Wednesday, April 17, 2024

ಬಿಜೆಪಿ ನೂತನ‌ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಅಭಿನಂದನೆ ಸಲ್ಲಿಸಿದ ಸಂಸದ ನಳಿನ್ ಕುಮಾರ್ ಕಟೀಲು

ಮಂಗಳೂರು: ರಾಜ್ಯ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಿ.ವೈ.ವಿಜಯೇಂದ್ರರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ನಿರ್ಗಮಿತ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬಿಜೆಪಿ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಪಕ್ಷದ ಕಾರ್ಯಕರ್ತರಲ್ಲಿ ಹೊಸ ಹುರುಪು ಬಂದಿದೆ. ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷದ ಆಡಳಿತ ವೈಫಲ್ಯಗಳು ಕಂಡುಬರುತ್ತಿವೆ. ಕಳೆದ ಆರು ತಿಂಗಳ ಅವಧಿಯಲ್ಲಿ ಅಭಿವೃದ್ಧಿ ಕಾರ್ಯಗಳು ಆಗಿಲ್ಲ. ಭ್ರಷ್ಟಾಚಾರ ತಾಂಡವವಾಡುತ್ತಿದೆ. ಇದೆಲ್ಲದರ ವಿರುದ್ಧ ಹೋರಾಟ ಕೈಗೆತ್ತಿಕೊಂಡು ಪಾರ್ಟಿಯನ್ನು ತಳಮಟ್ಟದಿಂದ ಮತ್ತೆ ಸಂಘಟನೆ ಮಾಡುವ ಶಕ್ತಿ ವಿಜಯೇಂದ್ರರಿಗೆ ಇದೆ. ಜೊತೆಯಾಗಿ ಪಾರ್ಟಿಯನ್ನು ಕಟ್ಟಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳಿದರು.

ಕಳೆದ ನಾಲ್ಕು ವರ್ಷ ಅವಧಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷನಾಗಿದ್ದಕ್ಕೆ ನನಗೆ ತೃಪ್ತಿ ಇದೆ. ಕರಾವಳಿಯಿಂದ ಬಂದವನು ರಾಜ್ಯ ಏನು ಸುತ್ತುತ್ತಾನೆ ಅನ್ನೋದಕ್ಕೆ ಅಪವಾದವಾಗಿ ರಾಜ್ಯ ಸುತ್ತಿ ಸಂಘಟನೆ ಮಾಡಿದ್ದೇನೆ. ಎಲ್ಲಾ ಹಿರಿಯರ ಮಾರ್ಗದರ್ಶನದಲ್ಲಿ ರಾಜ್ಯದ ಜವಾಬ್ದಾರಿಯನ್ನು ನಿಭಾಯಿಸಿದ್ದೇನೆ ಎಂದರು. ಇದೇ ವೇಳೆ ರಾಜಕೀಯದಿಂದ ನಿವೃತ್ತಿ ಪಡೆಯುತ್ತೀರಾ ಎಂಬ ಪ್ರಶ್ನೆಗೆ ನಗುತ್ತಾ ಸುಮ್ಮನಾದರು.

More from the blog

ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ: ಸುಡುಬಿಸಿಲಿಗೂ ಜಗ್ಗದ ಉತ್ಸಾಹ

ವಿಟ್ಲ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳವಾರ ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಪ್ರಚಾರ ಕಾರ್ಯ ನಡೆಸಿದರು. ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಬಳಿಕ...

ಮಾಜಿ ಸಚಿವ ಜನಾರ್ಧನ ಪೂಜಾರಿ ಅವರ ನಿವಾಸಕ್ಕೆ ತೆರಳಿ ಮತದಾನ ಪ್ರಕ್ರಿಯೆ

ಚುನಾವಣಾ ಆಯೋಗದ ನಿರ್ದೇಶನದಂತೆ ಕಳೆದ ಬಾರಿಯಂತೆ ಸೆಕ್ಟರ್‌ ಅಧಿಕಾರಿಗಳ ನೇತೃತ್ವದಲ್ಲಿ ಮತಗಟ್ಟೆ ಅಧಿಕಾರಿಗಳ ತಂಡ ಮನೆ-ಮನೆಗೆ ತೆರಳಿ ಮತದಾನ ಮಾಡಿಸುತ್ತಿದೆ. ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 205-ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 85...

ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ

ಕನ್ನಡದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ನಿಧನರಾಗಿದ್ದಾರೆ. 81 ವರ್ಷದ ದ್ವಾರಕೀಶ್ ಅವರು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ದ್ವಾರಕೀಶ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ಇವರು1942 ಆಗಸ್ಟ್ 19ರಂದು ಮೈಸೂರು...

ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ : ಬಜರಂಗದಳ, ವಿ.ಹಿಂ.ಪರಿಷತ್ ಕಲ್ಲಡ್ಕ ಪ್ರಖಂಡದಿಂದ ಖಂಡನೆ

ಬಂಟ್ವಾಳ: ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ ನಡೆಸಿದ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ಸಂಜೆ ವೇಳೆ ನಡೆದಿದೆ. ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ...