Wednesday, April 17, 2024

ರಾಜ್ಯ ಮಟ್ಟದ ಕರಾಟೆ ಪಂದ್ಯಾಟದಲ್ಲಿ ಪ್ರಚನ್ ಪೂಜಾರಿ ಗೆ ದ್ವಿತೀಯ ಸ್ಥಾನ

ಉಪನಿರ್ದೇಶಕರ ಕಾರ್ಯಾಲಯ ಹಾಗೂ ಶಿಕ್ಷಣ ಇಲಾಖೆ ಶಿವಮೊಗ್ಗ ಜಿಲ್ಲೆ ಇಲ್ಲಿ ನಡೆದ 2023-24ನೇ ಸಾಲಿನ ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಸರಕಾರಿ ಅಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಯಾದ ಪ್ರಚನ್ ಪೂಜಾರಿ ದ್ವಿತೀಯ ಸ್ಥಾನವನ್ನು ಪಡೆದು ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿಗೆ ಹಾಗೂ ಶಾಲೆಗೆ ಕೀರ್ತಿಯನ್ನು ತಂದಿರುತ್ತಾನೆ.

ಈ ವಿಜೇತ ವಿದ್ಯಾರ್ಥಿಗೆ ಅಭಿನಂದನೆ ಸಲ್ಲಿಸುತ್ತಾ ಅಧ್ಯಕ್ಷರು, ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ (ರಿ ) ದಡ್ಡಲಕಾಡು, ಮುಖ್ಯಶಿಕ್ಷಕರು ಹಾಗೂ ಶಿಕ್ಷಕ ವೃಂದ, ವಿದ್ಯಾರ್ಥಿ ಹಾಗೂ ಪೂಷಕರು, ಸರಕಾರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ದಡ್ಡಲಕಾಡು , ಬಂಟ್ವಾಳ ತಾಲೂಕು, ದ. ಕ

More from the blog

ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ: ಸುಡುಬಿಸಿಲಿಗೂ ಜಗ್ಗದ ಉತ್ಸಾಹ

ವಿಟ್ಲ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳವಾರ ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಪ್ರಚಾರ ಕಾರ್ಯ ನಡೆಸಿದರು. ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಬಳಿಕ...

ಮಾಜಿ ಸಚಿವ ಜನಾರ್ಧನ ಪೂಜಾರಿ ಅವರ ನಿವಾಸಕ್ಕೆ ತೆರಳಿ ಮತದಾನ ಪ್ರಕ್ರಿಯೆ

ಚುನಾವಣಾ ಆಯೋಗದ ನಿರ್ದೇಶನದಂತೆ ಕಳೆದ ಬಾರಿಯಂತೆ ಸೆಕ್ಟರ್‌ ಅಧಿಕಾರಿಗಳ ನೇತೃತ್ವದಲ್ಲಿ ಮತಗಟ್ಟೆ ಅಧಿಕಾರಿಗಳ ತಂಡ ಮನೆ-ಮನೆಗೆ ತೆರಳಿ ಮತದಾನ ಮಾಡಿಸುತ್ತಿದೆ. ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 205-ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 85...

ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ : ಬಜರಂಗದಳ, ವಿ.ಹಿಂ.ಪರಿಷತ್ ಕಲ್ಲಡ್ಕ ಪ್ರಖಂಡದಿಂದ ಖಂಡನೆ

ಬಂಟ್ವಾಳ: ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ ನಡೆಸಿದ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ಸಂಜೆ ವೇಳೆ ನಡೆದಿದೆ. ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ...

ಲೋಕಸಭಾ ಚುನಾವಣೆ : ಮತಯಂತ್ರಗಳ ಕಮಿಷನಿಂಗ್‌ ಕಾರ್ಯ…. ಸ್ಥಳಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ಭೇಟಿ

ಬಂಟ್ವಾಳ :ಮೊಡಂಕಾಪಿನಲ್ಲಿರುವ ಇನ್ಫೆಂಟ್‌ ಜೀಸಸ್‌ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಈ ದಿನ ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 205 ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಬಳಸಲಾಗುವ ಮತಯಂತ್ರಗಳ ಕಮಿಷನಿಂಗ್‌ ಕಾರ್ಯವು ನಡೆಯಿತು. ಈ ಸಂದರ್ಭದಲ್ಲಿ...