Monday, April 15, 2024

ಕ್ರೀಡಾ ಕೂಟದಲ್ಲಿ ಸಿಗದ ಬಹುಮಾನ : ಕೀಟನಾಶಕ ಸೇವಿಸಿ ಪ್ರತಿಭಾವಂತ ಕ್ರೀಡಾಪಟು ಆತ್ಮಹತ್ಯೆ

ಪುತ್ತೂರು: ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಬಹುಮಾನ ಸಿಗದ ಕಾರಣ ನೊಂದು ಖಿನ್ನತೆಗೊಳಗಾದ ವಿದ್ಯಾರ್ಥಿನಿ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನ ಸಂಪ್ಯದಲ್ಲಿ ನಡೆದಿದೆ.

ಸಂಪ್ಯ ಬೈಲಾಡಿ ನಿವಾಸಿ ಮಂಜಪ್ಪ ಗೌಡರ ಪುತ್ರಿ ನಿಶಾ ಮೃತ ಯುವತಿ.

ನಿಶಾ ಬಿ ಎಮ್ ರವರು ಪುತ್ತೂರು ನಗರರ ಖಾಸಗಿ ಕಾಲೇಜಿನ ಪ್ರಥಮ ವರ್ಷದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಕಳೆದ ಎರಡು ವಾರಗಳ ಹಿಂದೆ ಬಿಹಾರದಲ್ಲಿ ನಡೆದಿದ್ದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ನಿಶಾ ರನ್ನಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಆದರೆ ರನ್ನಿಂಗ್ ರೇಸ್ ನಲ್ಲಿ ಬಹುಮಾನ ಸಿಗದಿದ್ದಕ್ಕೆ ಬೇಸರಗೊಂಡಿದ್ದ ನಿಶಾ ಬಳಿಕ ಖಿನ್ನತೆಗೊಳಗಾಗಿ ತೋಟಕ್ಕೆ ಸಿಂಪಡಿಸುವ ಕೀಟನಾಶವನ್ನ ಸೇವಿಸಿದ್ದಾಳೆ. ಬಳಿಕ ತೀವ್ರ ವಾಂತಿ ಬಂದ ಕಾರಣಕ್ಕೆ ಮನೆಯವರು ವಿಚಾರಿಸಿದಾಗ ಕೀಟನಾಶಕ ಸೇವಿಸಿದ ವಿಚಾರ ಬೆಳಕಿಗೆ ಬಂದಿದೆ. ಕೂಡಲೇ ಆಕೆಯನ್ನು ಮನೆಯವರು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಪುತ್ತೂರಿನಿಂದ ಮಂಗಳೂರಿಗೆ ಕೊಂಡೊಯ್ಯುವಂತೆ ವೈದ್ಯರು ತಿಳಿಸಿದ್ದರು. ಅದರಂತೆ ಕಳೆದ ಒಂದು ವಾರದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಿಶಾ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.

ಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More from the blog

ಲೋಕಸಭಾ ಚುನಾವಣೆ : ಮತಯಂತ್ರಗಳ ಕಮಿಷನಿಂಗ್‌ ಕಾರ್ಯ…. ಸ್ಥಳಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ಭೇಟಿ

ಬಂಟ್ವಾಳ :ಮೊಡಂಕಾಪಿನಲ್ಲಿರುವ ಇನ್ಫೆಂಟ್‌ ಜೀಸಸ್‌ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಈ ದಿನ ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 205 ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಬಳಸಲಾಗುವ ಮತಯಂತ್ರಗಳ ಕಮಿಷನಿಂಗ್‌ ಕಾರ್ಯವು ನಡೆಯಿತು. ಈ ಸಂದರ್ಭದಲ್ಲಿ...

ಯುವಮೋರ್ಚಾ ಬಂಟ್ವಾಳ ವತಿಯಿಂದ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಬಿ. ಸಿ ರೋಡಿನ ರಕ್ತೇಶ್ವರಿ ದೇವಸ್ಥಾನದಲ್ಲಿ ಪ್ರಾರ್ಥನೆ

ಯುವಮೋರ್ಚಾ ಬಂಟ್ವಾಳ ವತಿಯಿಂದ ನರೇಂದ್ರ ಮೋದಿ ಮತೊಮ್ಮೆ ಪ್ರಧಾನಿಯಾಗಲೆಂದು ರಕ್ತೇಶ್ವರಿ ದೇವಸ್ಥಾನ ಬಿ. ಸಿ ರೋಡಿನಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.

ಆಯತಪ್ಪಿ ಬಾವಿಗೆ‌ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ

ಮಂಗಳೂರು: ಬಾವಿಯಿಂದ ನೀರು ಸೇದುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದ ಮಹಿಳೆಯೋರ್ವರನ್ನು ಗುರುವಾರ ಕದ್ರಿ ಅಗ್ನಿಶಾಮಕ ಠಾಣೆಯವರು ರಕ್ಷಿಸಿದ್ದಾರೆ ಬಿಕ್ಕರ್ನಕಟ್ಟೆ ಸಮೀಪದ ನಿವಾಸಿ ಟ್ರೆಸ್ಸಿ ಡಿಸೋಜಾ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ರಕ್ಷಿಸಲ್ಪಟ್ಟ ಮಹಿಳೆ. ಸಂಜೆ 5 ಗಂಟೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರೆ..ಮಹಾರಥೋತ್ಸವ ಕಣ್ಣುಂಬಿಕೊಂಡ ಸಾವಿರಾರು ಭಕ್ತರು

ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆಯಲ್ಲಿ ಎ. ೧೧ರಂದು ಸಂಜೆ ರಥೋತ್ಸವ ನಡೆಯಿತು. ಜಾತ್ರೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ಮಹಾಪೂಜೆಯ ಬಳಿಕ ದೇವರು ರಥಾರೋಹಣಗೊಂಡು ಸಾಂಕೇತಿಕವಾಗಿ ರಥವನ್ನು ಎಳೆಯಲಾಯಿತು. ಮಧ್ಯಾಹ್ನ ರಥಕ್ಕೆ...