Saturday, April 6, 2024

ಕಲ್ಲಡ್ಕ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡಚಣೆ ರಸ್ತೆಯಲ್ಲಿ ಕೆಟ್ಟು ನಿಂತ ಎರಡು ಲಾರಿಗಳು: ಸಾಮರ್ಥ್ಯಕ್ಕಿಂತ ಹೆಚ್ಚಿನ ಕೋಕ್ ತುಂಬಿದ ಲಾರಿ,ಕ್ರೇನ್ ಬಳಸಿ ಲಾರಿಯನ್ನು ಬದಿಗೆ ಸರಿಸಿದ ಟ್ರಾಫಿಕ್ ಎಸ್.ಐ.ಸುತೇಶ್

ಬಂಟ್ವಾಳ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಧ್ಯ ಭಾಗದ ಕಲ್ಲಡ್ಕದಲ್ಲಿ ಎರಡು ಲಾರಿಗಳು ಕೆಟ್ಟು ನಿಂತ ಕಾರಣದಿಂದ ವಾಹನಸಂಚಾರಕ್ಕೆ ತೊಡಕು ಉಂಟಾದ ಘಟನೆ ಇಂದು ಮಧ್ಯಾಹ್ನ ವೇಳೆ ನಡೆದಿದೆ.

ಕಲ್ಕಡ್ಕ ಪೇಟೆಯಲ್ಲಿರುವ ಮೀನಿನ ಮಾರುಕಟ್ಟೆಯ ಮುಂಭಾಗದಲ್ಲಿ ಮತ್ತು ನರಹರಿ ಪರ್ವತಕ್ಕೆ ಹೋಗುವ ರಸ್ತೆಯ ಮುಂಭಾಗ ಎರಡು ಲಾರಿಗಳು ಕೆಟ್ಟು ನಿಂತಿತ್ತು.

ಮಂಗಳೂರಿನಿಂದ ಬೆಂಗಳೂರು ಕಡೆಗೆ ಕೋಕ್ ಲೋಡ್ ಕೊಂಡುಹೋಗುವ ಲಾರಿಗಳು ಇದಾಗಿದೆ ಎಂದು ಹೇಳಲಾಗಿದೆ.

ಓವರ್ ಲೋಡ್ ಹಾಕಿದ ಲಾರಿಗಳು ಇದಾಗಿದ್ದು, ಅ ಕಾರಣಕ್ಕಾಗಿ ಲಾರಿಗಳು ಮುಂದೆ ಹೋಗಲಾದೆ ಜಖಂಗೊಂಡಿದೆ ಎಂದು ಹೇಳಲಾಗಿದೆ.

ಹಾಗಾಗಿ ಕಲ್ಲಡ್ಕದಿಂದ ಮೆಲ್ಕಾರ್ ವರೆಗೆ ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.

ಮದುವೆ,ಗೃಹಪ್ರವೇಶ ಸಹಿತ ಅನೇಕ ಕಾರ್ಯಕ್ರಮಗಳು ಇದ್ದ ಕಾರಣಕ್ಕಾಗಿ ರಸ್ತೆಯಲ್ಲಿ ವಾಹನಗಳ ಓಡಾಟ ಕೂಡ ತುಸು ಹೆಚ್ಚಾಗಿತ್ತು. ಎರಡು ಲಾರಿಗಳು ಕೆಟ್ಟು ನಿಂತಿದ್ದರಿಂದ ರಸ್ತೆ ಬ್ಲಾಕ್ ಉಂಟಾಗಿ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದರು.

ಪೇಟೆ ತುಂಬಾ ಅಡ್ಡದಿಡ್ಡಿಯಾಗಿ ವಾಹನಗಳು ಸಂಚಾರ ಮಾಡಿ ಇನ್ನಷ್ಟು ಕಿರಿಕಿರಿ ಉಂಟು ಮಾಡಿದ್ದರು.

ಸ್ಥಳಕ್ಕೆ ಭೇಟಿ ನೀಡಿದ ಟ್ರಾಫಿಕ್ ಎಸ್‌ಐ ಸುತೇಶ್ ಅವರು ಕ್ರೇನ್ ಮೂಲಕ ಲಾರಿಗಳನ್ನು ಬದಿಗೆ ಸರಿಸಿದ ಬಳಿಕ ಸಂಚಾರಕ್ಕೆ ಮುಕ್ತವಾಯಿತು.

More from the blog

ಕೊಳವೆ ಬಾವಿಗೆ ಬಿದ್ದ 2 ವರ್ಷದ ಕಂದಮ್ಮ : ರಕ್ಷಣೆಗೆ ಅರ್ಧ ಅಡಿಯಷ್ಟೇ ಬಾಕಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ ಮಗು ಸಾತ್ವಿಕ ಸುರಕ್ಷಿತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತಕ್ಕೆ ಬಂದಿದೆ. ಮಗು ಸುರಕ್ಷಿತವಾಗಿದ್ದು, ಕಾರ್ಯಾಚರಣೆ ಆಶಾದಾಯಕವಾಗಿದೆ. 16 ಅಡಿ ಆಳದಲ್ಲಿರುವ ಸಾತ್ವಿಕ್ ರಕ್ಷಣೆಗಾಗಿ 22 ಅಡಿ ಆಳದವರೆಗೆ ಸುರಂಗ...

ಮಿತಿ ಮೀರಿದ ತಾಪಮಾನ : ಖಡಕ್​ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಬಿರು ಬಿಸಿಲು ಹೆಚ್ಚಳವಾಗುತ್ತಿದ್ದು ಮುಂದಿನ 14 ದಿನಗಳ ಕಾಲ ಬಿಸಿಗಾಳಿ ಬೀಸಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ (KSNDMC) ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್​...

ಜಿಲ್ಲಾ ಕಾಂಗ್ರೇಸ್ ಹಿಂದುಳಿದ ವರ್ಗದ ಉಪಾಧ್ಯಕ್ಷ ಪದ್ಮನಾಭ ಸೇವಂತ ಅವರದು, ಆತ್ಮಹತ್ಯೆಯಲ್ಲ, ವ್ಯವಸ್ಥಿತ ಕೊಲೆ ಶಂಕೆ: ಪ್ರಕಾಶ್ ಶೆಟ್ಟಿ ತನಿಖೆಗೆ ಒತ್ತಾಯ

ಬಂಟ್ವಾಳ: ದ.ಕ.ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಪದ್ಮನಾಭ‌ ಸೇವಂತ ಎಂಬವರ ಸಾವಿನ ಸುತ್ತ ಅನುಮಾನಗಳು ವ್ಯಕ್ಯವಾಗಿದ್ದು, ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ ಪ್ರಕರಣ ಎಂದು ಕಂಡು ಬಂದರೂ ಇದನ್ನು ವಿಮರ್ಶೆ ಮಾಡಿದರೆ ಇದೊಂದು ಕೊಲೆ...

ಮನೆಯ ಮಹಡಿಯಿಂದ ಬಿದ್ದು ಬಾಲಕ ಸಾವು

ಬಂಟ್ವಾಳ: ಮನೆಯ ಮಹಡಿಯ ಮೇಲಿಂದ ಕೆಳಗೆ ಬಿದ್ದು ಬಾಲಕನೋರ್ವ ಮೃತಪಟ್ಟ ಘಟನೆ ಎ.‌ ೧ರ ಮುಂಜಾನೆ ನಡೆದಿದೆ. ಬಂಟ್ವಾಳ ಜಕ್ರಿಬೆಟ್ಟು ನಿವಾಸಿ ದಿನೇಶ್ ಪೂಜಾರಿ ಅವರ ಪುತ್ರ ಆದಿಶ್(೧೫) ಮೃತಪಟ್ಟ ಬಾಲಕ. ಆತ ಮನೆಯಲ್ಲಿ ದೊಡ್ಡಮ್ಮನ...