Wednesday, April 17, 2024

ಡಿವೈಎಸ್ಪಿ ಡಾ.ಗಾನಾ.ಪಿ.ಕುಮಾರ್ ವರ್ಗಾವಣೆ

ಪುತ್ತೂರು: ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ ಗಾನಾ ಪಿ ಕುಮಾರ್ ಅವರನ್ನು ಲೋಕಾಯುಕ್ತಕ್ಕೆ ವರ್ಗಾವಣೆಗೊಳಿಸಿ ಸರಕಾರ ಆದೇಶವನ್ನು ಹೊರಡಿಸಿದೆ

ಈ ಹಿಂದೆ ಎರಡು ವರ್ಷಗಳ ಕಾಲ ಡಿವೈಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿದ್ದ ಡಾ.ಗಾನಾ ಕುಮಾರ್‌ ಅವರನ್ನು ಸರಕಾರ ಸಿಐಡಿಗೆ ವರ್ಗಾವಣೆಗೊಳಿಸಿತ್ತು. ಬಳಿಕ ಅವರ ವರ್ಗಾವಣೆಗೊಳಿಸಿ ಎಸ್ಪಿ ಕಚೇರಿಯ ಡಿಸಿಆರ್‌ಬಿ ಡಿವೈಎಸ್ಪಿಯಾಗಿ ನಿಯೋಜಿಸಲಾಗಿತ್ತು. ಪುತ್ತೂರಿನಲ್ಲಿ ನಡೆದ ಬ್ಯಾನರ್ ಪ್ರಕರಣವೊಂದಕ್ಕೆ ಸಂಬಂಧಿಸಿ ಹಿಂದೂ ಸಂಘಟನೆ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆಸಿದ್ದ ಆರೋಪದಲ್ಲಿ ಪುತ್ತೂರಿನ ಆಗಿನ ಡಿವೈಎಸ್ಪಿ ಡಾ ವೀರಪ್ಪ ಹಿರೇಮಠ ಅವರನ್ನು ಕಡ್ಡಾಯ ರಜೆಯಲ್ಲಿ ಕಳುಹಿಸಿದ್ದ ಸಂದರ್ಭದಲ್ಲಿ ಪ್ರಭಾರ ಡಿವೈಎಸ್ಪಿಯಾಗಿ ಡಾ ಗಾನಾ ಪಿ ಕುಮಾರ್ ಅವರನ್ನು ನಿಯೋಜಿಸಲಾಗಿತ್ತು. ಬಳಿಕ ಅವರನ್ನೇ ಪುತ್ತೂರು ಡಿವೈಎಸ್ಪಿಯಾಗಿ ಮುಂದುವರಿಸಲಾಗಿತ್ತು. ಇದೀಗ ಅವರನ್ನು ಲೋಕಾಯುಕ್ತಕ್ಕೆ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ ಎಂದು ತಿಳಿದು ಬಂದಿದೆ.

More from the blog

ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ: ಸುಡುಬಿಸಿಲಿಗೂ ಜಗ್ಗದ ಉತ್ಸಾಹ

ವಿಟ್ಲ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳವಾರ ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಪ್ರಚಾರ ಕಾರ್ಯ ನಡೆಸಿದರು. ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಬಳಿಕ...

ಮಾಜಿ ಸಚಿವ ಜನಾರ್ಧನ ಪೂಜಾರಿ ಅವರ ನಿವಾಸಕ್ಕೆ ತೆರಳಿ ಮತದಾನ ಪ್ರಕ್ರಿಯೆ

ಚುನಾವಣಾ ಆಯೋಗದ ನಿರ್ದೇಶನದಂತೆ ಕಳೆದ ಬಾರಿಯಂತೆ ಸೆಕ್ಟರ್‌ ಅಧಿಕಾರಿಗಳ ನೇತೃತ್ವದಲ್ಲಿ ಮತಗಟ್ಟೆ ಅಧಿಕಾರಿಗಳ ತಂಡ ಮನೆ-ಮನೆಗೆ ತೆರಳಿ ಮತದಾನ ಮಾಡಿಸುತ್ತಿದೆ. ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 205-ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 85...

ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ : ಬಜರಂಗದಳ, ವಿ.ಹಿಂ.ಪರಿಷತ್ ಕಲ್ಲಡ್ಕ ಪ್ರಖಂಡದಿಂದ ಖಂಡನೆ

ಬಂಟ್ವಾಳ: ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ ನಡೆಸಿದ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ಸಂಜೆ ವೇಳೆ ನಡೆದಿದೆ. ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ...

ಲೋಕಸಭಾ ಚುನಾವಣೆ : ಮತಯಂತ್ರಗಳ ಕಮಿಷನಿಂಗ್‌ ಕಾರ್ಯ…. ಸ್ಥಳಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ಭೇಟಿ

ಬಂಟ್ವಾಳ :ಮೊಡಂಕಾಪಿನಲ್ಲಿರುವ ಇನ್ಫೆಂಟ್‌ ಜೀಸಸ್‌ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಈ ದಿನ ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 205 ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಬಳಸಲಾಗುವ ಮತಯಂತ್ರಗಳ ಕಮಿಷನಿಂಗ್‌ ಕಾರ್ಯವು ನಡೆಯಿತು. ಈ ಸಂದರ್ಭದಲ್ಲಿ...