Saturday, April 6, 2024

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಶಾಸಕ ಬಿ.ವೈ ವಿಜಯೇಂದ್ರ ನೇಮಕ

ಹೊಸದಿಲ್ಲಿ: ನೂತನ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಸಿಎಂ ಬಿಎಸ್​ವೈ ಅವರ ಪುತ್ರ ಹಾಗೂ ಶಾಸಕ ಬಿ.ವೈ ವಿಜಯೇಂದ್ರ ಅವರನ್ನು ನೇಮಕ ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಬಿ.ವೈ ವಿಜಯೇಂದ್ರ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ನಳಿನ್ ಕುಮಾರ್ ಕಟೀಲ್ ಅವರ ಅಧಿಕಾರಾವಧಿ ಮುಗಿದರೂ ಈ ಸ್ಥಾನಕ್ಕೆ ಹೊಸ ನೇಮಕಾತಿ ಆಗಿರಲಿಲ್ಲ. ವಿಧಾನಸಭೆ ಚುನಾವಣೆಯಲ್ಲಿ ಸೋಲನುಭವಿಸಿದ ಬಳಿಕ ಹೊಸ ನೇಮಕಾತಿಯತ್ತ ಬಿಜೆಪಿ ವರಿಷ್ಠರು ಮನ ಮಾಡಿರಲಿಲ್ಲ.

ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶೋಭಾ ಕರಾಂದ್ಲಾಜೆ, ವಿ.ಸೋಮಣ್ಣ, ಸಿ.ಟಿ ರವಿ, ಆರ್.ಅಶೋಕ್ ಮುಂತಾದವರ ಹೆಸರು ಕೇಳಿಬಂದಿತ್ತು. ಆದರೆ ಕೊನೆಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿದ್ದ ಬಿ.ವೈ ವಿಜಯೇಂದ್ರ ಅವರ ನೇಮಕವಾಗಿದೆ. ತಕ್ಷಣದಿಂದ ಬರುವಂತೆ ನೇಮಕ ಮಾಡಲಾಗಿದೆ.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸಾವು ಗೆದ್ದು ಬಂದ ಸಾತ್ವಿಕ್ ; ಸತತ 20 ಗಂಟೆಗಳ ಕಾರ್ಯಾಚರಣೆ ಯಶಸ್ವಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ 2 ವರ್ಷದ ಕಂದ ಸಾತ್ವಿಕ್​​ನನ್ನು ಕೊನೆಗೂ ರಕ್ಷಣಾ ಪಡೆಯ ಸಿಬ್ಬಂದಿ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇಂಡಿಯ ಲಚ್ಯಾನ ಗ್ರಾಮದ ತೋಟದಲ್ಲಿ ಆಟವಾಡುತ್ತಿದ್ದಾಗ ಮಗು ಕೊಳವೆ ಬಾವಿಗೆ ಬಿದ್ದಿತ್ತು. ಈ ಸಂಬಂಧ...

ಕೊಳವೆ ಬಾವಿಗೆ ಬಿದ್ದ 2 ವರ್ಷದ ಕಂದಮ್ಮ : ರಕ್ಷಣೆಗೆ ಅರ್ಧ ಅಡಿಯಷ್ಟೇ ಬಾಕಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ ಮಗು ಸಾತ್ವಿಕ ಸುರಕ್ಷಿತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತಕ್ಕೆ ಬಂದಿದೆ. ಮಗು ಸುರಕ್ಷಿತವಾಗಿದ್ದು, ಕಾರ್ಯಾಚರಣೆ ಆಶಾದಾಯಕವಾಗಿದೆ. 16 ಅಡಿ ಆಳದಲ್ಲಿರುವ ಸಾತ್ವಿಕ್ ರಕ್ಷಣೆಗಾಗಿ 22 ಅಡಿ ಆಳದವರೆಗೆ ಸುರಂಗ...

ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ

ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರು ಬುಧವಾರ ನಾಮಪತ್ರ ಸಲ್ಲಿಸಿದರು. ಇನ್ನು ಕೋಟ ಶ್ರೀನಿವಾಸ್ ಪೂಜಾರಿ ಅವರು ನಾಮಪತ್ರ ಸಲ್ಲಿಸುವ ಮುನ್ನ ಪಕ್ಷದ ಕಾರ್ಯಕರ್ತರ ಬೃಹತ್‌ ಸಮಾವೇಶ...