Monday, April 8, 2024

ಗಂಡ ಹೆಂಡತಿ ಜಗಳ ಪತ್ನಿ ಸಾವಿನಲ್ಲಿ ಅಂತ್ಯ ; ಪತಿ ಗಂಭೀರ

ಕಡಬ: ಗಂಡ ಮತ್ತು ಹೆಂಡತಿ ಜಗಳ ವಿಪರೀತ ಮಟ್ಟಕ್ಕೆ ತಿರುಗಿ ಹೆಂಡತಿಯ ಸಾವಿನೊಂದಿಗೆ ಅಂತ್ಯವಾದ ಘಟನೆ ಕಡಬ ತಾಲೂಕಿನ ಕುದ್ಮಾರು ಗ್ರಾಮದ ಚಾಪೆಲ್ಲ ಎಂಬಲ್ಲಿ ನಡೆದಿದೆ

ಕುಸುಮ ಮೃತಪಟ್ಟ ದುರ್ದೈವಿಯಾಗಿದ್ದಾರೆ.

ಕುಸುಮ ಮತ್ತು ಆಕೆಯ ಪತಿ ಸಂಜೀವ ನಡುವೆ ಆಗಾಗ್ಗೆ ಗಲಾಟೆ ನಡೆಯುತ್ತಿತ್ತು. ಅಂತೆಯೇ ಶನಿವಾರ ಕೂಡ ಮಾತಿಗೆ ಮಾತು ಬೆಳೆದಿದೆ. ಕೋಪದ ಭರದಲ್ಲಿ ಇಬ್ಬರು ಕೂಡ ವಿಷ ಸೇವಿಸಿದ್ದಾರೆ.

ಈ ವಿಚಾರ ಸ್ಥಳೀಯರಿಗೆ ತಿಳಿದು ತಕ್ಷಣ ಅವರ ಸಂಬಂಧಿಕರಿಗೆ ವಿಚಾರವನ್ನು ತಿಳಿಸಿದ್ದಾರೆ. ಅವರು ಬಂದು ತಕ್ಷಣ ಅವರನ್ನು ಆಸ್ಪತ್ರೆಗೆ ಸೇರಿಸುವ ಪ್ರಯತ್ನದಲ್ಲಿದ್ದಾಗ ಕುಸುಮ ಸಾವನ್ನಪಿದ್ದಾರೆ.

ಸಂಜೀವ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ.

ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ

More from the blog

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...

ಜಿಲ್ಲಾ ಕಾಂಗ್ರೇಸ್ ಹಿಂದುಳಿದ ವರ್ಗದ ಉಪಾಧ್ಯಕ್ಷ ಪದ್ಮನಾಭ ಸೇವಂತ ಅವರದು, ಆತ್ಮಹತ್ಯೆಯಲ್ಲ, ವ್ಯವಸ್ಥಿತ ಕೊಲೆ ಶಂಕೆ: ಪ್ರಕಾಶ್ ಶೆಟ್ಟಿ ತನಿಖೆಗೆ ಒತ್ತಾಯ

ಬಂಟ್ವಾಳ: ದ.ಕ.ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಪದ್ಮನಾಭ‌ ಸೇವಂತ ಎಂಬವರ ಸಾವಿನ ಸುತ್ತ ಅನುಮಾನಗಳು ವ್ಯಕ್ಯವಾಗಿದ್ದು, ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ ಪ್ರಕರಣ ಎಂದು ಕಂಡು ಬಂದರೂ ಇದನ್ನು ವಿಮರ್ಶೆ ಮಾಡಿದರೆ ಇದೊಂದು ಕೊಲೆ...

ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ವ್ಯಕ್ತಿ ಸಾವು ಸ್ಕೂಟರ್ ನಲ್ಲಿದ್ದ ಯುವತಿ ಗಂಭೀರ

ಬೆಳ್ತಂಗಡಿ : ದ್ವಿಚಕ್ರ ವಾಹನ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ ಘಟನೆ ಗುರುವಾರ ರಾತ್ರಿ ನಡೆದಿದೆ. ಬೆಳ್ತಂಗಡಿ ನಗರದ ಸಂತೆಕಟ್ಟೆ ಬಸ್ ನಿಲ್ದಾಣದ ಮುಂಭಾಗದಲ್ಲಿ...

ನಿಲ್ಲಿಸಿದ್ದ ಲಾರಿಗೆ ಕಾರು ಡಿಕ್ಕಿ: ಕಾರಿನಲ್ಲಿದ್ದವರು ಗಂಭೀರ

ವಿಟ್ಲ: ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರಿಯಲ್ಲಿ ಗುರುವಾರ ರಾತ್ರಿ ಮರ ಸಾಗಾಟ ಲಾರಿಗೆ ಕಾರು ಡಿಕ್ಕಿಯಾಗಿದೆ. ಕಾರು ಲಾರಿಯ ಹಿಂಭಾಗಕ್ಕೆ ಡಿಕ್ಕಿಯಾದ ರಬ್ಬಸಕ್ಕೆ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದವರು...