Saturday, April 6, 2024

“ಮತ್ತೊಮ್ಮೆ ನಳಿನ್ ಕುಮಾರ್ ಕಟೀಲ್ ಅವರನ್ನು ಗೆಲ್ಲಿಸಿ ಕೊಡಿ” – ವಿಜಯೇಂದ್ರ ಘೋಷಣೆ

ಮಂಗಳೂರು: ಬಿಜೆಪಿ ನಿಕಟ ಪೂರ್ವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಮತ್ತೆ ಸಂಸದರನ್ನಾಗಿ ಆಯ್ಕೆ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕರೆ ನೀಡಿರುವುದು ಹೊಸ ರಾಜಕೀಯ ಚರ್ಚೆಗೆ ಕಾರಣವಾಗಿದೆ.

ಮಂಗಳೂರಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಿಜೆಪಿ ಧ್ವಜವನ್ನು ಎತ್ತರಕ್ಕೆ ಹಾರಿಸಿರುವ ಕೀರ್ತಿ ನಮ್ಮ ಕಾರ್ಯಕರ್ತರಿಗೆ ಸಲ್ಲುತ್ತದೆ. ಇದೇ ವೇಳೆ ಪಕ್ಷದ ಕಾರ್ಯಕರ್ತರಿಗೆ ನಾನು ಮನವಿ ಮಾಡುತ್ತೇನೆ, ಮುಂದಿನ ಲೋಕಸಭಾ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡು ನಳಿನ್ ಕುಮಾರ್ ಕಟೀಲ್ ಅವರನ್ನು ಮತ್ತೆ ಸಂಸದರನ್ನಾಗಿ ಆಯ್ಕೆ ಮಾಡಬೇಕು ಎಂದು ಮನವಿ ಮಾಡಿದರು.

ರಾಜಕೀಯ ವಲಯದಲ್ಲಿ ಈ ಬಾರಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಅಭ್ಯರ್ಥಿ ಬದಲಾವಣೆ ಮಾಡಲಾಗುತ್ತದೆ ಎನ್ನುವ ಚರ್ಚೆಯ ನಡುವೆ ವಿಜಯೇಂದ್ರ ಅವರು ನೀಡಿದ ಹೇಳಿಕೆ ಹೊಸ ಚರ್ಚೆ ಹುಟ್ಟು ಹಾಕಿದೆ.

ಸಮಾರಂಭದಲ್ಲಿ ಶಾಸಕರಾದ ವೇದವ್ಯಾಸ್ ಕಾಮತ್, ಡಾ. ಭರತ್ ಶೆಟ್ಟಿ, ಉಮಾನಾಥ್ ಕೋಟ್ಯಾನ್, ರಾಜೇಶ್ ನಾಯ್ಕ್, ಹರೀಶ್ ಪೂಂಜ, ಕು.ಭಾಗೀರಥಿ ಮುರುಳ್ಯ, ಜಿಲ್ಲಾಧ್ಯಕ್ಷ ಸುದರ್ಶನ್, ಮೇಯರ್ ಸುಧೀರ್ ಶೆಟ್ಟಿ, ಚಲನಚಿತ್ರನಟಿ ತಾರಾ ಅನುರಾಧಾ, ಮೋನಪ್ಪ ಭಂಡಾರಿ, ಉದಯಕುಮಾರ್ ಶೆಟ್ಟಿ, ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಮುಖಂಡರು ಮತ್ತು ಕಾರ್ಯಕರ್ತರು ಸಭೆಯಲ್ಲಿ ಹಾಜರಿದ್ದರು.

 

More from the blog

ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ : ಕಡಬ, ಅಜೆಕಾರಿನಲ್ಲಿ ದಾಖಲೆಯ ಉಷ್ಣಾಂಶ

ಮಂಗಳೂರು: ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ಶಾಕ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಕರಾವಳಿ ಭಾಗದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಎ. 4ರಿಂದ 5ರ...

ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ನಾಮಪತ್ರ ಸಲ್ಲಿಕೆ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಅವರು ಪೂಜೆ...

ದೇವರ ರಥ ಹೋಗುವ ದಾರಿಯಲ್ಲಿ ಇದ್ದ ವಾಹನಗಳನ್ನ ಜಖಂಗೊಳಿಸಿದ ಭಕ್ತರು

ಮುಲ್ಕಿ: ದೇವರ ರಥ ಹೋಗುವ ದಾರಿಯಲ್ಲಿದ್ದ ವಾಹನಗಳನ್ನು ಭಕ್ತರು ಜಖಂ ಗೊಳಿಸಿದ ಘಟನೆ ಮುಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ಜಾತ್ರೆಯಲ್ಲಿ ಇತ್ತೀಚೆಗೆ ನಡೆದಿದ್ದು, ಇದೀಗ ಈ ವಿಡಿಯೋ ವೈರಲ್ ಆಗುತ್ತಿದೆ. ಜಾತ್ರೆಯಲ್ಲಿ ದೇವರ ರಥ ಹೋಗುವ...

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ನಾಮಪತ್ರ ಸಲ್ಲಿಕೆ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪದ್ಮರಾಜ್ ಅರ್.ಪೂಜಾರಿ ಅವರು ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮುಂಭಾಗದಿಂದ ಎ.ಬಿ.ಶೆಟ್ಟಿ ಸರ್ಕಲ್ ವರೆಗೆ...