್ಮ ಹುದ್ದೆಗಳಲ್ಲಿ ಮುಂದುವರೆದಿದ್ದಾರೆಂದು ತಿಳಿಸುತ್ತಾ, ಬಿಜೆಪಿ ಪಕ್ಷದೊಂದಿಗೆ ಹೊಂದಾಣಿಕೆ ಬಗ್ಗೆ ಒಲವು ಹೊಂದಿರುವವರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕೆಂದು ಸೂಚಿಸಿರುತ್ತಾರೆ. ಅಲ್ಲದೇ, 15-11-2023ರಂದು, ಕೇರಳ ರಾಜ್ಯದ ತಿರುವನಂತಪುರಂದಲ್ಲಿ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರಾದ ಸಿ.ಕೆ. ಅವರು ಪಕ್ಷದ ಹೆಸರಿನಲ್ಲಿ ಅನಧಿಕೃತವಾಗಿ ಕರೆದಿದ್ದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಿ, ರಾಜ್ಯದಲ್ಲಿನ ಜೆಡಿಎಸ್‌-ಬಿಜೆಪಿ ಹೊಂದಾಣಿಕೆ ಬಗ್ಗೆ ವಿರೋಧಬಾಸ ಹೇಳಿಕೆ ನೀಡಿ, ಪಕ್ಷದ ಶಿಸ್ತನ್ನು ಉಲ್ಲಂಘಿಸಿದ್ದಾರೆ. ಈ ಮೇಲಿನ ಎಲ್ಲಾ ಬೆಳವಣಿಗೆಗಳನ್ನು ಗಮನಿಸಿದಾಗ ಪಕ್ಷದ ಹಿಂದಿನ ರಾಜ್ಯಾಧ್ಯಕ್ಷರಾದ ಸಿಎಂ ಇಬ್ರಾಹಿಂ ಅವರು ಸಾರ್ವಜನಿಕವಾಗಿ ಪಕ್ಷದ ರಾಷ್ಟ್ರಧ್ಯಕ್ಷರ, ರಾಜ್ಯ ಶಾಸಕಾಂಗ ಪಕ್ಷದ ನಾಯಕರ ವಿರುದ್ಧ ಹಾಗೂ ರಾಜ್ಯದಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದೊಂದಿಗೆ ಹೊಂದಾಣಿಕೆ ಬಗ್ಗೆ (ಒಮ್ಮತವಾದ ನಿರ್ಣಯವಾಗಿದ್ದರೂ ಸಹ) ಬಹಿರಂಗವಾಗಿ ಪಕ್ಷ ವಿರೋಧಿ ಹೇಳಿಕೆ ನೀಡಿ, ಪಕ್ಷದ ಹಿತಕ್ಕೆ ಧಕ್ಕೆ ತಂದಿರುತ್ತಾರೆ. ಇಂತಹ ನಡವಳಿಕೆ ಮತ್ತು, ಹೇಳಿಕೆಗಳು ಪಕ್ಷದ ವಿರೋಧಿ ಚಟುವಟಿಕೆಗಳಾಗಿರುತ್ತವೆ’ ಎಂದು ಆದೇಶದಲ್ಲಿ ದೇವೇಗೌಡರು ಉಲ್ಲೇಖಿಸಿದ್ದಾರೆ.

ಈ ಎಲ್ಲ ಕಾರಣಗಳಿಗಾಗಿ ಜೆಡಿಎಸ್ ಸಂವಿಧಾನ ಮತ್ತು ನಿಯಮಾವಳಿಗಳ ಅಡಿಯಲ್ಲಿ ಸಿಎಂ ಇಬ್ರಾಹಿಂ ಅವರನ್ನು ತಕ್ಷಣದಿಂದಲೇ ಅಮಾನತುಗೊಳಿಸಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

More from the blog

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...

ದ್ವಿತೀಯ ಪಿಯುಸಿ ಫಲಿತಾಂಶ ಶೀಘ್ರ ಪ್ರಕಟ

ಬೆಂಗಳೂರು: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಏಪ್ರಿಲ್ 3 ನೇ ವಾರದಲ್ಲಿ ಪ್ರಕಟಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಫಲಿತಾಂಶ ಪ್ರಕಟಗೊಂಡ ನಂತರ, ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು...