Friday, April 12, 2024

8ನೇ ತರಗತಿ ಬಾಲಕ ನಾಪತ್ತೆ : ಪತ್ತೆಗೆ ಮನವಿ

ಬೆಳ್ಳಾರೆ : ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮದ ಕುಂಡಡ್ಕ ಹನೀಪ್ ಇಂದ್ರಾಜೆ ಅವರ ಪುತ್ರ, ತಲಪಾಡಿ ಬಿಲಾಲ್ ಮಸೀದಿಯ ವಿದ್ಯಾರ್ಥಿ ಅಬೂಬಕ್ಕರ್ ಅಬೀಲ್ ಎಂಬ ಬಾಲಕ ನಾಪತ್ತೆಯಾಗಿದ್ದಾನೆ.

ಈತ ತಲಪಾಡಿಯ ಬಿಲಾಲ್ ಮಸೀದಿಯಲ್ಲಿ ಮದ್ರಸ ಶಿಕ್ಷಣದ ಜತೆಗೆ ಶಾಲಾ ಶಿಕ್ಷಣ ಪಡೆಯುತಿದ್ದ. ಎಂಟನೇ ತರಗತಿಯ ವಿದ್ಯಾರ್ಥಿಯಾಗಿರುವ ಈತ ಗುರುವಾರ ಸಂಜೆ ಶಾಲೆಯಿಂದ ಮಸೀದಿಗೆ ಬಂದಿದ್ದು, ಅಲ್ಲಿ ಅಂಗಡಿಗೆ ಹೋಗಿ ಬರುವುದಾಗಿ ಹೇಳಿ ಹೋದವನು ಮರಳಿ ಬಂದಿಲ್ಲ. ಪೋಷಕರು ಉಳ್ಳಾಲ ಠಾಣೆಯಲ್ಲಿ ದೂರು ನೀಡಿದ್ದು ಹುಡುಕಾಟ ನಡೆಸುತ್ತಿದ್ದಾರೆ.

ಗೋಧಿ ಮೈಬಣ್ಣ ಹೊಂದಿದ್ದು ಎತ್ತರ ನಾಲ್ಕೂವರೆ ಅಡಿ ಉದ್ದವಿದ್ದು ಕಾಣಲು ಸೌಮ್ಯ ಸ್ವಭಾವದ ಬಾಲಕನಾಗಿದ್ದು ಯಾರಾದರೂ ಕಂಡು ಬಂದಲ್ಲಿ ತಕ್ಷಣ 9731293268, 9686123077 ಕರೆ ಮಾಡುವಂತೆ ಮನೆಯವರು ವಿನಂತಿಸಿಕೊಂಡಿದ್ದಾರೆ.

More from the blog

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರೆ..ಮಹಾರಥೋತ್ಸವ ಕಣ್ಣುಂಬಿಕೊಂಡ ಸಾವಿರಾರು ಭಕ್ತರು

ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆಯಲ್ಲಿ ಎ. ೧೧ರಂದು ಸಂಜೆ ರಥೋತ್ಸವ ನಡೆಯಿತು. ಜಾತ್ರೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ಮಹಾಪೂಜೆಯ ಬಳಿಕ ದೇವರು ರಥಾರೋಹಣಗೊಂಡು ಸಾಂಕೇತಿಕವಾಗಿ ರಥವನ್ನು ಎಳೆಯಲಾಯಿತು. ಮಧ್ಯಾಹ್ನ ರಥಕ್ಕೆ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...

300 ರೂ. ಗಡಿಯತ್ತ ಹಸಿ ಕೊಕ್ಕೊ… 900 ರೂ. ಗಡಿಯತ್ತ ಒಣ ಕೊಕ್ಕೊ

ಪುತ್ತೂರು: ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಹಸಿ ಕೊಕ್ಕೊ, ಒಣ ಕೊಕ್ಕೊ ಧಾರಣೆ ಮತ್ತಷ್ಟು ಜಿಗಿದಿದ್ದು, ಹೊರ ಮಾರುಕಟ್ಟೆಯಲ್ಲಿಯೂ ಅತ್ಯಧಿಕ ದರ ದಾಖಲಾಗಿದೆ. ಒಣ ಕೊಕ್ಕೊ 900 ರೂ. ಗಡಿಯತ್ತ, ಹಸಿ ಕೊಕ್ಕೊ 300 ರೂ....