Saturday, April 6, 2024

ಪ್ರಯಾಣಿಕರೇ ಗಮನಿಸಿ…. ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ಸಂಚಾರ ಸಮಯ ಬದಲು

ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ನ. 30ರಿಂದ ಡಿ. 8ರ ವರೆಗೆ ವಿಮಾನ ಹಾರಾಟದ ಸಮಯವನ್ನು ಬದಲಾಯಿಸಿದೆ.

ಐಎಕ್ಸ್ 782 ವಿಮಾನವು ಬೆಂಗಳೂರಿನಿಂದ ಬೆಳಗ್ಗೆ 9.40ಕ್ಕೆ ಆಗಮಿಸಲಿದ್ದು, ಬೆಳಗ್ಗೆ 10.10ಕ್ಕೆ ವಿಮಾನ 678 ಆಗಿ ಬೆಂಗಳೂರಿಗೆ ಹೊರಡಲಿದೆ.

ಕಣ್ಣೂರು-ಬೆಂಗಳೂರು-ಮಂಗಳೂರು- ಬೆಂಗಳೂರು- ತಿರುವನಂತಪುರ ವಲಯದಲ್ಲಿ ಕಾರ್ಯನಿರ್ವಹಿಸುವ ವಿಮಾನ ಐಎಕ್ಸ್ 1795 ಬೆಂಗಳೂರಿನಿಂದ ರಾತ್ರಿ 7.20ಕ್ಕೆ ಬಂದು 7.50ಕ್ಕೆ ವಿಮಾನ ಐಎಕ್ಸ್ 792 ಆಗಿ ಬೆಂಗಳೂರಿಗೆ ಹೊರಡ ಲಿದೆ (ಪ್ರಸ್ತುತ ಸಂಜೆ 7.35 ಮತ್ತು ರಾತ್ರಿ 8.15ಕ್ಕೆ ನಿರ್ಗಮನ). ಬೆಂಗಳೂರಿನಿಂದ ವಾರಾಣಸಿಗೆ ಹೊರಟು ಮಂಗಳೂರಿಗೆ ತೆರಳುವ ಮಾರ್ಗದಲ್ಲಿ ವಿಳಂಬವಾದ ಕಾರಣ ವಿಮಾನ ಯಾನ ಸಂಸ್ಥೆ ಸಮಯವನ್ನು ಬದಲಾಯಿಸಿದೆ.

More from the blog

ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ : ಕಡಬ, ಅಜೆಕಾರಿನಲ್ಲಿ ದಾಖಲೆಯ ಉಷ್ಣಾಂಶ

ಮಂಗಳೂರು: ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ಶಾಕ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಕರಾವಳಿ ಭಾಗದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಎ. 4ರಿಂದ 5ರ...

ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ನಾಮಪತ್ರ ಸಲ್ಲಿಕೆ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಅವರು ಪೂಜೆ...

ದೇವರ ರಥ ಹೋಗುವ ದಾರಿಯಲ್ಲಿ ಇದ್ದ ವಾಹನಗಳನ್ನ ಜಖಂಗೊಳಿಸಿದ ಭಕ್ತರು

ಮುಲ್ಕಿ: ದೇವರ ರಥ ಹೋಗುವ ದಾರಿಯಲ್ಲಿದ್ದ ವಾಹನಗಳನ್ನು ಭಕ್ತರು ಜಖಂ ಗೊಳಿಸಿದ ಘಟನೆ ಮುಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ಜಾತ್ರೆಯಲ್ಲಿ ಇತ್ತೀಚೆಗೆ ನಡೆದಿದ್ದು, ಇದೀಗ ಈ ವಿಡಿಯೋ ವೈರಲ್ ಆಗುತ್ತಿದೆ. ಜಾತ್ರೆಯಲ್ಲಿ ದೇವರ ರಥ ಹೋಗುವ...

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ನಾಮಪತ್ರ ಸಲ್ಲಿಕೆ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪದ್ಮರಾಜ್ ಅರ್.ಪೂಜಾರಿ ಅವರು ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮುಂಭಾಗದಿಂದ ಎ.ಬಿ.ಶೆಟ್ಟಿ ಸರ್ಕಲ್ ವರೆಗೆ...