Saturday, April 6, 2024

ಅಪಾರ್ಟ್ಮೆಂಟ್​ನಲ್ಲಿ ಚೂರಿಯಿಂದ ಇರಿದುಕೊಂಡು ಹಿರಿಯ ಬ್ಯಾಂಕ್ ಅಧಿಕಾರಿ ಆತ್ಮಹತ್ಯೆ

ಮಂಗಳೂರು: ಚಾಕುವಿನಿಂದ ಇರಿದುಕೊಂಡು ಕರ್ನಾಟಕ ಬ್ಯಾಂಕಿನ ಹಿರಿಯ ಅಧಿಕಾರಿಯೊಬ್ಬರು ಬೋಂದೆಲ್ ನಲ್ಲಿರುವ ಅಪಾರ್ಟ್ ಮೆಂಟ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತಪಟ್ಟಿರುವ ಅಧಿಕಾರಿ ಚೀಫ್ ಕಂಪ್ಲೇಂಟ್ ಆಫೀಸರ್ ಆಗಿದ್ದ ವಾದಿರಾಜ ಆಚಾರ್ಯ ಎಂದು ತಿಳಿದುಬಂದಿದೆ.

ಇನ್ನು ವಾದಿರಾಜ್ ಅವರು ಮನೆಯಲ್ಲಿ ಯಾರೂ ಇಲ್ಲದ ವೇಳೆ ಚಾಕುವಿನಿಂದ ಹೊಟ್ಟೆ ಹಾಗೂ ಕೊರಳಿಗೆ ಚುಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮನೆಮಂದಿ ಬಂದು ನೋಡಿದಾಗ ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಿದರೂ ದಾರಿ ಮಧ್ಯೆ ಮೃತಪಟ್ಟಿದ್ದಾರೆ.

ವಾದಿರಾಜ್ ಅವರು ಪತ್ನಿ, ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಕಮಿಷನರ್ ಅನುಪಮ್ ಅಗ್ರವಾಲ್ ಪ್ರತಿಕ್ರಿಯೆ

ಘಟನೆ ಬಗ್ಗೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ಪ್ರತಿಕ್ರಿಯೆ ನೀಡಿದ್ದು ‘ ಕಾರ್ಕಳ ಮೂಲದ ವಾದಿರಾಜ ಆಚಾರ್ಯ ಅವರು ನಾಲ್ಕು ವರ್ಷದಿಂದ ಮಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರು. ಒಂದು ವರ್ಷದಿಂದ ಇಲ್ಲಿ ಬಾಡಿಗೆ ಮನೆಯಲ್ಲಿದ್ದರು. ಕರ್ನಾಟಕ ಬ್ಯಾಂಕ್ ನಲ್ಲಿ ಚೀಫ್ ಕಂಪ್ಲೇಂಟ್ ಆಫೀಸರ್ ಆಗಿದ್ದರು. ಅವರ ಪತ್ನಿ ಮಕ್ಕಳ ಜತೆ ಶಾಲೆಯಲ್ಲಿ ಪೋಷಕರ ಸಭೆಗೆ ತೆರಳಿದ್ದರು, ಹೀಗಾಗಿ ಒಬ್ಬರೇ ಮನೆಯಲ್ಲಿದ್ದ ವೇಳೆ ಘಟನೆ ನಡೆದಿದೆ.

ಕಾರು ಚಾಲಕ ಮನೆಗೆ ಬಂದು ನೋಡಿದಾಗ ವಾದಿರಾಜ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ತತ್ ಕ್ಷಣ ಅಪಾರ್ಟ್ಮೆಂಟ್ ನಲ್ಲಿದ್ದವರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆಚ್ಚಿನ ಗಾಯವಾಗಿದ್ದರಿಂದ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಜ ಮನೆಯವರು ನೀಡುವ ದೂರಿನ ಮೇಲೆ FIR ದಾಖಲು ಮಾಡುತ್ತೇವೆ. ಮರಣೋತ್ತರ ಪರೀಕ್ಷೆ ನಡೆಸಲಾಗುತ್ತದೆ. ಆ ಬಳಿಕ ಯಾವ ಕಾರಣಕ್ಕೆ ಈ ಸಾವಾಗಿದೆ ಎಂದು ಹೇಳಬಹುದು ಎಂದರು.

ಚಾಕುವಿನಿಂದ ಹೊಟ್ಟೆ ಮತ್ತು ಕುತ್ತಿಗೆ ಮೇಲೆ ಕೊಯ್ದಿರುವ ಗಾಯವಿದೆ. ದೂರಿನ ಆಧಾರದಲ್ಲಿ ತನಿಖೆ ಮಾಡುತ್ತೇವೆ. ಸಿಸಿಟಿವಿ ಫೂಟೇಜ್ ಗಳನ್ನು ಪರಿಶೀಲನೆ ಮಾಡಿದ್ದೇವೆ.ಫೋನ್ ನಲ್ಲಿ ಯಾರೆಲ್ಲಾ ಮಾತನಾಡಿದ್ದಾರೆ ಎಂದು ತನಿಖೆ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

More from the blog

ಕೊಳವೆ ಬಾವಿಗೆ ಬಿದ್ದ 2 ವರ್ಷದ ಕಂದಮ್ಮ : ರಕ್ಷಣೆಗೆ ಅರ್ಧ ಅಡಿಯಷ್ಟೇ ಬಾಕಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ ಮಗು ಸಾತ್ವಿಕ ಸುರಕ್ಷಿತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತಕ್ಕೆ ಬಂದಿದೆ. ಮಗು ಸುರಕ್ಷಿತವಾಗಿದ್ದು, ಕಾರ್ಯಾಚರಣೆ ಆಶಾದಾಯಕವಾಗಿದೆ. 16 ಅಡಿ ಆಳದಲ್ಲಿರುವ ಸಾತ್ವಿಕ್ ರಕ್ಷಣೆಗಾಗಿ 22 ಅಡಿ ಆಳದವರೆಗೆ ಸುರಂಗ...

ಮಿತಿ ಮೀರಿದ ತಾಪಮಾನ : ಖಡಕ್​ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಬಿರು ಬಿಸಿಲು ಹೆಚ್ಚಳವಾಗುತ್ತಿದ್ದು ಮುಂದಿನ 14 ದಿನಗಳ ಕಾಲ ಬಿಸಿಗಾಳಿ ಬೀಸಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ (KSNDMC) ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್​...

ಮನೆಯ ಮಹಡಿಯಿಂದ ಬಿದ್ದು ಬಾಲಕ ಸಾವು

ಬಂಟ್ವಾಳ: ಮನೆಯ ಮಹಡಿಯ ಮೇಲಿಂದ ಕೆಳಗೆ ಬಿದ್ದು ಬಾಲಕನೋರ್ವ ಮೃತಪಟ್ಟ ಘಟನೆ ಎ.‌ ೧ರ ಮುಂಜಾನೆ ನಡೆದಿದೆ. ಬಂಟ್ವಾಳ ಜಕ್ರಿಬೆಟ್ಟು ನಿವಾಸಿ ದಿನೇಶ್ ಪೂಜಾರಿ ಅವರ ಪುತ್ರ ಆದಿಶ್(೧೫) ಮೃತಪಟ್ಟ ಬಾಲಕ. ಆತ ಮನೆಯಲ್ಲಿ ದೊಡ್ಡಮ್ಮನ...

ಮಾಂಸ ಪ್ರಿಯರಿಗೆ ಬೆಲೆ ಏರಿಕೆ ಶಾಕ್.. ಕೋಳಿ ಮಾಂಸದ ದರ ಏರಿಕೆ

ಮಂಗಳೂರು: ಕೋಳಿಮಾಂಸ, ಮೀನಿನ ದರ ಏರುಗತಿ ಯಲ್ಲಿ ಸಾಗುತ್ತಿದ್ದು ಮಾಂಸಾಹಾರ ಪ್ರಿಯರ ಜೇಬಿಗೂ ಕತ್ತರಿ ಬೀಳುವಂತಾಗಿದೆ. ಪ್ರಸ್ತುತ ಕೋಳಿಮಾಂಸಕ್ಕೆ (ವಿದ್‌ ಸ್ಕಿನ್‌) ಕೆ.ಜಿ.ಗೆ ಬ್ರಾಯ್ಲರ್‌ ಕೆಲವು ಕಡೆ 235-240 ರೂ., ಟೈಸನ್‌ 270 ರೂ....